ಅಕ್ಟೋಬರ್ 1ರಿಂದ ವಿಶ್ವವಿದ್ಯಾಲಯಗಳಲ್ಲಿ ಹೊಸ ಶೈಕ್ಷಣಿಕ ವರ್ಷಾರಂಭ
ನವದೆಹಲಿ, ಜುಲೈ 17: ದೇಶಾದ್ಯಂತ ಎಲ್ಲಾ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಯುಜಿಸಿ ತಿಳಿಸಿದೆ. ಇದರೊಂದಿಗೆ, ಸೆಪ್ಟೆಂಬರ್30ರ ಒಳಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.
12ನೇ ತರಗತಿ ಫಲಿತಾಂಶ ಪ್ರಕಟವಾದ ನಂತರವಷ್ಟೆ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳುತ್ತದೆ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ತಿಳಿಸಿದ್ದಾರೆ.
ಹೊಸ ಶೈಕ್ಷಣಿಕ ವರ್ಷದ ಸಂಬಂಧ ಯುಜಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಲ್ಲಿ "ಎಲ್ಲಾ ಕಾಲೇಜು ಮಂಡಳಿಗಳು ಜುಲೈ 31ರ ಒಳಗೆ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕಿದೆ. ಆನಂತರ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗುವುದು. ಅಕಸ್ಮಾತ್ ಪರೀಕ್ಷೆ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾದರೆ ಅಕ್ಟೋಬರ್ 18ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸಲಾಗುವುದು" ಎಂದು ತಿಳಿಸಿದೆ.

ಬೋಧನೆಯು ಆಫ್ಲೈನ್, ಆನ್ಲೈನ್ ಅಥವಾ ಎರಡು ಆಯ್ಕೆಗಳನ್ನು ಒಳಗೊಳ್ಳಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊರೊನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ಅಕ್ಟೋಬರ್ 1ರಿಂದ ಆರಂಭಿಸಿ, ಮುಂದಿನ ಜುಲೈ 31ರವರೆಗೆ ತರಗತಿ, ಪರೀಕ್ಷೆಗಳ ಕುರಿತು ಯೋಜನೆ ರೂಪಿಸಹುದು ಎಂದು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳು ಪದವಿ ಅಂತಿಮ ವರ್ಷದ ಪರೀಕ್ಷೆಗಳನ್ನು ಆಗಸ್ಟ್ 31ರೊಳಗೆ ನಡೆಸಬೇಕು ಎಂದು ಆದೇಶಿಸಲಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications