ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ-ನೇಪಾಳ ನಡುವಿನ 22 ಗಡಿಗಳಲ್ಲಿ ಸಂಚಾರ ಬಂದ್

|
Google Oneindia Kannada News

ನವದೆಹಲಿ, ಮೇ 04: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಗೆ ತತ್ತರಿಸಿದ ಭಾರತದ ಜೊತೆಗಿನ ಸಂಪರ್ಕದಲ್ಲಿ ನೇಪಾಳ ಅಂತರ ಕಾಯ್ದುಕೊಳ್ಳಲು ತೀರ್ಮಾನಿಸಿದೆ. ಉಭಯ ರಾಷ್ಟ್ರಗಳ 22 ಗಡಿ ಪ್ರದೇಶಗಳಲ್ಲಿ ಪ್ರವೇಶವನ್ನು ನೇಪಾಳ ಸರ್ಕಾರ ನಿರ್ಬಂಧಿಸಿದೆ.

ಭಾರತ ಮತ್ತು ನೇಪಾಳ ಜೊತೆಗಿನ 13 ಗಡಿ ಪ್ರದೇಶಗಳಲ್ಲಿ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಳೆದ ಶುಕ್ರವಾರ ನೇಪಾಳದಲ್ಲಿ ಕೊವಿಡ್-19 ಬಿಕ್ಕಟ್ಟು ನಿರ್ವಹಣೆ ಸಹಕಾರಿ ಸಮಿತಿ ನಡೆಸಿದ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಭಾರತದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವಂತೆ ಅಮೆರಿಕ ಸಲಹೆಭಾರತದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವಂತೆ ಅಮೆರಿಕ ಸಲಹೆ

ನೇಪಾಳ ಮತ್ತು ಭಾರತದ ನಡುವೆ ಸಂಪರ್ಕ ಕಲ್ಪಿಸುವ 35 ಗಡಿ ಕೇಂದ್ರಗಳ ಪೈಕಿ 22 ಗಡಿಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕೇವಲ 13 ಗಡಿ ಪ್ರದೇಶಗಳಲ್ಲಿ ಸಂಚಾರಕ್ಕೆ ಅನುಮತಿ ನೀಡಲು ಸಮಿತಿಯು ತೀರ್ಮಾನಿಸಿದೆ.

Nepal Govt To Close 22 Entry Points With India Amid Coronavirus Rise

ಕೊವಿಡ್-19 ಸೋಂಕಿತ ಪ್ರಕರಣ:

ಕೊರೊನಾವೈರಸ್ ಸಾಂಕ್ರಾಮಿಕ ಅಲೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಕೊವಿಡ್-19 ಸೋಂಕು ತಪಾಸಣೆ ವೇಗ ತಗ್ಗಿದೆ. ಈ ಹಿನ್ನೆಲೆ ಕಳೆದ 24 ಗಂಟೆಗಳಲ್ಲಿ 3,57,229 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಂದೇ ದಿನ 3,449 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 3,20,289 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,02,82,833 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 1,66,13,292 ಸೋಂಕಿತರು ಈವರೆಗೂ ಗುಣಮುಖರಾಗಿದ್ದು, 2,22,408 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 34,47,133 ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

English summary
Nepal Govt To Close 22 Entry Points With India Amid Coronavirus Rise.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X