Toll Fee: ಟೋಲ್ ಸಂಗ್ರಹಕ್ಕೆ ಹೊಸ ನೀತಿ: ಏನದು? ನಿತಿನ್ ಗಡ್ಕರಿ ಹೇಳಿದ್ದೇನು?
Toll Flaza: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ವಿಚಾರ ಆಗಾಗ ಮುನ್ನಲೆಗೆ ಬರುತ್ತಲೇ ಇರುತ್ತದೆ. ಇದೀಗ ಟೋಲ್ ಸಂಗ್ರಹ ಕುರಿತಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಜಾರಿ ಮಾಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿಯನ್ನು ನೀಡಿದ್ದಾರೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಟಕಟಿಸಲಿದ್ದು, ಇದರಲ್ಲು ಗ್ರಾಹಕರಿಗೆ ಸೂಕ್ತ ರಿಯಾಯಿತಿ ನೀಡಲಾಗುವುದು ಎಂದು ನಿತಿನ್ ಗಡ್ಡರಿ ಅವರು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ರಸ್ತೆ ಮೂಲಸೌಕರ್ಯ ನಿರ್ಮಾಣಕ್ಕೆ ಸಾಕಷ್ಟು ಹಣ ವ್ಯಯಿಸುತ್ತಿದೆ. ಆದ್ದರಿಂದ ಟೋಲ್ ಸಂಗ್ರಹಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಅಲ್ಲದೆ, 2008 ನಿಯಮಗಳ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯ ಒಂದೇ ವಿಭಾಗದಲ್ಲಿ ಮತ್ತು ಒಂದೇ ಮಾರ್ಗದಲ್ಲಿ 60 ಕಿ.ಮೀ. ಒಳಗೆ ಟೋಲ್ ಪ್ಲಾಜಾ ಸ್ಥಾಪನೆ ಮಡುವುದಿಲ್ಲ. ಅಧಿವೇಶನ ಮುಕ್ತಾಯ ಆದ ಬಳಿಕ, ಟೋಲ್‌ಗಾಗಿ ಹೊಸ ನೀತಿ ಘೋಷಣೆ ಮಾಡಲಿದ್ದೇವೆ. ಈ ಮೂಲಕ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.
4 ಮತ್ತು 6 ಲೇನ್ ಹೀಗೆ ನಾವು ದೊಡ್ಡ ಹೆದ್ದಾರಿಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನದಿಗೆ ಹಲವು ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಆದ್ದರಿಂದ ನಿಧಿ ಸಂಗ್ರಹಿಸುತ್ತಿದ್ದೇಬೆ. ಈ ಹಿನ್ನೆಲೆ ಸುಂಕ ಇಲ್ಲದೆ, ಮೂಲಸೌಕರ್ಯ ಕಲ್ಪಿಸಲು ಸಾಧ್ಯ ಇಲ್ಲ. ಈ ವಿಚಾರದಲ್ಲಿ ಇನ್ನೂ ಉದಾರವಾಗಿದ್ದು, ನಾಲ್ಕು ಪಥದ ರಸ್ತೆಗಳಲ್ಲಿ ಮಾತ್ರ ಟೋಲ್ ಶುಲ್ಕ ವಿಧಿಸುತ್ತಿದ್ದೇವೆ. ಎರಡು ಪಥದ ಸುಸಜ್ಜಿತ ರಸ್ತೆಗಳಲ್ಲಿ ಟೋಲ್ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿದರು.
2023-24ರಲ್ಲಿ ದೇಶದಲ್ಲಿ ಒಟ್ಟು 64,809.86 ಕೋಟಿ ರೂಪಾಯಿ ಟೋಲ್ ಸಂಗ್ರಹವಾಗಿದೆ. ಇದು ಹಿಂದಿನ ವರ್ಷಕ್ಕಿಂತ ಶೇಕಡ 35ರಷ್ಟು ಹೆಚ್ಚಾಗಿದೆ. 2019-20ರಲ್ಲಿ 27,503 ಕೋಟಿ ರೂಪಾ ಸಂಗ್ರಹವಾಗಿತ್ತು ಎಂದು ತಿಳಿಸಿದರು. ಮತ್ತೊಂದೆಡೆ ಇದೀಗ ದೇಶದ ಹಲವು ಭಾಗಗಳಲ್ಲಿ ದೊಡ್ಡ ದೊಡ್ಡ ಹೆದ್ದಾರಿಗಳು ನಿರ್ಮಾಣವಾಗುತ್ತಿವೆ. ಇನ್ನೂ ಕೆಲವೆಡೆ ಹೆದ್ದಾರಿ ಕಾಮಗಾರಿ ಮುಗಿದು ಉದ್ಘಾಟನೆ ಹಂತಕ್ಕೆ ಬಂದಿವೆ. ಟೋಲ್ ವಿಚಾರಕ್ಕೆ ಬಂದರೆ, ಟೋಲ್ ಸಂಗ್ರಹದಲ್ಲೂ ಮಹತ್ವದ ಬದಲಾವಣೆಗಳು ಆಗುತ್ತಲೇ ಇರುತ್ತದೆ.












Click it and Unblock the Notifications