ಸಂಸತ್ ಭವನದ ಮೇಲೆ ಮತ್ತೆ ಉಗ್ರರ ಕಣ್ಣು!

ನವದೆಹಲಿ, ಜನವರಿ 01: 2001ರ ಸಂಸತ್ ಭವನ ಮೇಲಿನ ದಾಳಿಯ ಕರಾಳ ನೆನಪುಗಳು ಜನರ ಮನಸ್ಸಿಂದ ಮಾಸುವ ಮುನ್ನವೇ ಇದೀಗ ಮತ್ತೆ ಭಾರತದ ಆಡಳಿತ ಶಕ್ತಿ ಕೇಂದ್ರವಾಗಿರುವ ಸಂಸತ್ ಭವನದ ಮೇಲೆ ಮತ್ತೆ ಉಗ್ರರ ಕರಿನೆರಳು ಬಿದ್ದಿದೆ. ಉಗ್ರರ ಸಂಭವನೀಯ ದಾಳಿಯ ಬಗ್ಗೆ ರಾಷ್ಟ್ರೀಯ ಬೇಹುಗಾರಿಕೆ ಸಂಸ್ಥೆ ಎಚ್ಚರಿಕೆ ನೀಡಿದೆ.

ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಸಂಸತ್ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎಂದು ಸೋಮವಾರ ರಾಷ್ಟ್ರೀಯ ಬೇಹುಗಾರಿಕೆ ಸಂಸ್ಥೆ ತಿಳಿಸಿದೆ. ಹಿನ್ನೆಲೆಯಲ್ಲಿ ಸಂಸತ್ ಭವನದ ಸುತ್ತ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ

NIA issues alert of possible terror attack on Indian Parliament by terror outfit Jaish-e-Mohammed

ಈ ಹಿಂದೆ ಸಂಸತ್ ಭವನದ ಮೇಲೆ 2001ರ ಡಿಸೆಂಬರ್ 13ರಂದು ಪಾಕಿಸ್ತಾನದ ಉಗ್ರರು ದಾಳಿ ನಡೆಸಿದ್ದರು. ಇದೀಗ ಮತ್ತೆ ಉಗ್ರಗಾಮಿಗಳು ಸಂಸತ್ ಭವನದ ಮೇಲೆ ದಾಳಿಕೆ ಹೊಂಚು ಹಾಕಿರುವುದು ದೇಶವನ್ನು ಬೆಚ್ಚಿಬೀಳಿಸಿದೆ.

ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಸಂಸತ್ ಭವನದ ಸುತ್ತ ಕಟ್ಟೆಚ್ಚರವಹಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+