ಉತ್ತರ ಪ್ರದೇಶದ ರೈತರ ಬಾಳಿನಲ್ಲಿ ಹೊಸ ಉದಯ! ಯೋಗಿ ಆದಿತ್ಯನಾಥ್ ಅವರಿಂದ ಆರಂಭವಾದ ಬೃಹತ್ ಕಾರ್ಯಕ್ರಮ
ಲಕ್ನೋ ಅಕ್ಟೋಬರ್ 4: ಉತ್ತರ ಪ್ರದೇಶದಲ್ಲಿ ಕೃಷಿ ಆದಾಯ ಹೆಚ್ಚಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಸ ಯೋಜನೆಗಳನ್ನು ಆರಂಭಿಸಿದ್ದಾರೆ. ಈ ಯೋಜನೆಗಳ ಮೂಲಕ ಯುವಜನತೆಯೂ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯತ್ತ ಮುಖ ಮಾಡುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಆಡಳಿತ ನಡೆಸುತ್ತಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಸತತ 6 ವರ್ಷ ಮುಖ್ಯಮಂತ್ರಿಯಾಗಿ ಯಾರೂ ಕೆಲಸ ಮಾಡಿಲ್ಲ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಈ ದಾಖಲೆಯನ್ನು ಮುರಿದಿದ್ದಾರೆ. ಜನರ ಈ ಬೆಂಬಲವನ್ನು ಸಂಸತ್ ಚುನಾವಣೆಗೆ ವಿಸ್ತರಿಸಲು ಅವರು ನಿರಂತರವಾಗಿ ಅನೇಕ ಹೊಸ ಯೋಜನೆಗಳನ್ನು ಘೋಷಿಸುತ್ತಿದ್ದಾರೆ.

ಆ ಮೂಲಕ ಇಂದು ಕೃಷಿಗೆ ಸಂಬಂಧಿಸಿದ ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ''ಕೃಷಿಯು ಅತ್ಯಂತ ಪ್ರಮುಖ ಉದ್ಯಮವಾಗಿದೆ. ಇದು ನಮ್ಮ ಬೆನ್ನೆಲುಬು, ರೈತರ ಜೀವನೋಪಾಯವನ್ನು ಉಳಿಸಲು ಮತ್ತು ರಾಷ್ಟ್ರೀಯ ಆರ್ಥಿಕತೆಯನ್ನು ಹೆಚ್ಚಿಸಲು ಪೂರ್ವ ಉತ್ತರ ಪ್ರದೇಶದ ರೈತರ ಕೃಷಿಯನ್ನು ಪುನರ್ರಚಿಸುವುದು ಅಗತ್ಯವಾಗಿದೆ. ಆ ಮೂಲಕ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ'' ಎಂದು ಅವರು ಹೇಳಿದರು.
ನಮ್ಮ ರಾಜ್ಯ ಈಗಾಗಲೇ ವಿವಿಧ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಕೃಷಿ ನೀರಾವರಿ ಯೋಜನೆಯಂತಹ ಪ್ರಮುಖ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಅನುಭವ ನಮಗಿದೆ. ಪ್ರಸ್ತುತ 2.62 ಕೋಟಿ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನೀತಿ ಯೋಜನೆ ಮೂಲಕ ವರ್ಷಕ್ಕೆ ತಲಾ 6,000 ರೂ.ಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಇದು ರೈತರ ಜೀವನವನ್ನು ಪರಿವರ್ತಿಸುವುದಲ್ಲದೆ ಆಹಾರ ಸಂಸ್ಕರಣಾ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಈ ಯೋಜನೆಗಳ ಜೊತೆಗೆ, ರಾಜ್ಯ ಸರ್ಕಾರದ ಯೋಜನೆಗಳು ಯುಪಿ ರೈತರ ಜೀವನದಲ್ಲಿ ಹೊಸ ಉದಯವನ್ನು ತರುತ್ತವೆ" ಎಂದು ಅವರು ಹೇಳಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ
ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗಳನ್ನು ತೆರೆಯುವಲ್ಲಿ ಉತ್ತರ ಪ್ರದೇಶವು ರಾಷ್ಟ್ರದಲ್ಲಿ ಉತ್ತಮ ಸ್ಥಾನವನ್ನು ಪಡೆದುಕೊಂಡಿದೆ. ಹೆಚ್ಚುವರಿಯಾಗಿ, ಉತ್ತರ ಪ್ರದೇಶವು ಆರೋಗ್ಯ ವೃತ್ತಿಪರ ನೋಂದಣಿ, ಡಿಜಿಟಲ್ ಆರೋಗ್ಯ ಪ್ರೋತ್ಸಾಹ ಯೋಜನೆ ಮತ್ತು ಸ್ಕ್ಯಾನ್ ಮತ್ತು ಶೇರ್ ಟೋಕನ್‌ಗಳ ಉತ್ಪಾದನೆಯಲ್ಲಿ ರಾಷ್ಟ್ರೀಯವಾಗಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಪತ್ರಿಕಾ ಹೇಳಿಕೆ ತಿಳಿಸಿದೆ.
ಯೋಗಿ ಆದಿತ್ಯನಾಥ್ ಅವರು ರಾಜ್ಯದೊಳಗಿನ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಪ್ರಗತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಾರೆ, ಅಧಿಕಾರಿಗಳಿಗೆ ನಿಯಮಿತ ಮಾರ್ಗದರ್ಶನ ಮತ್ತು ನಿರ್ದೇಶನಗಳನ್ನು ನೀಡುತ್ತಾರೆ ಎಂಬುದು ಗಮನಾರ್ಹ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಉತ್ತರ ಪ್ರದೇಶವು ಒಟ್ಟು 4,77,19,482 ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗಳನ್ನು ತೆರೆಯುವ ಮೂಲಕ ರಾಷ್ಟ್ರದಲ್ಲಿ ಅಗ್ರಸ್ಥಾನದಲ್ಲಿದೆ.












Click it and Unblock the Notifications