ನೂತನ ಸಂಸತ್ ರಾಷ್ಟ್ರದ ಪ್ರಗತಿ, ಸಮೃದ್ಧಿಯ ಸಂಕೇತ; ಸಂಸದೆ ಸುಮಲತಾ ಅಂಬರೀಶ್
ಭಾನುವಾರ, ಮೇ 28ರಂದು ನವದೆಹಲಿಯಲ್ಲಿ ನಿರ್ಮಿಸಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇದೇ ವೇಳೆ ಹೊಸ ಸಂಸತ್ ಭವನ ಲೋಕಾರ್ಪಣೆ ಸ್ಮರಣಾರ್ಥವಾಗಿ ವಿಶೇಷ ಅಂಚೆ ಚೀಟಿ ಮತ್ತು 75 ರೂಪಾಯಿ ನಾಣ್ಯವನ್ನು ಬಿಡುಗಡೆಗೊಳಿಸಿದರು.
ಇನ್ನು ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ನಟಿ, ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಭಾಗಿಯಾಗಿದ್ದರು.
ಸಂಸತ್ ಭವನ ಉದ್ಘಾಟನೆಯ ನಂತರ ಸಂಸದೆ ಸುಮಲತಾ ಅಂಬರೀಶ್ ಅವರು ನೂತನ ಸಂಸತ್ ಪ್ರವೇಶಿಸಿದ ತಮ್ಮ ಅನುಭವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

"ಲೋಕಸಭಾ ಸದಸ್ಯಳಾಗಿ ಇಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸೌಭಾಗ್ಯ ನನ್ನದಾಗಿತ್ತು. ಇದು ನಮ್ಮ ದೇಶಕ್ಕೆ ಐತಿಹಾಸಿಕ ದಿನವಾಗಿದೆ ಹಾಗೂ ನಾನು ಅದರ ಭಾಗವಾಗಿರುವುದಕ್ಕೆ ಹೆಮ್ಮೆಪಡುತ್ತೇನೆ," ಎಂದು ಸುಮಲತಾ ಅಂಬರೀಶ್ ಅವರು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
"ಅಲ್ಲದೇ, ಹೊಸ ಸಂಸತ್ ಕಟ್ಟಡವು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಸಂಸತ್ ಭವನವು ಅತ್ಯಾಧುನಿಕ ಸೌಲಭ್ಯದಿಂದ ಕೂಡಿದ್ದು, ಅದು ದೇಶದ ಜನರಿಗೆ ಉತ್ತಮ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ ಎನ್ನುವ ವಿಶ್ವಾಸ ನನ್ನದು," ಎಂದು ತಿಳಿಸಿದ್ದಾರೆ.
ಲೋಕಸಭಾ ಸದಸ್ಯಳಾಗಿ ಇಂದು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸೌಭಾಗ್ಯ ನನ್ನದಾಗಿತ್ತು. ಇದು ನಮ್ಮ ದೇಶಕ್ಕೆ ಐತಿಹಾಸಿಕ ದಿನವಾಗಿದೆ ಹಾಗೂ ನಾನು ಅದರ ಭಾಗವಾಗಿರುವುದಕ್ಕೆ ಹೆಮ್ಮೆಪಡುತ್ತೇನೆ.
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 28, 2023
ಹೊಸ ಸಂಸತ್ ಕಟ್ಟಡವು ನಮ್ಮ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಸಂಸತ್ ಭವನವು ಅತ್ಯಾಧುನಿಕ ಸೌಲಭ್ಯದಿಂದ… pic.twitter.com/BW6k1kjmtj
ಇದೇ ವೇಳೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿರುವ ಸಂಸದೆ, "ದೇಶದ ಸಮಗ್ರತೆಯ ಮತ್ತು ಐಕ್ಯತೆಯ ಸಂಕೇತವಾಗಿರುವ ನೂತನ ಸಂಸತ್ ಭವನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗಿಯಾಗಿ, ಹೊಸ ಸಂಸತ್ ಭವನವನ್ನು ಪ್ರವೇಶಿಸಿದೆ," ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನೂ ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಯೋಗಕ್ಷೇಮ ವಿಚಾರಿಸಿದ್ದಾರೆ. ಹಿರಿಯರ ಜೊತೆ ಕಳೆದ ಆ ಕ್ಷಣ ಸದಾ ನೆನಪಿಡುವಂಥದ್ದು ಎಂದು ಟ್ವಿಟ್ಟರ್‌ನಲ್ಲಿ ಫೋಟೋ ಸಮೇತ ಬರೆದುಕೊಂಡಿದ್ದಾರೆ.
2020ರ ಡಿ.10ರಂದು ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನಕ್ಕೆ ಶಂಕುಸ್ಥಾಪನೆ ಮಾಡಿದ್ದರು. 1200 ಕೋಟಿ ರೂಪಾಯಿ ವೆಚ್ಚದಲ್ಲಿ 39.6 ಮೀಟರ್ ಎತ್ತರದಲ್ಲಿ ನಾಲ್ಕು ಅಂತಸ್ತಿನ ಹೊಸ ಸಂಸತ್ ಭವನ ನಿರ್ಮಾಣ ಮಾಡಲಾಗಿದೆ.
888 ಲೋಕಸಭೆ ಸಂಸದರು ಹಾಗೂ 300 ಆಸನಗಳ ರಾಜ್ಯಸಭೆ ಸಭಾಂಗಣಗಳಿದ್ದು, ಒಟ್ಟು 1272 ಆಸನ ಸಾಮರ್ಥ್ಯವನ್ನು ಇದು ಹೊಂದಿದೆ. ಲೋಕಸಭೆಯನ್ನು ಗರಿಬಿಚ್ಚಿರುವ ನವಿಲಿನ ವಿನ್ಯಾಸದಲ್ಲಿ ನಿರ್ಮಾಣ ಮಾಡಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications