ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 1ರಿಂದ ವಿಶ್ವವಿದ್ಯಾಲಯಗಳಲ್ಲಿ ಹೊಸ ಶೈಕ್ಷಣಿಕ ವರ್ಷಾರಂಭ

|
Google Oneindia Kannada News

ನವದೆಹಲಿ, ಜುಲೈ 17: ದೇಶಾದ್ಯಂತ ಎಲ್ಲಾ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಯುಜಿಸಿ ತಿಳಿಸಿದೆ. ಇದರೊಂದಿಗೆ, ಸೆಪ್ಟೆಂಬರ್30ರ ಒಳಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

12ನೇ ತರಗತಿ ಫಲಿತಾಂಶ ಪ್ರಕಟವಾದ ನಂತರವಷ್ಟೆ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳುತ್ತದೆ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ತಿಳಿಸಿದ್ದಾರೆ.

ಇಂಜಿನಿಯರಿಂಗ್, ಡಿಪ್ಲೊಮಾ, ಪದವಿ ಪರೀಕ್ಷೆ ಕುರಿತು ಉನ್ನತ ಶಿಕ್ಷಣ ಇಲಾಖೆ ದಿಢೀರ್ ತೀರ್ಮಾನ!ಇಂಜಿನಿಯರಿಂಗ್, ಡಿಪ್ಲೊಮಾ, ಪದವಿ ಪರೀಕ್ಷೆ ಕುರಿತು ಉನ್ನತ ಶಿಕ್ಷಣ ಇಲಾಖೆ ದಿಢೀರ್ ತೀರ್ಮಾನ!

ಹೊಸ ಶೈಕ್ಷಣಿಕ ವರ್ಷದ ಸಂಬಂಧ ಯುಜಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಲ್ಲಿ "ಎಲ್ಲಾ ಕಾಲೇಜು ಮಂಡಳಿಗಳು ಜುಲೈ 31ರ ಒಳಗೆ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕಿದೆ. ಆನಂತರ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗುವುದು. ಅಕಸ್ಮಾತ್ ಪರೀಕ್ಷೆ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾದರೆ ಅಕ್ಟೋಬರ್ 18ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸಲಾಗುವುದು" ಎಂದು ತಿಳಿಸಿದೆ.

New Academic Year For Universitiy Starts From October 1 Says UGC

ಬೋಧನೆಯು ಆಫ್‌ಲೈನ್, ಆನ್‌ಲೈನ್ ಅಥವಾ ಎರಡು ಆಯ್ಕೆಗಳನ್ನು ಒಳಗೊಳ್ಳಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊರೊನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ಅಕ್ಟೋಬರ್‌ 1ರಿಂದ ಆರಂಭಿಸಿ, ಮುಂದಿನ ಜುಲೈ 31ರವರೆಗೆ ತರಗತಿ, ಪರೀಕ್ಷೆಗಳ ಕುರಿತು ಯೋಜನೆ ರೂಪಿಸಹುದು ಎಂದು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ.

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳು ಪದವಿ ಅಂತಿಮ ವರ್ಷದ ಪರೀಕ್ಷೆಗಳನ್ನು ಆಗಸ್ಟ್ 31ರೊಳಗೆ ನಡೆಸಬೇಕು ಎಂದು ಆದೇಶಿಸಲಾಗಿದೆ.

English summary
New academic session for first year students to be admitted in universities will commence from october 1,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X