Get Updates
Get notified of breaking news, exclusive insights, and must-see stories!

ನಿಫಾ ವೈರಸ್; ಕೊಯಿಕ್ಕೋಡ್‌ನಲ್ಲಿ ಸೆ. 18ರಿಂದ ಆನ್‌ಲೈನ್ ಕ್ಲಾಸ್

ತಿರುವನಂತಪುರಂ, ಸೆಪ್ಟೆಂಬರ್ 17; ಕೇರಳದ ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ಕಂಡು ಬಂದಿರುವ ನಿಫಾ ವೈರಸ್ ಸೋಂಕು ಆತಂಕ ಮೂಡಿಸಿದೆ. ಸೋಂಕಿನ ಬಗ್ಗೆ ಪ್ರತಿದಿನ ಗಮನಹರಿಸಲು ರಾಜ್ಯ ಸರ್ಕಾರ 19 ವಿಶೇಷ ತಂಡಗಳನ್ನು ರಚನೆ ಮಾಡಿದೆ. ಅಕ್ಕಪಕ್ಕದ ಜಿಲ್ಲೆಗಳಿಗೆ ವೈರಸ್ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ನಿಫಾ ವೈರಸ್ ಭೀತಿ ಹಿನ್ನಲೆಯಲ್ಲಿ ಕೊಯಿಕ್ಕೋಡ್‌ ಜಿಲ್ಲಾಡಳಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೂಚನೆಯೊಂದನ್ನು ನೀಡಿದೆ. ಸೆಪ್ಟೆಂಬರ್ 18 ರಿಂದ ಮುಂದಿನ ಆದೇಶದ ತನಕ ಎಲ್ಲಾ ತರಗತಿಗಳನ್ನು ಆನ್‌ಲೈನ್ ಮೂಲಕ ನಡೆಸಬೇಕು ಎಂದು ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಸೋಂಕು ಹರಡುವಿಕೆ ತಡೆಯಲು ಮುಂದಾಗಿದೆ.

nifa-in-kerala-onlince-class

ಕೊಯಿಕ್ಕೋಡ್‌ ಜಿಲ್ಲಾ ಕಲೆಕ್ಟರ್ ಎ. ಗೀತಾ ಈ ಕುರಿತು ಶನಿವಾರ ಸುತ್ತೋಲೆ ಹೊರಡಿಸಿದ್ದಾರೆ. ಸರಣಿ ರಜೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗಬಾರದು. ಆದ್ದರಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಶಾಲೆಗಳಿಗೆ ರಜೆ; ಕೊಯಿಕ್ಕೋಡ್‌ ಜಿಲ್ಲಾಡಳಿತ ನಿಫಾ ವೈರಸ್ ಭೀತಿ ಇಂದ ಸೆಪ್ಟೆಂಬರ್ 24ರ ತನಕ ರಜೆ ಘೋಷಣೆ ಮಾಡಿತ್ತು. ಈಗ ಟ್ಯೂಷನ್ ಸೆಂಟರ್, ಕೋಚಿಂಗ್ ಕ್ಲಾಸ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಸೆಪ್ಟೆಂಬರ್ 18ರಿಂದ ಆನ್‌ಲೈನ್ ತರಗತಿಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ.

"ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಗೆ ಬರುವುದು ಬೇಡ. ಅಂಗನವಾಡಿ, ಮದರಸಾಗಳಿಗೆ ಸಹ ವಿದ್ಯಾರ್ಥಿಗಳು ಆಗಮಿಸುವಂತಿಲ್ಲ. ಮುಂದಿನ ಆದೇಶದ ತನಕ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಬೇಕು. ಆದರೆ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ" ಎಂದು ಸುತ್ತೋಲೆ ಸ್ಪಷ್ಟಪಡಿಸಿದೆ.

"ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ನಿಗದಿಯಾಗಿರುವ ಪರೀಕ್ಷೆಗಳನ್ನು ಮುಂದೂಡುವ ಕುರಿತು ಸರ್ಕಾರದ ಜೊತೆ ಮಾತುಕತೆ ನಡೆಸಿ ಶೀಘ್ರವೇ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ" ಎಂದು ಜಿಲ್ಲಾಡಳಿತ ಹೇಳಿದೆ.

ಭಾನುವಾರದಿಂದ ಪ್ರಸಿದ್ಧ ಧಾರ್ಮಿಕ ಕೇಂದ್ರ ಶಬರಿಮಲೆಯಲ್ಲಿ ತಿಂಗಳ ಪೂಜೆಗಳು ಆರಂಭವಾಗುತ್ತಿವೆ. ಕೇರಳ ಹೈಕೋರ್ಟ್‌ ನಿಫಾ ವೈರಸ್ ಭೀತಿ ಹಿನ್ನಲೆಯಲ್ಲಿ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಮಾರ್ಗಸೂಚಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೇರಳದ ಆರೋಗ್ಯ ಸಚಿವ ವೀಣಾ ಜಾರ್ಜ್ ಮಾತನಾಡಿ, "ಶನಿವಾರ ಮಧ್ಯಾಹ್ನದ ತನಕ ನಿಫಾ ವೈರಸ್‌ನ ಯಾವುದೇ ಹೊಸ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿಲ್ಲ. ಪರೀಕ್ಷೆಗಾಗಿ ಕಳುಹಿಸಲಾಗಿದ್ದ 11 ಮಾದರಿಗಳ ವರದಿಗಳು ನೆಗೆಟಿವ್ ಬಂದಿದೆ" ಎಂದು ತಿಳಿಸಿದ್ದಾರೆ.

"ನಿಫಾ ವೈರಸ್ ಪಾಸಿಟಿವ್ ಕಂಡು ಬಂದ ಪ್ರಕರಣಗಳಲ್ಲಿ ಇಬ್ಬರು ಖಾಸಗಿ ಆಸ್ಪತ್ರೆಗಳಲ್ಲಿ, ಇಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗಳಲ್ಲಿ ಇರುವ ಇತರ ರೋಗಿಗಳಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ" ಎಂದು ಸಚಿವರು ಹೇಳಿದ್ದಾರೆ.

"ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಚೇತರಿಸಿಕೊಳ್ಳುತ್ತಿದೆ. ಆದರೆ ಇನ್ನೂ ಸಹ ವೆಂಟಿಲೇಟರ್‌ನಲ್ಲಿದೆ. ಶನಿವಾರ ಆರೋಗ್ಯ ಇಲಾಖೆ ನಿಫಾ ವೈರಸ್ ಪತ್ತೆಯಾದ ಇಬ್ಬರ ಜೊತೆ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ಆರಂಭಿಸಿದೆ" ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ನಿಫಾ ವೈರಸ್ ಕುರಿತು ಪ್ರತಿದಿನ ಗಮನ ಹರಿಸಲು 19 ತಂಡಗಳನ್ನು ರಾಜ್ಯ ಆರೋಗ್ಯ ಇಲಾಖೆ ರಚನೆ ಮಾಡಿದೆ. ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ. ಸೋಂಕಿತರ ಸಂಪರ್ಕಿತರು, ಜಿಲ್ಲೆಯಲ್ಲಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಅವರನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲು ಆಂಬ್ಯುಲೆನ್ಸ್‌ ನಿಯೋಜನೆ ಮಾಡಲಾಗಿದೆ.

ರಾಜ್ಯದಲ್ಲಿ ಇದುವರೆಗೂ 6 ಜನರಿಗೆ ನಿಫಾ ವೈರಸ್ ಸೋಂಕು ಪತ್ತೆಯಾಗಿದೆ. ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕೊಯಿಕ್ಕೋಡ್‌ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 21 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ಸೋಂಕು ಪತ್ತೆಯಾದ 9 ಗ್ರಾಮ ಪಂಚಾಯಿತಿಗಳನ್ನು ಕ್ವಾರಂಟೈನ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಅಕ್ಕಪಕ್ಕದ ಗ್ರಾಮಗಳಿಗೆ, ಜಿಲ್ಲೆಗಳಿಗೆ ನಿಫಾ ವೈರಸ್ ಹರಡದಂತೆ ಎಚ್ಚರ ವಹಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+