ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

8 ಭಾಷೆಯಲ್ಲಿ ನೀಟ್ ಪರೀಕ್ಷೆ, ಕನ್ನಡ ವಿದ್ಯಾರ್ಥಿಗಳಿಗೆ ಯಾಕೀ ಶಿಕ್ಷೆ?

|
Google Oneindia Kannada News

ನವದೆಹಲಿ, ಡಿಸೆಂಬರ್ 22: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಇನ್ನು ಮುಂದೆ ಎಂಟು ಭಾಷೆಗಳಲ್ಲಿ ನಡೆಯುತ್ತದೆ. ಹಿಂದಿ, ಇಂಗ್ಲಿಷ್, ಅಸ್ಸಾಮಿ, ಬೆಂಗಾಲಿ, ಗುಜರಾತಿ, ತಮಿಳು ಮತ್ತು ತೆಲುಗಿನಲ್ಲಿ ನಡೆಯುತ್ತವೆ. 2017-18ರ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದೆ.

ಅದರೆ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿಲ್ಲ. ಮಲಯಾಳಂ ಹಾಗೂ ಕನ್ನಡ ಎರಡೂ ಭಾಷೆಗಳು ಇದರಿಂದ ಹೊರತಾಗಿವೆ. 'ನೀಟ್' ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ಅಖಿಲ ಭಾರತ ಮಟ್ಟದಲ್ಲಿ ಸರಕಾರಿ ಹಾಗೂ ಇತರೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕೆ ಅರ್ಹತೆ ಪಡೆಯುತ್ತಾರೆ.

ಅವರು ಈಗ ನಿಗದಿಪಡಿಸಿದ ಯಾವ ಭಾಷೆಯಲ್ಲೇ ಪರೀಕ್ಷೆ ಬರೆಯಬಹುದು. ಆದರೆ ಇತರೆ ಮಾನದಂಡ ಪೂರೈಸಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ. ನೀಟ್ ಪರೀಕ್ಷೆ ಜಾರಿಗೆ ಕಳೆದ ಮೇ ತಿಂಗಳಲ್ಲಿ ಹದಿನೆಂಟು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಮತ್ತು ಕಾರ್ಯದರ್ಶಿಗಳ ಸಭೆ ನಡೆಸಿದ್ದರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ.

NEET to be held in 8 languages, no chance to Kannada

ಆಯಾ ರಾಜ್ಯದ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಜಂಟಿ ಕಾರ್ಯದರ್ಶಿ ಎ.ಕೆ.ಸಿಂಘಾಲ್ ಹೇಳಿದ್ದಾರೆ. ಹಾಗಿದ್ದರೆ ಈ ಅನುಕೂಲ ಕರ್ನಾಟಕದ ವಿದ್ಯಾರ್ಥಿಗಳಿಗೆ ಏಕಿಲ್ಲ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಈ ನಿರ್ಧಾರದ ಬಗ್ಗೆ ಶಾಸಕ ಸಿ.ಟಿ.ರವಿ ಅವರನ್ನು ಒನ್ಇಂಡಿಯಾ ಕನ್ನಡ ಪ್ರಶ್ನಿಸಿದಾಗ, ಕರ್ನಾಟಕ ಹಾಗೂ ಕೇರಳದಲ್ಲಿ ಇಂಗ್ಲಿಷ್ ಪ್ರಭಾವ ಹೆಚ್ಚಿದೆ ಆದ್ದರಿಂದ ಈ ಎರಡೂ ಭಾಷೆಗಳನ್ನು ಕೈ ಬಿಟ್ಟಿರಬಹುದು. ಆದರೆ ಈ ಬಗ್ಗೆ ಅರೋಗ್ಯ ಸಚಿವರ ಜತೆಗೆ ಮಾತನಾಡುತ್ತೇವೆ. ಕನ್ನಡದಲ್ಲೂ ಪರೀಕ್ಷೆ ನಡೆಸುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.

English summary
The National Eligibility cum Entrance Test (NEET) for admission in medical colleges will be held in eight languages- Hindi, English, Assamese, Bengali, Gujarati, Marathi, Tamil and Telugu- for the academic year 2017-18. But Kannada and Malayalam left over.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X