ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಚುನಾವಣೆ, ಸೋನಿಯಾ ಗಾಂಧಿ ಜತೆ ಬಿಜೆಪಿ ನಾಯಕರ ಚರ್ಚೆ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜೂನ್ 14: ಮುಂದಿನ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಸಂಜೆ ಸೋನಿಯಾ ಗಾಂಧಿಯವರನ್ನು ಬಿಜೆಪಿ ನಾಯಕರಾದ ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ಇಂದು ಸಂಜೆ ವಿಪಕ್ಷಗಳ ಸಭೆ ನಡೆಯಲಿದ್ದು ಈ ಸಭೆಯ ನಂತರ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಮೋದಿಯಿಂದ 'ಮೂಲ ಭಾರತದ ಕಲ್ಪನೆ'ಯನ್ನು ರಕ್ಷಿಸಬೇಕಿದೆ - ಸೋನಿಯಾಮೋದಿಯಿಂದ 'ಮೂಲ ಭಾರತದ ಕಲ್ಪನೆ'ಯನ್ನು ರಕ್ಷಿಸಬೇಕಿದೆ - ಸೋನಿಯಾ

 Next President of India: Rajnath, Naidu to meet Sonia Gandhi

ಈಗಾಗಲೆ ಎನ್ಡಿಎ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚುನಾವಣಾ ಸಮಿತಿಯೊಂದನ್ನು ರಚನೆ ಮಾಡಿದೆ. ಈಗಾಗಲೇ ವಿಪಕ್ಷಗಳು ಸರ್ವಸಮ್ಮತ ಅ಻ಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಬೇಡಿಕೆ ಮುಂದಿಟ್ಟಿವೆ.

ಮತ್ತೊಂದು ಹಗರಣ ಬಯಲಿಗೆಳೆದ ಅರ್ನಬ್: ಈ ಬಾರಿ ಸೋನಿಯಾ ಅಳಿಯಮತ್ತೊಂದು ಹಗರಣ ಬಯಲಿಗೆಳೆದ ಅರ್ನಬ್: ಈ ಬಾರಿ ಸೋನಿಯಾ ಅಳಿಯ

ಇಲ್ಲಿಯವರೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 23ರಂದು ಬಿಜೆಪಿ ಕಡೆಯಿಂದ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗುವ ಸಾಧ್ಯತೆ ಇದೆ.

ಜುಲೈ 17ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಜುಲೈ 20ರಂದು ಮತ ಎಣಿಕೆ ನಡೆಯಲಿದೆ.

English summary
Rajnath SIngh and Venkaiah Naidu will meet with Sonia Gandhi to hold discussions on a candidate for the next President of India. The meeting is expected to held after the opposition meets later today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X