ಭಾರತದ ಲಡಾಖ್‌ನಲ್ಲಿ ನೇಪಾಳ ಜನರೇಷನ್ Gen Z ಮಾದರಿ ಪ್ರತಿಭಟನೆ!
Ladakh: ನೇಪಾಳದಲ್ಲಿ ಜನರೇಷನ್ Gen Z ಪ್ರತಿಭಟನೆ ಚರ್ಚೆಯಲ್ಲಿರುವಾಗಲೇ ಭಾರತದಲ್ಲೂ ಯುವಕರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ನೇಪಾಳದಲ್ಲಿ ಈಚೆಗೆ ಅಲ್ಲಿನ ಸೋಷಿಯಲ್ ಮೀಡಿಯಾ ಬ್ಯಾನ್ ಹಾಗೂ ಭ್ರಷ್ಟಾಚಾರವನ್ನು ವಿರೋಧಿಸಿ ಯುವಕರು ಬೀದಿಗೆ ಇಳಿದಿದ್ದರು. ಇದೀಗ ಲಡಾಕ್ ಪ್ರದೇಶಕ್ಕೆ ರಾಜ್ಯತ್ವ ಅಥವಾ ರಾಜ್ಯದ ಸ್ಥಾನಮಾನ ಕೊಡಬೇಕು ಎಂದು ಆಗ್ರಹಿಸಿ ಅಲ್ಲಿನ ಯುವಕರು ಬೀದಿಗೆ ಇಳಿದಿದ್ದಾರೆ. ಅಲ್ಲದೇ ಈ ಭಾಗದಲ್ಲಿ ಪ್ರತಿಭಟನೆಯು ಉಗ್ರ ಸ್ವರೂಪ ಪಡೆದುಕೊಂಡಿದೆ. ಲೇಹ್‌ನಲ್ಲಿ ಯುವಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದೆ. ರಾಜ್ಯ ಸ್ಥಾನಮಾನ ಕೇಳಿ ಪ್ರತಿಭಟನೆ ನಡೆಸುತ್ತಿದ್ದ ಯುವಕರು ಹಾಗೂ ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.
ಇನ್ನು ಲಡಾಕ್‌ನಲ್ಲಿ ಪ್ರತಿಭಟನೆಗಳು ಹಿಂಸಾತ್ಮಕವಾಗಿಸ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಹೇಳಲಾಗಿದೆ. ಬುಧವಾರ ಬೆಳಿಗ್ಗೆ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಲೇಹ್‌ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಸಹ ಹಚ್ಚಲಾಗಿದೆ. ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದಂತೆಯೇ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಅಕ್ಟೋಬರ್ 6 ರಂದು ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA) ಸದಸ್ಯರನ್ನು ಒಳಗೊಂಡ ಸರ್ಕಾರ ಮತ್ತು ಲಡಾಖ್ ಪ್ರತಿನಿಧಿಗಳ ನಡುವೆ ಮಾತುಕತೆ ನಡೆಯುವುದು ನಿಗದಿಯಾಗಿತ್ತು. ಇದಕ್ಕೂ ಮುಂಚೆಯೇ ಭಾರೀ ಪ್ರತಿಭಟನೆ ನಡೆದಿದೆ. ಆರನೇ ಸ್ಕೆಡ್ಯೂಲ್ ವಿಸ್ತರಣೆ ಹಾಗೂ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರ ಸರ್ಕಾರವು ಮಧ್ಯಪ್ರವೇಶ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಎಲ್‌ಎಬಿಯ ಸಂಘಟನೆಯು ಸೆಪ್ಟೆಂಬರ್ 10 ರಿಂದ 35 ದಿನಗಳ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿತ್ತು. ಮುಷ್ಕರದ ಸಮಯದಲ್ಲಿ 15 ಜನರಲ್ಲಿ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು, ಇದರ ಬೆನ್ನಲ್ಲೇ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ ಎಂದು ಹೇಳಲಾಗಿದೆ. ಅಲ್ಲದೇ ಇದರ ಬೆನ್ನಲ್ಲೇ ಸಂಘಟನೆಯು ಬಂದ್‌ಗೆ ಕರೆ ನೀಡಿತ್ತು. ರಾಜ್ಯ ಸ್ಥಾನಮಾನ ಮತ್ತು ಲಡಾಖ್ ಅನ್ನು ಆರನೇ ಸ್ಕೆಡ್ಯೂಲ್‌ಗೆ ಸೇರಿಸುವ ಬೇಡಿಕೆಗಳನ್ನು ಈಡೇರಿಸುವವರೆಗೆ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಯುವಕರು ಹೇಳಿದ್ದರು.
ಇನ್ನು ನಮ್ಮ ಪ್ರತಿಭಟನೆ ಶಾಂತಿಯುತವಾಗಿದೆ. ಆದರೆ, ಜನರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಪರಿಸ್ಥಿತಿ ನಮ್ಮ ಕೈ ತಪ್ಪುವ ಸಾಧ್ಯತೆ ಇದೆ. ಯಾಕೆಂದರೆ ಈಗಾಗಲೇ ಮಾತುಕತೆ ವಿಳಂಬವಾಗಿದೆ ಎಂದು ಎಲ್‌ಎಬಿ ಸಹ-ಅಧ್ಯಕ್ಷ ಚೆರಿಂಗ್ ಡೋರ್ಜೆ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಪರಿಸತ ಕಾರ್ಯಕರ್ತರಾದ ಸೋನಮ್ ವಾಂಗ್‌ಚುಕ್ ಅವರು ಸಹ ಈ ಭಾಗದಲ್ಲಿ ನಡೆಯುತ್ತಿರುವ ಆಂದೋಲನದ ಭಾಗವಾಗಿದ್ದಾರೆ.
ಲಡಾಖ್‌ಗೆ ರಾಜ್ಯ ಅಧಿಕಾರ ಯಾಕೆ ಚರ್ಚೆ: ಇನ್ನು 2019 ರಲ್ಲಿ ಲಡಾಖ್‌ಗೆ ಕೇಂದ್ರಾಡಳಿತ ಪ್ರದೇಶ (ಯುಟಿ) ಸ್ಥಾನಮಾನ ಕೊಟ್ಟ ಸಂದರ್ಭದಿಂದಲೂ ಲಡಾಖ್‌ಗೆ ರಾಜ್ಯತ್ವಕ್ಕಾಗಿ ಅಥವಾ ರಾಜ್ಯವನ್ನಾಗಿ ಘೋಷಣೆ ಮಾಡಬೇಕು ಎನ್ನುವ ಬೇಡಿಕೆಗಳು ಮುಂದುವರೆದಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications