ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ, ಆಂಧ್ರ, ಕೇರಳ, ತಮಿಳುನಾಡು ಸೇರಿ 10 ರಾಜ್ಯಗಳಲ್ಲಿ ಎನ್‌ಐಎ,ಇಡಿ, ಪೊಲೀಸ್ ದಾಳಿ

|
Google Oneindia Kannada News

ನವದೆಹಲಿ, ಸೆ.22: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಜ್ಯ ಪೊಲೀಸ್ ಪಡೆಗಳ ಜಂಟಿ ತಂಡವು ಮೊಟ್ಟಮೊದಲ ಬಾರಿಗೆ ದೊಡ್ಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿವೆ. 10 ರಾಜ್ಯಗಳಾದ್ಯಂತ ನಡೆಯುತ್ತಿರುವ ದಾಳಿಯಲ್ಲಿ ಈವರೆಗೆ 100 ಕ್ಕೂ ಹೆಚ್ಚು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯ ಗುರುವಾರ ಬೆಳಗ್ಗೆ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.

NIA raids PFI offices : ಪಿಎಫ್‌ಐ ರಾಷ್ಟ್ರೀಯ ಕಾರ್ಯದರ್ಶಿ ಬೆಂಗಳೂರು ಮನೆ ಮೇಲೆ ಇಡಿ, ಎನ್‌ಐಎ ದಾಳಿNIA raids PFI offices : ಪಿಎಫ್‌ಐ ರಾಷ್ಟ್ರೀಯ ಕಾರ್ಯದರ್ಶಿ ಬೆಂಗಳೂರು ಮನೆ ಮೇಲೆ ಇಡಿ, ಎನ್‌ಐಎ ದಾಳಿ

ಪಿಎಫ್‌ಐ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ, ಭಯೋತ್ಪಾದನಾ ನಿಗ್ರಹ ಸಂಸ್ಥೆಯು ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ಹತ್ತು ರಾಜ್ಯಗಳಲ್ಲಿ ದಾಳಿ ನಡೆಸಿದೆ.

NIA, ED arrest over 100 PFI leaders in raids across 10 states

ರಾಷ್ಟ್ರವ್ಯಾಪಿ ದಾಳಿಯಲ್ಲಿ 100 ಕ್ಕೂ ಹೆಚ್ಚು ಪಿಎಫ್‌ಐ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎನ್‌ಐಎ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಜ್ಯ ಪೊಲೀಸರು ಸಂಘಟಿತ ಕ್ರಮದಲ್ಲಿ ದಾಳಿ ನಡೆಸಿದ್ದಾರೆ.

ಮಂಗಳೂರು: ಎಸ್‌ಡಿಪಿಐ, ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ದಾಳಿಮಂಗಳೂರು: ಎಸ್‌ಡಿಪಿಐ, ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ದಾಳಿ

ದಾಳಿಗಳನ್ನು ಖಂಡಿಸಿರುವ ಪಿಎಫ್‌ಐ, "ಪಿಎಫ್‌ಐನ ರಾಷ್ಟ್ರೀಯ, ರಾಜ್ಯ ಮತ್ತು ಸ್ಥಳೀಯ ನಾಯಕರ ಮನೆಗಳ ಮೇಲೆ ದಾಳಿಗಳು ನಡೆಯುತ್ತಿವೆ. ರಾಜ್ಯ ಸಮಿತಿ ಕಚೇರಿಯ ಮೇಲೂ ದಾಳಿ ನಡೆಸಲಾಗುತ್ತಿದೆ. ಭಿನ್ನಾಭಿಪ್ರಾಯದ ಧ್ವನಿಗಳನ್ನು ಅಡಗಿಸಲು ಏಜೆನ್ಸಿಗಳನ್ನು ಬಳಸಿಕೊಳ್ಳುವ ಫ್ಯಾಸಿಸ್ಟ್ ಆಡಳಿತದ ಕ್ರಮಗಳನ್ನು ನಾವು ಬಲವಾಗಿ ಪ್ರತಿಭಟಿಸುತ್ತೇವೆ" ಎಂದು ಹೇಳಿಕೆಯಲ್ಲಿ ತಿಳಿಸಿದೆ.

NIA, ED arrest over 100 PFI leaders in raids across 10 states

ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವಲ್ಲಿ ತೊಡಗಿರುವ ವ್ಯಕ್ತಿಗಳ ಮನೆ ಮತ್ತು ಅಧಿಕೃತ ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಅಧಿಖಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಪೇಸಿಎಂ ಪೋಸ್ಟರ್ ಪ್ರಕರಣ ಸಿಸಿಬಿಗೆ ವರ್ಗಾವಣೆಬೆಂಗಳೂರಿನ ಪೇಸಿಎಂ ಪೋಸ್ಟರ್ ಪ್ರಕರಣ ಸಿಸಿಬಿಗೆ ವರ್ಗಾವಣೆ

ಮಂಗಳವಾರ, ತೆಲಂಗಾಣ ಮತ್ತು ಆಂಧ್ರಪ್ರದೇಶದ 38 ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಭಯೋತ್ಪಾದನಾ ವಿರೋಧಿ ಸಂಸ್ಥೆಯು ನಾಲ್ವರು ಪಿಎಫ್‌ಐ ಪದಾಧಿಕಾರಿಗಳನ್ನು ಬಂಧಿಸಿ, ಅವರ ಮೇಲೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಹೊರಿಸಿದೆ.

ಕಾರ್ಯಾಚರಣೆಯಲ್ಲಿ, ಎನ್ಐಎ ಡಿಜಿಟಲ್ ಸಾಧನಗಳು, ದಾಖಲೆಗಳು, ಎರಡು ಶಶ್ತ್ರಾಸ್ತ್ರ ಮತ್ತು 8,31,500 ರೂಪಾಯಿ ನಗದು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಂಡಿದೆ.

English summary
National Investigation Agency and enforcement directorate conducting searches in multiple locations linked to Popular Front Of India (PFI) in several states including Karnataka. over 100 leaders arrested. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X