ಜಮ್ಮು : 9 ಜನ ಯೋಧರು ಸೇರಿ ನೂರಾರು ಜನ ಬಲಿ
ಶ್ರೀನಗರ, ಸೆ.6: ಜಮ್ಮುವಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಸ್ಲುಕಿರುವ ನಾಗರಿಕರನ್ನು ರಕ್ಷಿಸಲು ತೆರಳಿದ್ದ 9 ಭದ್ರತಾ ಪಡೆ ನೀರಿನಲ್ಲಿ ಕೊಚ್ಚಿಹೋಗಿರುವ ದುರ್ಘಟನೆ ಸಂಭವಿಸಿದೆ. ಒಟ್ಟಾರೆ ಮಳೆರಾಯನ ಅಬ್ಬರಕ್ಕೆ ಕಣಿವೆ ರಾಜ್ಯದಲ್ಲಿ ನೂರಾರು ಮಂದಿ ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಬಳಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಯಲ್ಲಿ ಯೋಧರು ತೊಡಗಿದ್ದರು. ಈ ವೇಳೆ ಪ್ರವಾಹದ ರಭಸಕ್ಕೆ ದೋಣಿ ಸಮೇತ ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾಹದಲ್ಲಿ ಕೊಚ್ಚಿ ಹೋದ ಯೋಧರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.[ಕಣಿವೆ ರಾಜ್ಯದಲ್ಲಿ ಭೂ ಕುಸಿತ, ಪ್ರವಾಹಕ್ಕೆ ಜನ ಬಲಿ]
ರಕ್ಷಣಾ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ಸೇನೆ ಮತ್ತು ಪೊಲೀಸರು ಸೇರಿದಂತೆ ಒಟ್ಟು 85 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದುವರೆವಿಗೂ ಸಾವನ್ನಪ್ಪಿರುವವರ ಸಂಖ್ಯೆ 120 ದಾಟಿದೆ. ಜಮ್ಮು-ಉದಮ್, ಕತಾರ ರೈಲು ಸಂಪರ್ಕ ಸ್ಥಗಿತಗೊಂಡಿದೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಸ್ವತಃ ಕಾಶ್ಮೀರಕ್ಕೆ ತೆರಳಿದ್ದು ಪ್ರವಾಹ ಪರಿಸ್ಥಿತಿಯನ್ನು ಅವಲೋಕನ ನಡೆಸುತ್ತಿದ್ದಾರೆ.

ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಂಚಾರ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಐದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನತೆ ತತ್ತರಿಸಿದ್ದಾರೆ.

ನೀರಿನಲ್ಲಿ ಕೊಚ್ಚಿಹೋಗಿರುವ ದುರ್ಘಟನೆ
ರಕ್ಷಣಾ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಭಾರತೀಯ ಸೇನೆ ಮತ್ತು ಪೊಲೀಸರು ಸೇರಿದಂತೆ ಒಟ್ಟು 85 ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದುವರೆವಿಗೂ ಸಾವನ್ನಪ್ಪಿರುವವರ ಸಂಖ್ಯೆ 120 ದಾಟಿದೆ. ಇವರಲ್ಲಿ 9 ಭದ್ರತಾ ಪಡೆ ಯೋಧರು ಸೇರಿದ್ದಾರೆ.

ರೈಲು ಸಂಪರ್ಕವನ್ನು ಸ್ಧಗಿತ
ಪ್ರವಾಹದಿಂದಾಗಿ ತಾವಿ ನದಿ ಮೇಲಿನ 3 ಸೇತುವೆಗಳು ಮುಳುಗಡೆಯಾಗಿದ್ದು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದೇ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು-ಉದಮ್‌ಪುರ-ಕತಾರ ರೈಲು ಸಂಪರ್ಕವನ್ನು ಸ್ಧಗಿತಗೊಳಿಸಲಾಗಿದೆ.

ಬಲಿಯಾದವರ ಸಂಖ್ಯೆ ಏರುತ್ತಿದೆ
ಪೂಂಚ್ ಮತ್ತು ಕಿಶ್ತ್‌ವಾರ್ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹದಲ್ಲಿ ಜನರು ಕೊಚ್ಚಿ ಹೋಗಿದ್ದು, ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ ಏರುತ್ತಿದೆ

ರಾಜನಾಥ್ ಸಿಂಗ್ ಭೇಟಿ ನೀಡಿ ಪರಿಶೀಲನೆ
ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಸಿಎಂ ಒಮರ್ ಅಬ್ದುಲ್ಲಾ ಆವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಕ್ಷಿಣ ಕಾಶ್ಮೀರದಲ್ಲಿ ಸುರಿಯುತ್ತಿರುವ ಸತತ ಮಳೆ
ಕಳೆದ ಹಲವು ದಿನಗಳಿಂದ ದಕ್ಷಿಣ ಕಾಶ್ಮೀರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪೂಂಚ್, ರಾಜೌರಿ ಮತ್ತು ರೀಸಿಯಲ್ಲಿ, ಜಮ್ಮುವಿನ ಕುಲ್‌ಗಾಮ್, ಶೋಪಿಯನ್‌ಗಳಲ್ಲಿನ ನದಿಗಳು ಅಪಾಯದ ಮಟ್ಟವನ್ನು ಮೀರಿಹರಿಯುತ್ತಿವೆ. ಈಗಾಗಲೇ ಈ ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಇದೇ ಕಣಿವೆಯಲ್ಲಿ ಈ ಅಫಘಾತ ಸಂಭವಿಸಿದ್ದು, ಹಲವರು ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ

ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಕ್ಕೆ
ಸುಮಾರು 3-4 ಸಾವಿರ ಕುಟುಂಬಗಳು ಮನೆಗಳನ್ನು ತೊರೆದು ಸುರಕ್ಷಿತ ಸ್ಥಳ ಅರಸಿಕೊಂಡು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಳೇ ಬರ್ಝಲ್ಗಾಹ್ ಪ್ರದೇಶ ಸಂಪೂರ್ಣವಾಗಿ ದ್ವೀಪದಂತಾಗಿದ್ದು, ಹೊರ ಪ್ರಪಂಚದ ಸಂಪರ್ಕದಿಂದ ಸಂಪೂರ್ಣವಾಗಿ ದೂರವಾಗಿವೆ.












Click it and Unblock the Notifications