ಲಸಿಕೆ ದಕ್ಷತೆ ಪರಿಶೀಲಿಸಲು ಪರಿಚಿತಗೊಳ್ಳಲಿದೆ ಟ್ರ್ಯಾಕಿಂಗ್ ಪ್ಲಾಟ್‌ಫಾರ್ಮ್

ನವದೆಹಲಿ, ಆಗಸ್ಟ್‌ 13: ಕೊರೊನಾ ಸೋಂಕಿನ ವಿರುದ್ಧ ಲಸಿಕೆಗಳ ದಕ್ಷತೆಯನ್ನು ಪರಿಶೀಲಿಸಲು ಹಾಗೂ ಲಸಿಕೆ ಪಡೆದ ನಂತರವೂ ಸೋಂಕಿಗೆ ತುತ್ತಾಗುವುದನ್ನು ಪತ್ತೆ ಹಚ್ಚಲು ಕೇಂದ್ರ ಸರ್ಕಾರ ಲಸಿಕಾ ಟ್ರ್ಯಾಕಿಂಗ್ ವೇದಿಕೆಯನ್ನು ಪರಿಚಯಿಸುತ್ತಿದೆ.

"ಕೊರೊನಾ ಲಸಿಕೆ ಪಡೆಯದವರಲ್ಲಿ ಕೊರೊನಾ ಸೋಂಕು ಹಾಗೂ ಲಸಿಕೆ ಪಡೆದುಕೊಂಡ ನಂತರ ತಗುಲಿದ ಸೋಂಕಿನ ಸಂಬಂಧ ಈ ಪೋರ್ಟಲ್ ಮಾಹಿತಿಗಳನ್ನು ಒಳಗೊಂಡಿರುತ್ತದೆ. ಈ ಮೂಲಕ ಕೊರೊನಾ ಲಸಿಕೆಗಳ ದಕ್ಷತೆಯನ್ನು ಪರಿಶೀಲಿಸಲಾಗುತ್ತದೆ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈಸರ್ಗಿಕ ರೋಗನಿರೋಧಕ ಶಕ್ತಿ ಇರುವವರಲ್ಲಿ ಲಸಿಕೆ ದಕ್ಷತೆಯನ್ನು ಕೂಡ ಪರಿಶೀಲಿಸಲಾಗುತ್ತದೆ ಎಂದು ಐಸಿಎಂಆರ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಶಾದ್ಯಂತ ಲಸಿಕೆ ಪಡೆದ ನಂತರವೂ ಸೋಂಕು ಕಾಣಿಸಿಕೊಂಡ ಪ್ರಕರಣಗಳ ಮೇಲೆ ಕಣ್ಗಾವಲು ಇಡಲಾಗಿದೆ. ಸಾರ್ವಜನಿಕ ಡೊಮೈನ್‌ನಲ್ಲಿ ಈ ಮಾಹಿತಿಗಳು ಲಭ್ಯವಿರಲಿವೆ ಎಂದು ಕೇಂದ್ರ ತಿಳಿಸಿದೆ.

New Vaccine Tracking Platform In pipeline Informs Central Government

ಸೋಂಕಿಗೆ ಒಳಗಾದ ಎಷ್ಟು ಮಂದಿ ಆಸ್ಪತ್ರೆಗೆ ಸೇರಿದ್ದಾರೆ ಹಾಗೂ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ, ಎಷ್ಟು ಮಂದಿಗೆ ಗಂಭೀರ ಪರಿಣಾಮಗಳು ಎದುರಾಗಿವೆ ಎಂಬ ಮಾಹಿತಗಳನ್ನೂ ಈ ಪೋರ್ಟಲ್ ಒಳಗೊಂಡಿದೆ.

INSACOGನಲ್ಲಿನ ಸರ್ಕಾರಿ ಮೂಲಗಳ ಪ್ರಕಾರ, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಹೊಸ ಕೊರೊನಾ ರೂಪಾಂತರಗಳ ಸೃಷ್ಟಿಯಾಗಿಲ್ಲ ಎಂದು ಜೆನೋಮ್ ಸೀಕ್ವೆನ್ಸಿಂಗ್ ತಿಳಿಸಿದೆ. ಈ ಎರಡೂ ರಾಜ್ಯಗಳಲ್ಲಿ ಡೆಲ್ಟಾ ರೂಪಾಂತರಗಳ ಹಾವಳಿ ಮುಂದುವರೆದಿದೆ ಎಂದು ಹೇಳಿದ್ದಾರೆ..

ಇದರೊಂದಿಗೆ, ಎರಡು ಡೋಸ್ ಕೊರೊನಾ ಲಸಿಕೆ ಪಡೆದವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಬೇಡ ಎಂದು ಶುಕ್ರವಾರ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ಪಶ್ಚಿಮ ಬಂಗಾಳ, ಕರ್ನಾಟಕ, ಗೋವಾ ಹಾಗೂ ಛತ್ತೀಸ್‌ಗಢದಲ್ಲಿ ಪುಣೆ, ಮುಂಬೈ, ಚೆನ್ನೈನಿಂದ ಬರುವವರಿಗೆ ಲಸಿಕೆಯ ಎರಡು ಡೋಸ್ ಪಡೆದ ಪ್ರವಾಸಿಗರೂ ಆರ್‌ಟಿಪಿಸಿಆರ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿತ್ತು. ಇದೀಗ ಅದರ ಅಗತ್ಯ ಇಲ್ಲ ಎಂದು ತಿಳಿಸಲಾಗಿದೆ.

ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 40,120 ಕೋವಿಡ್‌ ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 585 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,21,17,826ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,30,254ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,85,227ಕ್ಕೆ ತಲುಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+