ಚೀನೀ ಹೊಸ ವರ್ಷದ ಪಾರ್ಟಿ: ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿಯಲ್ಲಿ 9 ಮಂದಿ ಸಾವು
ಕ್ಯಾಲಿಫೋರ್ನಿಯಾ, ಜನವರಿ, 22: ಅಮೆರಿಕಾದ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್ ನಗರದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಲಾಸ್ ಏಂಜಲೀಸ್ ಪೊಲೀಸರು ತಿಳಿಸಿದ್ದಾರೆ.
ಲಾಸ್ ಏಂಜಲೀಸ್ ಡೌನ್‌ಟೌನ್‌ನಿಂದ ಪೂರ್ವಕ್ಕೆ ಸುಮಾರು 13 ಕಿಮೀ ದೂರದಲ್ಲಿರು ಪ್ರದೇಶದಲ್ಲಿ ಚಂದ್ರಮಾನ ಹೊಸ ವರ್ಷವನ್ನು ಆಚರಿಸಲು ಸಾವಿರಾರು ಜನರು ಸೇರಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾಗಿ ವರದಿಯಾಗಿದೆ.
ಏಷ್ಯನ್ ಜನಸಂಖ್ಯೆಯನ್ನು ಹೊಂದಿರುವ ಸುಮಾರು 60,000 ಜನರಿರುವ ನಗರವಾದ ಮಾಂಟೆರಿ ಪಾರ್ಕ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಹೊಸ ವರ್ಷಾಚರಣೆಯ ಒಂದು ಗಂಟೆಯ ನಂತರ ನೃತ್ಯ ನಡೆಯುತ್ತಿದ್ದ ಸ್ಥಳದಲ್ಲಿ ದುರ್ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ಶಂಕಿತ ವ್ಯಕ್ತಿಯ ಬಗ್ಗೆ ಪೊಲೀಸರು ಹೆಚ್ಚು ಮಾಹಿತಿ ನೀಡಿಲ್ಲ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ದೃಶ್ಯಗಳಲ್ಲಿ ತುರ್ತು ಸಿಬ್ಬಂದಿಯು ಗಾಯಾಳುಗಳನ್ನು ಸ್ಟ್ರೆಚರ್‌ಗಳಲ್ಲಿ ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವುದನ್ನು ಕಾಣಬಹುದಾಗಿದೆ. ಸಾವು ನೋವಿನ ಬಗ್ಗೆ ಅಧಿಕಾರಿಗಳು ಇನ್ನು ಸರಿಯಾಗಿ ಉತ್ತರಿಸದ ಕಾರಣ ಅನೇಕ ಮಂದಿಗೆ ಗಾಯಗಳಾಗಿರುವ ಸಾಧ್ಯತೆಯಿದೆ.
ಗುಂಡಿನ ದಾಳಿ ನಡೆಸಿರುವ ಆರೋಪಿಯು ಹಲವಾರು ಸುತ್ತಿನ ಮದ್ದುಗುಂಡುಗಳನ್ನು ಹೊಂದಿರುವ ಮೆಷಿನ್ ಗನ್ ಅನ್ನು ಹೊಂದಿದ್ದಾಗಿ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ. ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications