ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ 10,000 ಕೋಟಿ

|
Google Oneindia Kannada News

ನವದೆಹಲಿ, ನವೆಂಬರ್.12: ಭಾರತದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜಗಾರ್ ಯೋಜನೆಗೆ 10,000 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕತೆಯನ್ನು ಸದೃಢಗೊಳಿಸುವುದು ಹಾಗೂ ಉದ್ಯೋಗ ಸೃಷ್ಟಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್ ಬಳಿಕ ಆರ್ಥಿಕತೆ ಪ್ರಬಲ ಚೇತರಿಕೆ: ನಿರ್ಮಲಾ ಸೀತಾರಾಮನ್ಲಾಕ್‌ಡೌನ್ ಬಳಿಕ ಆರ್ಥಿಕತೆ ಪ್ರಬಲ ಚೇತರಿಕೆ: ನಿರ್ಮಲಾ ಸೀತಾರಾಮನ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಿನ್ನೆಲೆ ಸ್ವಗ್ರಾಮಗಳಿಗೆ ವಾಪಸ್ಸಾದ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜಗಾರ್ ಯೋಜನೆಯನ್ನು ಜಾರಿಗೆ ತಂದಿದ್ದರು.

 Nirmala Sitharaman Announced Additional Rs.10,000 Crore For PM Garib Kalyan Rozgar Yojana

ಪ್ರಧಾನಿ ಜಾರಿಗೊಳಿಸಿದ ಯೋಜನೆಗೆ ಹೆಚ್ಚುವರಿ ಅನುದಾನ:

ದೇಶದ ಮೂಲೆಮೂಲೆಗಳಿಂದ ಸ್ವಗ್ರಾಮಕ್ಕೆ ವಲಸೆ ಹೋದ ಕಾರ್ಮಿಕರಿಗೆ ಉದ್ಯೋಗ ನೀಡುವುದಕ್ಕಾಗಿ ಜಾರಿಗೊಳಿಸಿದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜಗಾರ್ ಯೋಜನೆಗೆ ಹೆಚ್ಚುವರಿಯಾಗಿ 10,000 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಇದರ ಜೊತೆಗೆ ಗ್ರಾಮೀಣ ಭಾಗ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ರೈತರ ಅನುಕೂಲಕ್ಕಾಗಿ 65,000 ಕೋಟಿ ರೂಪಾಯಿ ರಸಗೊಬ್ಬರದ ಪ್ಯಾಕೇಜ್ ಘೋಷಿಸಿದ್ದಾರೆ. ಮುಂದಿನ ಬೆಳೆ ಸಮಯಕ್ಕೆ ಸರಿಯಾಗಿ ರಸಗೊಬ್ಬರವು ರೈತರಿಗೆ ತಲುಪುವಂತೆ ಮಾಡಲು ಈ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

English summary
Atmanirbhar Bharat 3.0: Central Minister Nirmala Sitharaman Announced Additional Rs.10,000 Crore For PM Garib Kalyan Rozgar Yojana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X