CBSE ನೀಟ್ ಫಲಿತಾಂಶ ಪ್ರಕಟ, ಚೆಕ್ ಮಾಡುವುದು ಹೇಗೆ?
ನವದೆಹಲಿ, ಜೂನ್ 23: ನ್ಯಾಷನಲ್ ಎಲಿಜಿಬಿಲಿಟಿ ಕಂ ಎಂಟ್ರನ್ಸ್ ಟೆಸ್ಟ್ (NEET) 2017ರ ಫಲಿತಾಂಶವನ್ನು ಶುಕ್ರವಾರ(ಜೂನ್ 23)ದಂದು ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಕ್ಸಾಮಿನೇಷನ್ (ಸಿಬಿಎಸ್ ಇ) ಪ್ರಕಟಿಸಿದೆ. ರಾಷ್ಟ್ರೀಯ ಮಟ್ಟದ ಈ ಪರೀಕ್ಷೆಯನ್ನು ಎಂಬಿಬಿಎಸ್ ಅಥವಾ ಬಿಡಿಎಸ್ ನ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ cbseresults.nic.in ಮತ್ತು cbseneet.nic.inನಲ್ಲಿ ನೋಡಬಹುದು.
NEET 2017ರ ಪದವಿ ಪೂರ್ವ ವೈದ್ಯಕೀಯ ಕೋರ್ಸ್ ಗಳ ಫಲಿತಾಂಶವನ್ನು ಪ್ರಕಟಿಸುವುದಕ್ಕೆ ಸಿಬಿಎಸ್ ಇಗೆ ಇತ್ತೀಚೆಗೆ ಅನುಮತಿ ಸಿಕ್ಕಿತ್ತು. ಫಲಿತಾಂಶ ಪ್ರಕಟಿಸುವುದರ ವಿರುದ್ಧದ ಯಾವುದೇ ಅರ್ಜಿಯನ್ನು ಹೈಕೋರ್ಟ್ ಗಳು ಪುರಸ್ಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

* cbseresults.nic.in ಅಥವಾ results.gov.in ಗೆ ಭೇಟಿ ಕೊಡಿ
* CBSE NEET UG Result 2017 ಎಂಬುದರ ಮೇಲೆ ಕ್ಲಿಕ್ ಮಾಡಿ. ಮತ್ತೊಂದು ಪುಟಕ್ಕೆ ನಿಮ್ಮನ್ನು ಕರೆದೊಯ್ಯಲಾಗುವುದು.
* ಅಪ್ಲಿಕೇಷನ್ ನಂಬರ್, ರೋಲ್ ನಂಬರ್, ಹುಟ್ಟಿದ ದಿನಾಂಕ ಸೇರಿದಂತೆ ಪ್ರಮುಖ ಅಂಶಗಳನ್ನು ದಾಖಲಿಸಿ.
* ನಿಮ್ಮ ಸ್ಕ್ರೀನ್ ಮೇಲೆ ಬರುವ ಫಲಿತಾಂಶವನ್ನು ವೀಕ್ಷಿಸಿ, ಸೇವ್ ಮಾಡಿಕೊಳ್ಳಿ ಹಾಗೂ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಎಂಬಿಬಿಎಸ್ ಹಾಗೂ ಬಿಡಿಎಸ್ ಪ್ರವೇಶಕ್ಕೆ ಐವತ್ತಾರು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ನೀಟ್ ಪರೀಕ್ಷೆ ಮೇ 7ರಂದು ನಡೆದಿತ್ತು. ದೇಶದಾದ್ಯಂತ 11 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮರಾಠಿ, ಕನ್ನಡ, ಬೆಂಗಾಲಿ, ಅಸ್ಸಾಮಿ, ಗುಜರಾತಿ ಮತ್ತು ಒಡಿಯಾ ಸೇರಿ ಹತ್ತು ಪ್ರಾದೇಶ್ಸಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications