NEET-UG 2026: ನೀಟ್ ಪರೀಕ್ಷೆ ರದ್ದು: ಮರು ಪರೀಕ್ಷೆ ದಿನಾಂಕದ ಬಗ್ಗೆ ಇಲ್ಲಿದೆ ಮಹತ್ವದ ಅಪ್ಡೇಟ್ಸ್‌

NEET-UG 2026: ಮೇ.3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಅಲ್ಲದೆ ಮರು ಪರೀಕ್ಷೆ ನಡೆಸುವುದಾಗಿಯೂ ಘೋಷಿಸಲಾಗಿದೆ. ನೀಟ್‌ 2026 ಪರೀಕ್ಷೆಗೂ ಮೊದಲು ಪ್ರಶ್ನೆ ಸೋರಿಕೆಯಾಗಿತ್ತು ಎನ್ನುವ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಮರುಪರೀಕ್ಷೆ ದಿನಾಂಕದ ಬಗ್ಗೆ ಈಗ ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ಅಥವಾ 7ರಿಂದ 10 ದಿನಗಳಲ್ಲಿ ಮರು ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಶುಲ್ಕಗಳನ್ನು ಪಡೆಯದೇ ಈಗಾಗಲೇ ಇರುವ ನೋಂದಣಿಯ ದತ್ತಾಂಶದ ಮೂಲಕವೇ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.

ಮೇ 3 ರಂದು ನಡೆಸಲಾದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಂಗಳವಾರ ಪ್ರಕಟಿಸಿದ್ದು, ಹೊಸ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ಕೇಂದ್ರ ಸಂಸ್ಥೆಗಳ ಸಮನ್ವಯದ ಮೂಲಕ ಲಭಿಸಿದ ಮಾಹಿತಿ ಹಾಗೂ ಕಾನೂನು ಜಾರಿ ಅಧಿಕಾರಿಗಳು ಹಂಚಿಕೊಂಡಿರುವ ತನಿಖಾ ವಿವರಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.

NEET-UG 2026

ನೀಟ್ ಮರು ಪರೀಕ್ಷೆಗೆ ಸಂಬಂಧಿಸಿದಂತೆ NTA ಹೇಳಿದ್ದೇನು ?

ಎನ್‌ಟಿಎ ಈ ವಿಷಯವನ್ನು ಈಗಾಗಲೇ ಸ್ವತಂತ್ರ ತನಿಖೆ ಹಾಗೂ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಂಸ್ಥೆಗಳ ಗಮನಕ್ಕೆ ತಂದಿರುವುದಾಗಿ ಹೇಳಿದೆ. ಮುಂದುವರಿದು ಭಾರತ ಸರ್ಕಾರದ ಅನುಮೋದನೆಯ ಬಳಿಕ ಪರೀಕ್ಷೆಯನ್ನು ರದ್ದುಪಡಿಸಿ, ಮರು ಪರೀಕ್ಷೆ ನಡೆಸುವುದಕ್ಕೆ ನಿರ್ಧರಿಸಿರುವುದಾಗಿ ಹೇಳಿದೆ. ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಹೇಳಿದೆ.

"ಎನ್‌ಟಿಎಗೆ ಲಭಿಸಿದ ಮಾಹಿತಿ ಮತ್ತು ಕಾನೂನು ಜಾರಿ ಸಂಸ್ಥೆಗಳು ಹಂಚಿಕೊಂಡಿರುವ ತನಿಖಾ ವಿವರಗಳ ಆಧಾರದ ಮೇಲೆ ಪ್ರಸ್ತುತ ಪರೀಕ್ಷಾ ಪ್ರಕ್ರಿಯೆಯನ್ನು ಮುಂದುವರಿಸುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಮರುಪರೀಕ್ಷೆಯ ದಿನಾಂಕಗಳು ಹಾಗೂ ಹೊಸ ಪ್ರವೇಶ ಪತ್ರಗಳ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಸಂಸ್ಥೆಯು ತನ್ನ ಅಧಿಕೃತ ವೇದಿಕೆಗಳ ಮೂಲಕ ಪ್ರಕಟಿಸಲಿದೆ" ಎಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಇದೇ ವೇಳೆ, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಎನ್‌ಟಿಎ ಹೇಳಿದ್ದು, ಕೇಂದ್ರ ತನಿಖಾ ದಳ (CBI) ಕೇಳುವ ಎಲ್ಲಾ ಅಗತ್ಯ ದಾಖಲೆಗಳು, ಮಾಹಿತಿಗಳು ಮತ್ತು ಸಹಾಯವನ್ನು ಒದಗಿಸಲಾಗುತ್ತದೆ ಎಂದೂ ಹೇಳಲಾಗಿದೆ.

7-10 ದಿನಗಳಲ್ಲಿ ಪರಿಷ್ಕೃತ ಪರೀಕ್ಷಾ ವೇಳಾ ಪಟ್ಟಿ

ಇನ್ನು NEET-UG 2026 ರ ನಂತರ, NTA ಮಹಾನಿರ್ದೇಶಕ ಅಭಿಷೇಕ್ ಸಿಂಗ್ ಮಂಗಳವಾರ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಮಾತನಾಡಿದ್ದಾರೆ. ಮುಂದಿನ 7 ರಿಂದ 10 ದಿನಗಳಲ್ಲಿ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿದೆ.

NEET-UG 2026 ರದ್ದು: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಸಿಬಿಐ ತನಿಖೆ
NEET-UG 2026 ರದ್ದು: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಸಿಬಿಐ ತನಿಖೆ

ಕೇಂದ್ರ ತನಿಖಾ ಸಂಸ್ಥೆಯು ರಾಜಸ್ಥಾನ ಪೊಲೀಸರಿಂದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಗ್ರಹಿಸುತ್ತದೆ. ಅಲ್ಲದೆ ಎನ್‌ಟಿಎ ಅಧಿಕಾರಿಗಳನ್ನು ವಿಚಾರಣೆ ಮಾಡುತ್ತದೆ ಮತ್ತು ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳುತ್ತದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+