• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಈಶಾನ್ಯ ಭಾರತಕ್ಕೆ ಇನ್ನೂ 4-5 ದಿನ ವರುಣಾಘಾತ

|
Google Oneindia Kannada News

ನವದೆಹಲಿ, ಸೆ.02: ಈಶಾನ್ಯ ಭಾರತ ಮತ್ತು ಪಶ್ಚಿಮ ಹಿಮಾಲಯದ ಕೆಲವು ಭಾಗಗಳಲ್ಲಿ ಮುಂದಿನ 4 ರಿಂದ 5 ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶುಕ್ರವಾರ ತಿಳಿಸಿದೆ.

ಮುಂದಿನ ಐದು ದಿನಗಳಲ್ಲಿ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಶೀಘ್ರದಲ್ಲೇ ಮರಳುವುದಿಲ್ಲ ಮುಂಗಾರು- IMD ಮುನ್ಸೂಚನೆಶೀಘ್ರದಲ್ಲೇ ಮರಳುವುದಿಲ್ಲ ಮುಂಗಾರು- IMD ಮುನ್ಸೂಚನೆ

ಸೆಪ್ಟೆಂಬರ್ 2 ಮತ್ತು 3 ರಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 2 ಮತ್ತು 3 ರಂದು ಬಿಹಾರದ ಮೇಲೆ ಪ್ರತ್ಯೇಕವಾದ ಭಾರೀ ಮಳೆ ಮತ್ತು ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 3 ರಂದು ಜಾರ್ಖಂಡ್ ಮತ್ತು ಮುಂದಿನ 5 ದಿನಗಳಲ್ಲಿ ಸಬ್-ಹಿಮಾಲಯನ್ ಪಶ್ಚಿಮ ಬಂಗಾಳ (SHWB) ಮತ್ತು ಸಿಕ್ಕಿಂ ಮೇಲೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ 2 ರಂದು ಸಬ್-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾದ ಮತ್ತು ಅತ್ಯಂತ ಭಾರೀ ಮಳೆಯಾಗಲಿದ್ದು, ಸೆಪ್ಟೆಂಬರ್ 3 ಮತ್ತು 4 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 4 ರಿಂದ 6 ರ ಅವಧಿಯಲ್ಲಿ ಕರಾವಳಿ ಕರ್ನಾಟಕದ ಮೇಲೆ ಪ್ರತ್ಯೇಕವಾದ ಭಾರೀ ಮಳೆ ಮತ್ತು ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ. ಸೆಪ್ಟೆಂಬರ್ 5 ಮತ್ತು 6 ರಂದು ಉತ್ತರ ಒಳ ಕರ್ನಾಟಕ ಮತ್ತು ರಾಯಲಸೀಮಾ, ಸೆಪ್ಟೆಂಬರ್ 2 ರಂದು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದೆ.

Next 4-5 days Widespread rainfall over northeast India: IMD

ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ಕೇರಳ, ಮಾಹೆ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ.

ಸೆಪ್ಟೆಂಬರ್ 2 ರಂದು ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಉತ್ತರ ಪ್ರದೇಶದ ಮೇಲೆ ಪ್ರತ್ಯೇಕವಾದ ಚದುರಿದ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಇನ್ನು, ಮುಂಗಾರು ಮಳೆಯ ಬಗ್ಗೆ ಹವಾಮಾನ ಇಲಾಖೆ ವಾರದ ಹಿಂದೆ ನೀಡಿದ್ದ ಮುನ್ಸೂಚನೆ ಸಂಪೂರ್ಣ ಬದಲಾಗಿದೆ. ಮುಂಗಾರು ಮರಳುವ ಯಾವುದೇ ಲಕ್ಷಣಗಳಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ತಿಳಿಸಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಕೆಲ ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂದಿದೆ.

English summary
Northeast India and parts of western Himalayas are expected witness widespread rainfall for the next 4-5 days said India Meteorological Department. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X