Get Updates
Get notified of breaking news, exclusive insights, and must-see stories!

ರಾಷ್ಟ್ರಪತಿ ಸ್ಥಾನಕ್ಕೆ ಸುಮಿತ್ರಾ, ಉಪರಾಷ್ಟ್ರಪತಿಯಾಗಿ ವೆಂಕಯ್ಯ!

ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ ಎನ್ನುವಷ್ಟರಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹೆಸರು ಕೇಳಿ ಬಂದಿದೆ.

ನವದೆಹಲಿ, ಜೂನ್ 06: ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ ಎನ್ನುವಷ್ಟರಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹೆಸರು ಕೇಳಿ ಬಂದಿದೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಎನ್ ಡಿಎ ಹಾಗೂ ಯುಪಿಎ ನಡುವೆ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕಸರತ್ತು ನಡೆದಿದೆ. ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ.[ಭಾರತದ ರಾಷ್ಟ್ರಪತಿ ಅಯ್ಕೆ ಮಾಡುವ ಎಲೆಕ್ಟ್ರೋಲ್ ಕಾಲೇಜ್ ಹೇಗಿದೆ?]

Next President of India, Vice-President: Is it Sumitra Mahajan and Venkaiah Naidu

ಸದ್ಯದ ಮಾಹಿತಿಯಂತೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ರಾಷ್ಟ್ರಪತಿ ಸ್ಥಾನಕ್ಕೆ ಹಾಗೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧೆಗಿಳಿಯುವಂತೆ ಸೂಚಿಸಲಾಗಿದೆ.[ಈ 20 ಪ್ರಭಾವಿ ವ್ಯಕ್ತಿಗಳಲ್ಲಿ ರಾಷ್ಟ್ರಪತಿಯಾಗಲು ಯಾರು ಸಮರ್ಥರು?]

ಕಾಂಗ್ರೆಸ್ಸಿನಿಂದ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರಲ್ಲದೆ, ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲ, ಮಹಾತ್ಮಾ ಗಾಂಧೀಜಿ ಅವರ ಮೊಮ್ಮಗ ಗೋಪಾಲ್ ಕೃಷ್ಣ ಗಾಂಧಿ ಅವರ ಹೆಸರನ್ನು ಕೂಡಾ ಕಾಂಗ್ರೆಸ್ ತೇಲಿ ಬಿಟ್ಟಿದೆ.[ಶೇಕಡಾ 54 ಮತಗಳೊಂದಿಗೆ ರಾಷ್ಟ್ರಪತಿ ಸ್ಥಾನ ಬಿಜೆಪಿ ಪಾಲು]

ಮುಂದಿನ ರಾಷ್ಟ್ರಪತಿ ಯಾರಾಗಬೇಕು ಎಂಬ ಚರ್ಚೆ ದೇಶದಾದ್ಯಂತ ಜಾರಿಯಲ್ಲಿದೆ. ಬಿಜೆಪಿಯಿದ ಈಗಾಗಲೇ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ರಜನೀಕಾಂತ್, ದ್ರೌಪದಿ ಮುರ್ಮು ಮತ್ತು ಉಮಾ ಭಾರತಿಯ ಹೆಸರು ದೇಶದ ಪರಮೋಚ್ಛ ಹುದ್ದೆಗೆ ಕೇಳಿ ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+