ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ 5ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜೂನ್ 29: ಮುಂದಿನ ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 5ರಂದು ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಇಂದು ಘೋಷಣೆ ಮಾಡಿದೆ.

ಎಲೆಕ್ಟೋರಲ್ ಕಾಲೇಜು ವಿಧಾನದ ಮೂಲಕ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕಾಗಿ ಗುಪ್ತ ಮತದಾನ ನಡೆಯಲಿದೆ. ಈ ಕಾರಣದಿಂದ ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗಕ್ಕೆ ಸ್ಪಷ್ಟವಾಗಿ ಹೇಳಿದೆ.

Next Vice-President of India elections on August 5, counting same day

ಒಂದೊಮ್ಮೆ ವಿಪ್ ನೀಡಿದಲ್ಲಿ ಇದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆ ಮೊದಲು ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅಥವಾ ಅವರ ಸೂಚಕರು ನಾಮಪತ್ರಗಳನ್ನು ಸಲ್ಲಿಸಬಹುದು. ಇನ್ನು ಅಭ್ಯರ್ಥಿಗಳು 15,000 ಭದ್ರತಾ ಠೇವಣಿಯನ್ನೂ ಇಡಬೇಕು ಎಂದು ಚುನಾವಣಾ ಆಯೋಗ ಹೇಳಿಕದೆ.

ಚುನಾವಣಾ ವೇಳಾಪಟ್ಟಿ
ನಾಮಪತ್ರ ಸಲ್ಲಿಸಲು ಕೊನೆಯ ದಿನ-ಜುಲೈ 18
ನಾಮಪತ್ರ ಪರಿಶಿಲನೆ-ಜುಲೈ 19
ನಾಮಪತ್ರ ಹಿಂತೆಗೆತ-ಜುಲೈ 21
ಮತದಾನ - ಆಗಸ್ಟ್ 5
ಮತ ಎಣಿಕೆ -ಆಗಸ್ಟ್ 5
ಮೊಹಮ್ಮದ್ ಹಮೀದ್ ಅನ್ಸಾರಿ ಹಾಲಿ ಉಪರಾಷ್ಟ್ರಪತಿಗಳಾಗಿದ್ದು ಅವರ ಸ್ಥಾನಕ್ಕೆ ಹೊಸಬರ ನೇಮಕವಾಗಬೇಕಿದೆ.

English summary
The elections to the next Vice- President of India will be held on August 5. The announcement was made by the Election Commission of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X