ಜುಲೈ 28 ತನಕ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ

ನವದೆಹಲಿ, ಜುಲೈ 24: ಮುಂದಿನ 3-4 ದಿನಗಳು ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಭಾರತದ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

"ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಮೋಡಗಳು ಅದರ ಸಾಮಾನ್ಯ ಸ್ಥಾನದಿಂದ ದಕ್ಷಿಣಕ್ಕೆ ಸಾಗುತ್ತದೆ. ಮುಂದಿನ 2-3 ದಿನಗಳಲ್ಲಿ ಇದು ಮುಂದುವರಿಯುವ ಸಾಧ್ಯತೆಯಿದೆ," ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ತಿಳಿಸಿದೆ.

"ಒಡಿಶಾದ ಒಳಭಾಗ ಮತ್ತು ಛತ್ತೀಸ್‌ಗಢದ ಮೇಲೆ ಚಂಡಮಾರುತದ ಪರಿಚಲನೆಯು ಕೆಳ ಮತ್ತು ಮಧ್ಯಮ ಉಷ್ಣವಲಯದ ಮಟ್ಟಗಳಲ್ಲಿ ಎತ್ತರದೊಂದಿಗೆ ನೈಋತ್ಯಕ್ಕೆ ವಾಲುತ್ತದೆ" ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜುಲೈ 24 ರಂದು ಕೊಂಕಣ ಮತ್ತು ಗೋವಾದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹೇಳಿದೆ. ಜುಲೈ 24 ಮತ್ತು 25 ರಂದು ಗುಜರಾತ್‌ನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಐಎಂಡಿ ಮಾಹಿತಿ ನೀಡಿದೆ.

ಜುಲೈ 24ರಿಂದ ಮುಂದಿನ ನಾಲ್ಕು ದಿನ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಕೂಡ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಹಲವೆಡೆ ಲಘು ಮಳೆಯಾಗುತ್ತದೆ ಎಂದು ತಿಳಿಸಿದೆ.

 ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಮಳೆ

ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಮಳೆ

ಜುಲೈ 25 ರಂದು ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಭಾರೀ ಮಳೆಯಾಗುತ್ತದೆ, ಜುಲೈ 24ರಿಂದ 28ರವರೆಗೆ ಆಂಧ್ರ ಪ್ರದೇಶದ ಕರಾವಳಿ ಭಾಗಗಳು ಮತ್ತು ಯಾನಂ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 24ರಂದು ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಮಳೆಯಾದರೆ, ಜುಲೈ 26 ರಿಂದ 27ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ತೆಲಂಗಾಣದಲ್ಲಿ ಮುಂದಿನ 4 ದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ

ಭಾನುವಾರ (ಜುಲೈ 24) ಜಮ್ಮು ಮತ್ತು ಕಾಶ್ಮೀರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತದೆ ಎಂದು ಹೇಳಿದೆ. ಹಿಮಾಚಲ ಪ್ರದೇಶದಲ್ಲಿ 24 ರಿಂದ 28ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 26 ರಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಉತ್ತಮ ಮಳೆಯಾಗುತ್ತದೆ ಎಂದು ಹೇಳಿದೆ.

ಜುಲೈ 27 ಮತ್ತು 28 ರಂದು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜುಲೈ 24 ರಿಂದ ಎರಡು ದಿನಗಳ ಅವಧಿಯಲ್ಲಿ ಪಶ್ಚಿಮ ರಾಜಸ್ಥಾನ, ಜುಲೈ 27ರವರೆಗೆ ಪೂರ್ವ ರಾಜಸ್ಥಾನದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಮುನ್ಸೂಚನೆ ನೀಡಿದೆ.

 ಮುಂದಿನ 5 ದಿನ ಈ ಭಾಗದಲ್ಲಿ ಭಾರೀ ಮಳೆ

ಮುಂದಿನ 5 ದಿನ ಈ ಭಾಗದಲ್ಲಿ ಭಾರೀ ಮಳೆ

ಮುಂದಿನ 5 ದಿನಗಳಲ್ಲಿ ಛತ್ತೀಸ್‌ಗಢ, ವಿದರ್ಭ, ಮಧ್ಯಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಜುಲೈ 24ರಂದು ಪಶ್ಚಿಮ ಮಧ್ಯಪ್ರದೇಶದ ಮೇಲೆ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಛತ್ತೀಸ್‌ಗಢ, ವಿದರ್ಭ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಜುಲೈ 24 ಮತ್ತು 25 ರಂದು ಮತ್ತು ಪಶ್ಚಿಮ ಮಧ್ಯಪ್ರದೇಶದ ಮೇಲೆ ಜುಲೈ 25 ಮತ್ತು 26 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

 ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ಜುಲೈ 24 ರಂದು ಜಾರ್ಖಂಡ್ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜುಲೈ 24 ಮತ್ತು 25 ರಂದು ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಮೇಲೆ ಮತ್ತು ಮುಂದಿನ 5 ದಿನಗಳಲ್ಲಿ ಬಿಹಾರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಜುಲೈ 27 ಮತ್ತು 28 ರಂದು ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಮಳೆಯಾಗುತ್ತದೆ ಎಂದು ಹೇಳಿದೆ. ಮುಂದಿನ 5 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+