NewsClick: ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರ ದಾಳಿ- ಲ್ಯಾಪ್‌ಟಾಪ್, ಮೊಬೈಲ್ ಫೋನ್ ವಶ, ಕಾರಣ, ತಿಳಿಯಿರಿ
ನವದೆಹಲಿ, ಅಕ್ಟೋಬರ್ 03: ನ್ಯೂಸ್‌ಕ್ಲಿಕ್ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಮನೆಗಳ ಮೇಲೆ ದೆಹಲಿ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ಚೀನಾದ ಪರ ವಿಚಾರವನ್ನು ನ್ಯೂಸ್‌ಕ್ಲಿಕ್ ಡಿಜಿಟಲ್ ಮಾಧ್ಯಮದಲ್ಲಿ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣವನ್ನು ದಾಖಲಿಸಿತ್ತು.
ಜಾರಿ ನಿರ್ದೇಶನಾಲಯ ದಾಖಲಿಸಿದ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕ ಮಂಗಳವಾರ ನ್ಯೂಸ್‌ಕ್ಲಿಕ್ ಮಾಧ್ಯಮಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿರುವ ನ್ಯೂಜ್‌ಕ್ಲಿಕ್ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಈ ವರೆಗೆ ಸುಮಾರು 30 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಇದೇ ವೇಳೆ, ಉದ್ಯೋಗಿಗಳ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Delhi police landed at my home. Taking away my laptop and Phone...
— Abhisar Sharma (@abhisar_sharma) October 3, 2023
ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದಿದೆ. ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡಲು ಈ ಹಣವನ್ನು ಬಳಸಿಕೊಂಡಿದೆ ಎಂಬ ಆರೋಪಗಳನ್ನು ಮಾಡಲಾಗಿದೆ.

ಈ ಸಂಬಂಧ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್ ಸಂಸ್ಥೆಯನ್ನು ಇಡಿ ತನಿಖೆ ಮಾಡುತ್ತಿದೆ. ಸಿಂಘಮ್ ಚೀನಾ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
Finally last tweet from this phone. Delhi police seizure my phone.
— bhasha singh (@Bhashak) October 3, 2023
ದೆಹಲಿ ಪೊಲೀಸರ ದಾಳಿಗೆ ಒಳಗಾದವರಲ್ಲಿ ಹಿರಿಯ ಪತ್ರಕರ್ತ ಅಭಿಸಾರ್ ಶರ್ಮಾ ಕೂಡ ಸೇರಿದ್ದಾರೆ. ಅವರ ಮನೆಯಲ್ಲಿ ಹುಡುಕಾಟ ನಡೆಸಲಾಗಿದೆ. ಅವರ ಫೋನ್‌ಗಳು ಮತ್ತು ಲ್ಯಾಪ್‌ಟಾಪ್ ಅನ್ನು ತೆಗೆದುಕೊಂಡು ಹೋಗಲಾಯಿತು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹೇಳಿದ್ದಾರೆ.
ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕರ ಮೇಲೆ ಇಡಿ ಕ್ರಮ
ದಕ್ಷಿಣ ದೆಹಲಿಯ ಸಾಕೇತ್‌ನಲ್ಲಿ ನ್ಯೂಸ್‌ಕ್ಲಿಕ್‌ನ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ಸಂಬಂಧಿಸಿದ ಅಪಾರ್ಟ್‌ಮೆಂಟ್ ಅನ್ನು ಆಗಸ್ಟ್‌ನಲ್ಲಿ ಇಡಿ ವಶಪಡಿಸಿಕೊಂಡಿದೆ.
ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಚಟುವಟಿಕೆಗಳ ಕುರಿತು ಇಡಿ ತನಿಖೆ ನಡೆಸುತ್ತಿರುವ ನಡುವೆಯೇ ಈ ಕ್ರಮವನ್ನು ಕೈಗೊಳ್ಳಲಾಗಿದೆ.
#UPDATE | Delhi Police is conducting raids at different premises linked to NewsClick under UAPA and other sections: Sources https://t.co/1TBPzmAOtJ
— ANI (@ANI) October 3, 2023
ಆಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಲು ಸಂಸ್ಥೆ ಸಿದ್ಧತೆ ನಡೆಸಿದೆ ಎಂಬ ವರದಿಗಳು ಪ್ರಕಟಗೊಂಡಿವೆ. ಸೆಪ್ಟೆಂಬರ್ 2021 ರಲ್ಲಿ ಪುರ್ಕಾಯಸ್ಥ ಅವರ ನಿವಾಸದಲ್ಲಿ ಶೋಧ ನಡೆಸಿದ ನಂತರ ಇಡಿಯಿಂದ ಇದು ಎರಡನೇ ದಾಳಿಯಾಗಿದೆ.












Click it and Unblock the Notifications