ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ

By Sachhidananda Acharya
|
Google Oneindia Kannada News

ನವದೆಹಲಿ, ಜೂನ್ 28: ರಾಷ್ಟ್ರಪತಿ ಚುಣಾವಣೆಗೆ 17 ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಅವರು ನಾಮಪತ್ರ ಸಲ್ಲಿಸಿದರು.

ಮೋದಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ರಾಮ್ ನಾಥ್ ಕೋವಿಂದ್ಮೋದಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ ರಾಮ್ ನಾಥ್ ಕೋವಿಂದ್

ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಪುತ್ರಿಯೂ ಆಗಿರುವ ಮೀರಾ ಕುಮಾರ್ ಈ ಹಿಂದೆ ಕೇಂದ್ರ ಸಚಿವೆಯಾಗಿ, ಲೋಕಸಭಾ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ ಻ಅನುಭವ ಹೊಂದಿದ್ದಾರೆ.

Next President of India: Meira Kumar filed nomination in presence of Sonia Gandhi

ನಾಮಪತ್ರ ಸಲ್ಲಿಕೆ ವೇಳೆ ಎನ್.ಸಿ.ಪಿಯ ಶರದ್ ಪವಾರ್, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಮಾವೋವಾದಿ ಕಮ್ಯೂನಿಸ್ಟ್ ಪಕ್ಷದ ಸೀತಾರಾಂ ಯೆಚೂರಿ, ಓಮರ್ ಅಬ್ದುಲ್ಲಾ ಮೊದಲಾದ ನಾಯಕರ ಉಪಸ್ಥಿತರಿದ್ದರು.

ಈ ಹಿಂದೆ ಜೂನ್ 23ರಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಎನ್ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದ್ದರು.

ಜೂನ್ 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜುಲೈ 17ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಎಲ್ಲಾ ಸಂಸದರು ಮತ್ತು ರಾಜ್ಯಗಳ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

English summary
Meira Kumar filed his nomination papers today for the next President of India elections. The UPA and opposition's candidate Kumar filed his nomination papers in the presence of Former Prime Minister Manmohan Singh and AICC president Sonia Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X