ಯುವತಿಯ ಅಪಹರಣ: ಕಾರಿನಲ್ಲಿ ಗ್ಯಾಂಗ್ ರೇಪ್

ದುಷ್ಕರ್ಮಿಗಳ ಗುಂಪೊಂದು 25ರ ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿ ಕಾರಿನಲ್ಲಿ ಹೊತ್ತೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಆಸ್ಪತ್ರೆಯೊಂದರ ಬಳಿ ಎಸೆದು ಹೋಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಇಲ್ಲಿನ ಸುಶಾಂತ್ ಲೋಕ್ ಪ್ರದೇಶದಲ್ಲಿ ನಿನ್ನೆ ರಾತ್ರಿ ಮಹಿಳೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಕೆಲವು ಮಂದಿಯ ಗುಂಪು ಆಕೆಯನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಸಮೀಪದ ಆರ್ಟಿಮಿಸ್ ಆಸ್ಪತ್ರೆ ಬಳಿ ಎಸೆದು ಹೋಗಿದ್ದಾರೆ.
ಮಹಿಳೆಯನ್ನು ಈ ಸ್ಥಿತಿಯಲ್ಲಿ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯನ್ನು ತಕ್ಷಣ ಆರ್ಟಿಮಿಸ್ ಆಸ್ಪತ್ರೆಗೆ ದಾಖಲಿಸಿದ್ದು, ಅತ್ಯಾಚಾರ ನಡೆದಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ನೊಂದ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಂತ್ರಸ್ತ ಮಹಿಳೆಯ ಹೇಳಿಕೆಯನ್ನು ಪೊಲೀಸರು ಪಡೆದಿದ್ದಾರೆ. ಸುಶಾಂತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. [ಅತ್ಯಾಚಾರಕ್ಕೆ ಕಾರಣ ಯಾರು?]












Click it and Unblock the Notifications