Get Updates
Get notified of breaking news, exclusive insights, and must-see stories!

ಮೋದಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ರಾಮ್ ನಾಥ್ ಕೋವಿಂದ್

ನವದೆಹಲಿ, ಜೂನ್ 23: ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಸಮ್ಮುಖದಲ್ಲಿ ಎನ್ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಎಲ್ಲಾ ಹಿರಿಯ ನಾಯಕರು, ಎನ್ಡಿಎ ಬೆಂಬಲಿತ ಪಕ್ಷಗಳ ಮುಖ್ಯಸ್ಥರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೋವಿಂದ್ ರನ್ನು ಬೆಂಬಲಿಸಿರುವ ಇತರ ಪಕ್ಷಗಳ ಮುಖ್ಯಸ್ಥರು ಒಟ್ಟಾಗಿ ಕೈ ಮೇಲೆತ್ತಿ ಶಕ್ತಿ ಪ್ರದರ್ಶನ ನಡೆಸಿದರು.

ಹಿರಿಯ ನಾಯಕರಾದ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವಾರು ನಾಯಕರು ಈ ವೇಳೆ ಉಪಸ್ಥಿತರಿದ್ದರು.

ಒಟ್ಟು ನಾಲ್ಕು ಸೆಟ್ ನಾಮಪತ್ರಗಳನ್ನು ಕೋವಿಂದ್ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ಕೋವಿಂದ್, "ನನ್ನನ್ನು ಆಯ್ಕೆ ಮಾಡಿದವರಿಗೆ ಧನ್ಯವಾದಗಳು. ಹುದ್ದೆಯ ಗೌರವ ಕಾಪಾಡಲು ನಾನು ಪ್ರಯತ್ನ ಪಡುತ್ತೇನೆ," ಎಂದು ಹೇಳಿದರು.

Next President of India: Kovind filed nomination in presence of Modi

ಎನ್ಡಿಎ ಮೈತ್ರಿಕೂಟ ರಾಷ್ಟ್ರಪತಿ ಚುನಾವಣೆಗೆ ರಾಮ್ ನಾಥ್ ಕೋವಿಂದ್ ರನ್ನು ಅಭ್ಯರ್ಥಿಯನ್ನಾಗಿ ಆರಿಸಿತ್ತು. ಇದೀಗ ವಿಪಕ್ಷಗಳೂ ಗುರುವಾರ ತಮ್ಮಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿರುವುದರಿಂದ ಚುನಾವಣೆ ನಡೆಯುವುದು ಖಚಿತವಾಗಿದೆ.

ವಿಪಕ್ಷಗಳ ಕಡೆಯಿಂದ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಸ್ಪೀಕರ್ ಮೀರಾ ಕುಮಾರ್ ಕಣಕ್ಕಿಳಿಯಲಿದ್ದಾರೆ. ಆದರೆ ಮತಗಳ ಲೆಕ್ಕಾಚಾರದಲ್ಲಿ ಅವರು ಗೆಲ್ಲುವ ಸಾಧ್ಯತೆಗಳು ಮಾತ್ರ ವಿರಳವಾಗಿವೆ.

Next President of India: Kovind filed nomination in presence of Modi

ಜೂನ್ 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜುಲೈ 17ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಎಲ್ಲಾ ಸಂಸದರು ಮತ್ತು ರಾಜ್ಯಗಳ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+