ರಾಷ್ಟ್ರಪತಿ ಆಯ್ಕೆ: ಬಿಜೆಪಿ ಸಭೆ ಮುಕ್ತಾಯ, ಮೂರು ಹೆಸರು ಪ್ರಸ್ತಾವ

By: ವಿಕಾಸ್ ನಂಜಪ್ಪ
Subscribe to Oneindia Kannada

ನವದೆಹಲಿ, ಜೂನ್ 19: ಬಿಜೆಪಿಯ ಸಂಸದೀಯ ಸಮಿತಿಯು ದೆಹಲಿಯಲ್ಲಿ ಸೋಮವಾರ ಕರೆದಿದ್ದ ಸಭೆ ಮುಕ್ತಾಯವಾಗಿದೆ. ಮೂಲಗಳ ಪ್ರಕಾರ ಮೂರು ಹೆಸರು ಚರ್ಚೆಯಾಗಿದೆ. ಬಿಜೆಪಿಯ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಎಸ್ ಸಿ ಜಮೀರ್ ಹೆಸರು ಪ್ರಸ್ತಾವ ಆಗಿದೆ.

ಭಾರತದ ಮುಂದಿನ ರಾಷ್ಟಪತಿ ಯಾರು? ಈ ಮೂವರಿಗೆ ಗೊತ್ತು

ಆದರೆ, ಇಂದೇ ಹೆಸರು ಘೋಷಣೆ ಆಗುತ್ತದೆಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಕೆಲವು ಮೂಲಗಳ ಪ್ರಕಾರ ಬಿಜೆಪಿಯು ಗುರುವಾರದವರೆಗೆ ಕಾಯ್ದು, ಆ ನಂತರ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ವಿಪಕ್ಷಗಳು ಗುರುವಾರ ತಮ್ಮ ಅಭ್ಯರ್ಥಿ ಹೆಸರನ್ನು ಘೋಷಿಸುವ ಸಾಧ್ಯತೆಗಳಿವೆ.

ರಾಮ್ ನಾಥ್ ಕೋವಿಂದ್ ಮುಂದಿನ ರಾಷ್ಟ್ರಪತಿ

Next President of India: BJP meet over, three names discussed

ಪ್ರಧಾನಿ ನರೇಂದ್ರ ಮೋದಿ ಅವರೇ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ. ನಾಲ್ಕು ಮಂದಿಯ ಸಮಿತಿಯೊಂದನ್ನು ರಚಿಸಿ, ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಸೂಚಿಸುವಂತೆ ತಿಳಿಸಲಾಗಿತ್ತು. ಒನ್ಇಂಡಿಯಾಗೆ ಸಿಕ್ಕಿರುವ ಮೂಲಗಳ ಮಾಹಿತಿ ಪ್ರಕಾರ ಬಿಜೆಪಿಯ ವ್ಯಕ್ತಿಯನ್ನೇ ರಾಷ್ಟ್ರಪತಿಯನ್ನಾಗಿ ಮಾಡಲಾಗುತ್ತದೆ. ಒಮ್ಮತದ ಅಭ್ಯರ್ಥಿಯ ಆಯ್ಕೆ ಬಗ್ಗೆ ಬಿಜೆಪಿಯಿಂದ ಅಂಥ ಒಲವು ವ್ಯಕ್ತವಾಗಿಲ್ಲ.

ಭಾರತದ ರಾಷ್ಟ್ರಪತಿ ಅಯ್ಕೆ ಮಾಡುವ ಎಲೆಕ್ಟ್ರೋಲ್ ಕಾಲೇಜ್ ಹೇಗಿದೆ?

ಇನ್ನು ದೆಹಲಿಯ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಇದ್ದರು. ಜತೆಗೆ ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು, ಅರುಣ್ ಜೇಟ್ಲಿ ಹಾಗೂ ನಿತಿನ್ ಗಡ್ಕರಿ ಕೂಡ ಪಾಲ್ಗೊಂಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The BJP's Parliamentary Board is meeting in New Delhi has concluded. Sources say that there were three names that were discussed. They included, Murli Manohar Joshi, Sushma Swaraj and S C Jamir.
Please Wait while comments are loading...