NEET SS 2025: ಕೌನ್ಸೆಲಿಂಗ್ ತಾತ್ಕಾಲಿಕ ಸ್ಥಗಿತ, ಮೇ 25ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

NEET-UG 2026: ಮೇ.3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ನೀಟ್ ಪರೀಕ್ಷೆಯನ್ನು ಈ ಬಾರಿ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವು ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಇದೀಗ ನೀಟ್‌ನಲ್ಲಿ ಮತ್ತೊಂದು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಿದೆ.

ಇದೀಗ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಸೂಪರ್ ಸ್ಪೆಷಾಲಿಟಿ (NEET SS) 2025 ಪರೀಕ್ಷೆಗೆ ಸಂಬಂಧಿಸಿದ ಬಾಕಿ ಇರುವ ಕಾನೂನು ಸಮಸ್ಯೆಯನ್ನು ಸುಪ್ರೀಂ ಕೋರ್ಟ್ ಮೇ 25 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂದು ಹೇಳಲಾಗಿದೆ. ಏಕೆಂದರೆ ಸೂಪರ್ ಸ್ಪೆಷಾಲಿಟಿ ಆಕಾಂಕ್ಷಿಗಳು ಸುತ್ತಿನ 2 ಕೌನ್ಸೆಲಿಂಗ್‌ಗಾಗಿ ಕಾಯುತ್ತಿದ್ದಾರೆ.

NEET SS 2025

ಈ ವಿಷಯವನ್ನು ಮೊದಲು ಜುಲೈಗೆ ನಿಗದಿಪಡಿಸಲಾಗಿದ್ದರೂ, ಇದೀಗ ಅದನ್ನು ಸುಪ್ರೀಂ ಕೋರ್ಟ್ ಮೇ 25 ಮುಂದೂಡಿದೆ. ಏತನ್ಮಧ್ಯೆ, ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA) ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಚಿಂತಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ FORDA ದ ಪ್ರಧಾನ ಕಾರ್ಯದರ್ಶಿ ಡಾ. ಮೀಟ್ ಘೋನಿಯಾ ಅವರು, ಈ ವಿಚಾರವು DGHS ಹಂತದಲ್ಲಿ ಚರ್ಚೆಯಲ್ಲಿದೆ. ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ವೈದ್ಯಕೀಯ ಸಮಾಲೋಚನಾ ಸಮಿತಿ (MCC) ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಕಾನೂನು ವಿಷಯವನ್ನು ಉಲ್ಲೇಖಿಸಿ, NEET SS ಕೌನ್ಸೆಲಿಂಗ್ 2025 ರ ಸುತ್ತಿನ 2 ನೇ ಸುತ್ತಿನ ಆಯ್ಕೆ ಭರ್ತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿತ್ತು.

ತಮಿಳುನಾಡಿನ ಸೇವಾ ಅವಧಿಯಲ್ಲಿರುವ ಸೀಟುಗಳನ್ನು ಅಖಿಲ ಭಾರತ ಕೋಟಾ (AIQ) ಪೂಲ್‌ಗೆ ಹಿಂತಿರುಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುವಾಣಿ ಮತ್ತು ಇತರರು ವಿರುದ್ಧ ತಮಿಳುನಾಡು ರಾಜ್ಯ (W.P. ಸಂಖ್ಯೆ 415/2026) ಪ್ರಕರಣ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ಎಸ್‌ಎಸ್ ಕೌನ್ಸೆಲಿಂಗ್ 2025ರ ಎರಡನೇ ಸುತ್ತಿನ ಆಯ್ಕೆ ಭರ್ತಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ ಎನ್ನಲಾಗಿದೆ. ಎಸ್‌ಎಸ್ ಕೌನ್ಸೆಲಿಂಗ್ 2025ರ ಸುತ್ತು-2ರಲ್ಲಿ ಭಾಗವಹಿಸುತ್ತಿರುವ ಎಲ್ಲಾ ಅಭ್ಯರ್ಥಿಗಳ ಗಮನಕ್ಕೆ ಈ ವಿಷಯವನ್ನು ತರಲಾಗುತ್ತಿದ್ದು, NEET SS ಕೌನ್ಸೆಲಿಂಗ್ 2025ರ ವೇಳಾಪಟ್ಟಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು MCC ವೆಬ್‌ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದರ ಪರಿಣಾಮವಾಗಿ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಪ್ರವೇಶಗಳ ಕೌನ್ಸೆಲಿಂಗ್ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದಕ್ಕೂ ಮುನ್ನ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (FAIMA) ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ MCCಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಕೌನ್ಸೆಲಿಂಗ್ ವಿಳಂಬವಾಗುತ್ತಿರುವುದರಿಂದ ವೈದ್ಯಕೀಯ ಅಭ್ಯರ್ಥಿಗಳು ತೀವ್ರ ತೊಂದರೆ, ನಿರುದ್ಯೋಗ ಹಾಗೂ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು FAIMA ಹೇಳಿದೆ. ಮೊದಲ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಂಡಿದ್ದರೂ, ಎರಡನೇ ಸುತ್ತಿನ ಕೌನ್ಸೆಲಿಂಗ್ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಪದೇ ಪದೇ ಮುಂದೂಡಲ್ಪಡುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+