NEET-UG 2026 ರದ್ದು: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಸಿಬಿಐ ತನಿಖೆ

NEET-UG 2026: ಭಾರತದಲ್ಲಿ ಮೇ 12ರ ಮಂಗಳವಾರ ಮಹತ್ವದ ಬೆಳವಣಿಗೆ ನಡೆದಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇದೇ ಮೇ 3 ರಂದು ನಡೆಸಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ - ಪದವಿಪೂರ್ವ (NEET-UG) 2026ಯನ್ನು ರದ್ದುಗೊಳಿಸಿದೆ. ಅಲ್ಲದೆ ಸಿಬಿಐ ತನಿಖೆಗೂ ಆದೇಶಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪರೀಕ್ಷಾ ಸಂಸ್ಥೆಯು ಮೇ 3, 2026 ರಂದು ನಡೆಸಲಾಗಿದ್ದ NEET (UG) 2026 ಪರೀಕ್ಷೆಯನ್ನು ರದ್ದುಗೊಳಿಸುವುದು ಹಾಗೂ ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದೆ.

NEET-UG 2026

"ಎನ್‌ಟಿಎಗೆ ಲಭಿಸಿದ ಮಾಹಿತಿ ಹಾಗೂ ಕಾನೂನು ಜಾರಿ ಸಂಸ್ಥೆಗಳು ಹಂಚಿಕೊಂಡಿರುವ ತನಿಖಾ ವಿವರಗಳ ಆಧಾರದ ಮೇಲೆ ಪ್ರಸ್ತುತ ಪರೀಕ್ಷಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಮರುಪರೀಕ್ಷೆಯ ದಿನಾಂಕಗಳು ಮತ್ತು ಮರುಜಾರಿಗೊಳ್ಳುವ ಪ್ರವೇಶ ಪತ್ರಗಳ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಏಜೆನ್ಸಿಯ ಅಧಿಕೃತ ವೇದಿಕೆಗಳ ಮೂಲಕ ಪ್ರಕಟಿಸಲಾಗುತ್ತದೆ" ಎಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

NEET-UG 2026: ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಿಬಿಐ ತನಿಖೆ

ಇನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ - ಪದವಿಪೂರ್ವ (NEET-UG) 2026ಯ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ಭಾರತ ಸರ್ಕಾರವು ಈ ವಿಷಯವನ್ನು ಕೇಂದ್ರ ತನಿಖಾ ದಳಕ್ಕೆ (CBI) ಕೊಡಲು ನಿರ್ಧರಿಸಿದೆ ಎಂದು ಸಂಸ್ಥೆ ಹೇಳಿದೆ. ಅಲ್ಲದೆ ಎನ್‌ಟಿಎ ಸಂಸ್ಥೆಯು ಸಿಬಿಐಗೆ ಸಂಪೂರ್ಣ ಸಹಕಾರ ನೀಡುತ್ತದೆ ಮತ್ತು ವಿಚಾರಣೆಗೆ ಅಗತ್ಯವಿರುವ ಎಲ್ಲ ವಿವರಗಳು, ದಾಖಲೆಗಳು ಮತ್ತು ಸಹಾಯವನ್ನು ಒದಗಿಸಲಿದೆ ಎಂದು ಹೇಳಲಾಗಿದೆ.

ಪರಿಷ್ಕೃತ ಪರೀಕ್ಷಾ ದಿನಾಂಕಗಳು ಮತ್ತು ಹೊಸ ಪ್ರವೇಶ ಪತ್ರಗಳ ವೇಳಾಪಟ್ಟಿಯನ್ನು ಎನ್‌ಟಿಎ ತನ್ನ ಅಧಿಕೃತ ವೆಬ್‌ಸೈಟ್ ಮತ್ತು ಅಧಿಕೃತ ಮಾಧ್ಯಮಗಳ ಮೂಲಕ ಮಾತ್ರ ಪ್ರಕಟಿಸುವುದಾಗಿ ಹೇಳಿದೆ. ಮುಂದುವರಿದು ಅಭ್ಯರ್ಥಿಗಳು ಮತ್ತು ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಯಾವುದೇ ಅನಧಿಕೃತ ಮಾಹಿತಿಗಳನ್ನು ನಂಬಬಾರದು ಎಂದು ತಿಳಿಸಲಾಗಿದೆ.

ಹೊಸ ನೋಂದಣಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ

ಇನ್ನು ಮರುಪರೀಕ್ಷೆಗೆ ವಿದ್ಯಾರ್ಥಿಗಳು ಮತ್ತೆ ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಈಗಾಗಲೇ ಇರುವ ಅಭ್ಯರ್ಥಿಗಳ ಮಾಹಿತಿಯನ್ನೇ ಬಳಸಿಕೊಳ್ಳಲಾಗುತ್ತದೆ. ಹೆಚ್ಚುವರಿ ಪರೀಕ್ಷಾ ಶುಲ್ಕವೂ ವಿಧಿಸಲಾಗುವುದಿಲ್ಲ. ಈಗಾಗಲೇ ಪಾವತಿಸಿರುವ ಶುಲ್ಕವನ್ನು ಮರುಪಾವತಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಮರುಪರೀಕ್ಷೆಯನ್ನು ಎನ್‌ಟಿಎ ತನ್ನದೇ ಸಂಪನ್ಮೂಲಗಳನ್ನು ಬಳಸಿಕೊಂಡು ನಡೆಸಲಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಣ್ಣ ತೊಂದರೆ ಆಗಬಹುದು ಎಂಬುದನ್ನು ಸಂಸ್ಥೆ ಹೇಳಿದೆ. ಆದರೆ ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಉಳಿಸಿಕೊಳ್ಳಲು ಈ ಕ್ರಮ ಅಗತ್ಯವಾಗಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+