Breaking: ನ.9ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ಡಿವೈ ಚಂದ್ರಚೂಡ್
ಮುಂಬರುವ ನವೆಂಬರ್ 8ರಂದು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನಿವೃತ್ತರಾಗಲಿದ್ದಾರೆ. ಅವರ ಸ್ಥಾನಕ್ಕೆ ನ್ಯಾಯಮೂರ್ತಿ ಚಂದ್ರಚೂಡ್ ಅನ್ನು ಉತ್ತರಾಧಿಕಾರಿಯನ್ನಾಗಿ ಶಿಫಾರಸ್ಸು ಮಾಡಲಾಗಿದೆ. ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಮೇ 13ರ 2016ರಂದು ಸುಪ್ರೀಂ ಕೋರ್ಟ್‌ಗೆ ನೇಮಿಸಲಾಗಿತ್ತು. ಪ್ರಸ್ತುತ ಅವರು ನ್ಯಾಯಮೂರ್ತಿ ಲಲಿತ್ ನಂತರ ಅತ್ಯಂತ ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದಾರೆ.
"ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು ಡಾ. ಜಸ್ಟಿಸ್ ಡಿವೈ ಚಂದ್ರಚೂಡ್ ಅನ್ನು ಅವರನ್ನು ನವೆಂಬರ್ 9, 2022 ರಿಂದ ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ," ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ಸೇವೆ:
ಸುಪ್ರೀಂ ಕೋರ್ಟ್‌ಗೆ ನೇಮಕಗೊಳ್ಳುವ ಮೊದಲು, ಅವರು ಅಕ್ಟೋಬರ್ 31, 2013 ರಿಂದ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. ಮಾರ್ಚ್ 2000 ರಿಂದ ಅಕ್ಟೋಬರ್ 2013 ರವರೆಗೆ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದರು. ನ್ಯಾಯಮೂರ್ತಿ ಚಂದ್ರಚೂಡ್ ಅವರು 1998-2000 ಅವಧಿಯಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು.












Click it and Unblock the Notifications