ಪಹಲ್ಗಾಮ್ ದಾಳಿ: ಉಗ್ರರು ಬಳಕೆ ಮಾಡಿದ್ದು ಚೀನಾದ ಸ್ಯಾಟಲೈಟ್ ಫೋನ್
ನವದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದೆ. ಎನ್‌ಐಎ ಅಧಿಕಾರಿಗಳು ಹಲವು ತಂಡಗಳಾಗಿ ದೇಶದ ವಿವಿಧ ಭಾಗದಲ್ಲಿ ತನಿಖೆಯನ್ನು ಕೈಗೊಂಡಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಕುಟುಂಬಸ್ಥರ ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.
ಪಹಲ್ಗಾಮ್ ದಾಳಿಯ ವೇಳೆ ಎಷ್ಟು ಉಗ್ರರು ಇದ್ದರು? ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಉಗ್ರರು ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಎನ್‌ಐಎ ತನಿಖೆ ವೇಳೆ ಬಯಲಾಗಿದೆ. ಅಲ್ಲದೇ ಈ ಸ್ಯಾಟಲೈಟ್ ಫೋನ್ ಚೀನಾ ಮೂಲದ ಕಂಪನಿಯದ್ದಾಗಿದ್ದು, ಭಾರತದಲ್ಲಿ ಇದರ ಬಳಕೆಗೆ ನಿಷೇಧವಿದೆ. ಆದ್ದರಿಂದ ಸ್ಯಾಟಲೈಟ್ ಫೋನ್ ಅನ್ನು ಕಳ್ಳಸಾಗಣೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಎನ್‌ಐಎ ಪ್ರಾಥಮಿಕ ತನಿಖೆಯಲ್ಲಿ ಉಗ್ರರು ಚೀನಾದ ತಂತ್ರಜ್ಞಾನ ಮತ್ತು ದೂರಸಂಪರ್ಕ ಸಂಸ್ಥೆ ಹುವಾಯ್‌ನ ಸ್ಯಾಟಲೈಟ್ ಫೋನ್ ಬಳಕೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ದಾಳಿ ನಡೆದ ದಿನ ಪಹಲ್ಗಾಮ್ ಪ್ರದೇಶದಲ್ಲಿ ಹಲವಾರು ಬಾರಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವ ಕುರಿತು ಎನ್‌ಐಎ ಮಾಹಿತಿ ಸಂಗ್ರಹ ಮಾಡಿದೆ.
ಚೀನಾದ ತಂತ್ರಜ್ಞಾನ ಮತ್ತು ದೂರಸಂಪರ್ಕ ಸಂಸ್ಥೆ ಹುವಾಯ್‌ನ ಉತ್ಪನ್ನಗಳನ್ನು ಭಾರತದಲ್ಲಿ ಬಳಕೆ ಮಾಡುವಂತಿಲ್ಲ. ಹುವಾಯ್‌ನ ಸ್ಯಾಟಲೈಟ್ ಫೋನ್‌ಗಳನ್ನು ಪಾಕಿಸ್ತಾನ ಅಥವ ಬೇರೆ ದೇಶದಿಂದ ಕಳ್ಳಸಾಗಣೆ ಮೂಲಕ ಭಾರತಕ್ಕೆ ತರಲಾಗಿದೆ ಎಂದು ಎನ್‌ಐಎ ಅಂದಾಜಿಸಿ, ತನಿಖೆ ಮುಂದುವರೆಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.
ಪಹಲ್ಗಾಮ್ ಉಗ್ರರ ದಾಳಿಯನ್ನು ಯಾರು ಮಾಡಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ. ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಯ ಅಂಗ ಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಈ ದಾಳಿಯನ್ನು ನಡೆಸಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ವರ್ಷದಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ದಾಳಿಗೆ ಅಮೆರಿಕ ನಿರ್ಮಿತ ಎಂ-4 ರೈಫಲ್ ಬಳಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಪಾಕಿಸ್ತಾನದಿಂದ ಒಳನುಸುಳುತ್ತಿದ್ದ 5 ಉಗ್ರರನ್ನು ಭದ್ರತಾ ಪಡೆಗಳು ಕೊಂದು ಹಾಕಿದ್ದರು. ಆಗ ಅವರ ಬಳಿಯೂ ಎಂ-4 ರೈಫಲ್ ಪತ್ತೆಯಾಗಿತ್ತು.
ಭಯೋತ್ಪಾದಕರ ಬಳಿ ಎಂ-4 ರೈಫಲ್ ಹೇಗೆ ಬಂದಿದೆ? ಎಂಬುದು ಪ್ರಶ್ನೆಯಾಗಿದೆ. ಪಾಕಿಸ್ತಾನದ ಸೇನೆ ಬಳಿ ಈ ಎಂ-4 ರೈಫಲ್‌ಗಳಿವೆ. ಇದನ್ನು ಉಗ್ರರಿಗೆ ನೀಡುವ ಮೂಲಕ ಪಾಕಿಸ್ತಾನ ಉಗ್ರರಿಗೆ ಬೆಂಬಲ ನೀಡುತ್ತಿದೆ ಎಂದು ಶಂಕಿಸಲಾಗಿದೆ.
ಕೆಲವು ದಿನಗಳ ಹಿಂದೆ ಬಿಬಿಸಿಯಲ್ಲಿ ವರದಿಯೊಂದು ಪ್ರಕಟವಾಗಿತ್ತು. ತಾಲಿಬಾನ್ ಉಗ್ರರ ಬಳಿ ಇದ್ದ ಅಮೆರಿಕ ತಯಾರು ಮಾಡಿದ್ದ ಶಸ್ತ್ರಾಸ್ತ್ರಗಳು ಕಳುವಾಗಿದೆ ಅಥವ ಅದನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ವರದಿ ಹೇಳಿತ್ತು. ಎಂ-4 ರೈಫಲ್‌ಗಳನ್ನು ಕಳ್ಳಸಾಗಣೆ ಮಾಡಿ ಉಗ್ರರ ಗುಂಪಿಗೆ ನೀಡಿರುವ ಸಾಧ್ಯತೆಯೂ ಇದೆ.
ಒಂದು ಕಡೆ ಎನ್‌ಐಎ ಪಹಲ್ಗಾಮ್ ಉಗ್ರರ ದಾಳಿ ಕುರಿತು ತನಿಖೆ ಕೈಗೊಂಡಿದೆ. ಮತ್ತೊಂದು ಕಡೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನಾಪಡೆ ಉಗ್ರರಿಗಾಗಿ ಹುಡುಕಾಟ ನಡೆಸುತ್ತಿದೆ. ಉಗ್ರರಿಗೆ ಬೆಂಬಲ ನೀಡಿದವರ ಮನೆಗಳನ್ನು ಗುರುತಿಸಿ ಅವುಗಳನ್ನು ನಾಶಪಡಿಸಲಾಗುತ್ತಿದೆ. ಆದರೆ ಪಹಲ್ಗಾಮ್ ದಾಳಿಯಲ್ಲಿ ಎಷ್ಟು ಉಗ್ರರು ಭಾಗಿಯಾಗಿದ್ದರು ಎಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications