National Highways: ರಾಷ್ಟ್ರಿಯ ಹೆದ್ದಾರಿಯಲ್ಲಿ ಅಪಘಾತಗಳ ತಡೆಗೆ NHAI ಮಹತ್ವದ ನಿರ್ಧಾರ
National Highways: ದೇಶದಲ್ಲಿ ತುಂಬಾ ಹೆದ್ದಾರಿಗಳಿವೆ. ಇದರಲ್ಲೂ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಎಂಬ ವಿಧಗಳಿವೆ. ಈ ರಸ್ತೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಅದರಲ್ಲೂ ಬಿಡಾಡಿ ದನಗಳಿಂದ ಇಂತಹ ಪ್ರಕರಣಗಳು ಹೆಚ್ಚೆಚ್ಚು ಸಂಭವಿಸಿವೆ ಎನ್ನುವ ಬಗ್ಗೆ ವರದಿಯಾಗಿದ್ದವು. ಇದೀಗ ಇವುಗಳನ್ನು ನಿಯಂತ್ರಣಕ್ಕೆ ತರಲು ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಡಾಡಿ ದನಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ನಿಯಂತ್ರಿಸುವ ಉದ್ದೇಶದಿಂದ ಹೆದ್ದಾರಿ ಬದಿಯಲ್ಲಿ ಪ್ರಾಯೋಗಿಕವಾಗಿ ಗೋಶಾಲೆ ತೆರೆಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

ಬಿಡಾಡಿ ದನಗಳ ಹಾವಳಿಯಿಂದ ಪ್ರಯಾಣಿಕರ ಸುಗಮ ಸಂಚಾರಕ್ಕೆ ತುಂಬಾ ತೊಂದರೆ ಆಗಿರುವ ಉದಾಹರಣೆಗಳಿವೆ. ದನಗಳು ಹಾಗೂ ಇತರೆ ಪ್ರಾಣಿಗಳಿಂದ ವಾಹನಗಳ ಸಂಚಾರಕ್ಕೆ ಆಗುತ್ತಿರುವ ತೊಂದರೆಗಳನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಂಗಳವಾರ (ಡಿಸೆಂಬರ್ 24) ತಿಳಿಸಿದೆ.
0.1ರಿಂದ 20.29 ಹೆಕ್ಟೇರ್ ಪ್ರದೇಶದಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುತ್ತದೆ. ದೇಶದ ಎಲ್ಲಾ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುತ್ತದೆ. ಪ್ರಾರಂಭದಲ್ಲಿ ಉತ್ತರಪ್ರದೇಶದ ಅಥವಾ ಹರಿಯಾಣದ ಗಡಿ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 334ಬಿ ವ್ಯಾಪ್ತಿಯಲ್ಲಿ ಗೋಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈ ಕುರಿತು ಗವಾರ್ ಕನ್‌ಕ್ಟ್ರಕ್ಷನ್ ಕಂಪನಿ ಜೊತೆಗೆ ಒಡಂಬಡಿಕೆ ಸಹಿ ಹಾಕಲಾಗಿದೆ ಎಂದು ತಿಳಿಸಿದೆ.
ಇನ್ನು ಈ ಗೋಶಾಲೆಗಳಲ್ಲಿ ತುರ್ತು ಚಿಕಿತ್ಸೆ, ಮೇವು, ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಅಲ್ಲದೆ, ಅವುಗಳ ಆರೋಗ್ಯದ ಮೇಲೆ ನಿಗಾ ಇಡಲು ಸಿಬ್ಬಂದಿ ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದೆ. ಅಪಘಾತಗಳಿಂದ ಗಾಯಗೊಳ್ಳುವ ಪ್ರಾಣಿಗಳಿಗೆ ಚಿಕಿತ್ಸೆ ಹಾಗೂ ಆರೈಕೆಗಾಗಿ ಪ್ರತಿ 50 ಕಿಲೋ ಮೀಟರ್ ಅಂತರದಲ್ಲಿ ಪಶು ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.
ಕಾಮಗಾರಿ ಶಿಘ್ರವೇ ಆರಂಭ: ಈಗಾಗಲೇ ದೇಶದಲ್ಲಿ ಕೆಲವು ಎಕ್ಸ್‌ಪ್ರೆಸ್ ವೇಗಳು ವಾಹನ ಸಂಚಾರಕ್ಕೆ ಮುಕ್ತವಾಗಿವೆ. ಮತ್ತೊಂದೆಡೆ ಇನ್ನೂ ಹಲವು ಹೆದ್ದಾರಿಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದೀಗ ಬೆಂಗಳೂರು-ಪುಣೆ ದಶಪಥ ಹೆದ್ದಾರಿ ಕಾಮಗಾರಿ ಶಿಘ್ರದಲ್ಲೇ ಆರಂಭವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದು ನಿರ್ಮಾಣವಾದರೆ, ಇದರಿಂದ ತುಮಕೂರು ಜಿಲ್ಲೆಯ ಶಿರಾಕ್ಕೆ ಏನೆಲ್ಲ ಪ್ರಯೋಜನೆಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು-ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ (ವಿಷನ್-47) ಕಾಮಗಾರಿ ಅತಿ ಶೀಘ್ರದಲ್ಲಿ ಪ್ರಾರಂಭ ಆಗಲಿದ್ದು, ಇದರಿಂದಾಗಿ ಶಿರಾ ತಾಲೂಕಿನ ಚಿತ್ರಣವೇ ಬದಲಾವಣೆ ಆಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಶಿರಾ ತಾಲೂಕಿನ ತೊಗರಗುಂಟೆ ಬಳಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಶಿರಾ-ಅಮರಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ ಈಗಾಗಲೇ 3 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿವೆ. ಶೀಘ್ರದಲ್ಲಿ ಬೆಂಗಳೂರು-ಪುಣೆ ಹೆದ್ದಾರಿ ಕಾಮಗಾರಿ ಪ್ರಾರಂಭ ಆಗಲಿದೆ. ಇದು ಪೂರ್ಣಗೊಂಡಡೆ ಒಟ್ಟು 4 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುವುದರಿಂದ ಮುಂದಿನ ದಿನಗಳಲ್ಲಿ ತಾಲೂಕು ಅಭಿವೃದ್ಧಿಯತ್ತ ಸಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ತುಮಕೂರು ಜಿಲ್ಲೆಯ ಶಿರಾ-ಅಮರಾಪುರ ರಸ್ತೆ ಕಾಮಗಾರಿ ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡಲಾಗುತ್ತಿದೆ. ರಸ್ತೆ ಗುಣಮಟ್ಟಕ್ಕೆ ಆದ್ಯತೆ ನೀಡಿ, ಹಣದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಇನ್ನು ಹೆಚ್ಚಿನ ಹಣ ಬೇಕಾದ್ರೆ, ನನಗೆ ಹೇಳಿ ಕೊಡಿಸುತ್ತೇನೆ. ತಾಲೂಕಿನಲ್ಲಿ ಒಟ್ಟು 4 ಹೆದ್ದಾರಿಗಳು ಹಾದು ಹೋಗಬೇಕು. ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.












Click it and Unblock the Notifications