ರಾಮ್ ನಾಥ್ ಕೋವಿಂದ್ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ
ನವದೆಹಲಿ, ಜೂನ್ 19: ಬಿಜೆಪಿ ತನ್ನ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮ್ ನಾಥ್ ಕೋವಿಂದ್ ಅವರನ್ನು ಹೆಸರಿಸಿದೆ. ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಎನ್ಡಿಎ ಅಭ್ಯರ್ಥಿಯಾಗಿ ಬಿಹಾರದ ರಾಜ್ಯಪಾಲ ರಾಮ್ ನಾಥ್ ಕೋವಿಂದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ವ್ಯಕ್ತಿ ಚಿತ್ರ: ದಲಿತ ನಾಯಕ, ವಕೀಲ ರಾಮನಾಥ್ ಕೋವಿಂದ್

ಕಾನ್ಪುರ ಮೂಲದ ಕೋವಿಂದ್ ಅವರು ವೃತ್ತಿಯಿಂದ ವಕೀಲರಾಗಿದ್ದು, ಆಗಸ್ಟ್ 08,2015ರಿಂದ ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೋವಿಂದ್ ಅವರು ಜೂನ್ 23ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು, ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ನಿತಿನ್ ಗಡ್ಕರಿ ಸೇರಿದಂತೆ ಪಕ್ಷದ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಎನ್ ಡಿಎ ಮಿತ್ರಪಕ್ಷಗಳ ಅಭಿಪ್ರಾಯ ಸಂಗ್ರಹಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.












Click it and Unblock the Notifications