ರಾಹುಲ್‌ ಗಾಂಧಿಗೆ ನಿರ್ಮಲಾ ಸೀತಾರಾಮನ್ ಕ್ಲಾಸ್‌, ಕಾರಣವೇನು ?

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಇದೀಗ ರಾಹುಲ್‌ ಗಾಂಧಿಯ ಮೇಲೆ ಕೇಂದ್ರ ಬಿಜೆಪಿ ನಾಯಕರು ಮುಗಿಬಿದಿದ್ದಾರೆ. ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೆಂಡಾಮಂಡಲರಾಗಿದ್ದಾರೆ. ರಾಹುಲ್‌ ಗಾಂಧಿ ಅವರು ಈ ಬಾರಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಬಗ್ಗೆ ಮಾತ್ರ ಮಾತನಾಡದೆ ಭಾರತದ ರಾಜ್ಯ ಎನ್ನುವ ಹೆಸರನ್ನು ಬಳಸುವ ಮೂಲಕ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ರಾಹುಲ್‌ ಗಾಂಧಿ ಹೇಳಿದ್ದೇನು. ಇದಕ್ಕೆ ನಿರ್ಮಲಾ ಸೀತಾರಾಮನ್‌ ಅವರು ಕೊಟ್ಟ ತಿರುಗೇಟೇನು ಎನ್ನುವ ವಿವರ ಇಲ್ಲಿದೆ.

ರಾಹುಲ್‌ ಗಾಂಧಿ ಅವರ ಮಾತು ಚರ್ಚೆಯಾಗುವುದಕ್ಕಿಂತ ಇತ್ತೀಚಿನ ದಿನಗಳಲ್ಲಿ ವಿವಾದವಾಗಿದ್ದೇ ಹೆಚ್ಚು. ಇದೀಗ ರಾಹುಲ್‌ ಗಾಂಧಿ ಅವರ ಮತ್ತೊಂದು ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿದೆ. ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗರಂ ಆಗಿದ್ದಾರೆ. ವಿರೋಧ ಪಕ್ಷವು ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಮಾತ್ರ ಅಲ್ಲ ಈಗ ನಾವು ಭಾರತೀಯ ರಾಜ್ಯದ ವಿರುದ್ಧ (ಪ್ರಭುತ್ವದ ವಿರುದ್ಧವೇ) ಹೋರಾಡುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ರೀತಿ ಹೋರಾಟ ಮಾಡುತ್ತಿದ್ದರೆ. ಭಾರತೀಯ ಸಂವಿಧಾನವನ್ನು ಕೈಯಲ್ಲಿ ಹಿಂಡಿದುಕೊಂಡು ಯಾಕೆ ಓಡಾಡುತ್ತಿದ್ದಾರೆ ಎನ್ನುವುದು ಆಶ್ಚರ್ಯವಾಗುತ್ತಿದೆ ಎಂದಿದ್ದಾರೆ.

Nirmala Sitharaman Gives a lecture to Opposition Leader Rahul Gandhi

ರಾಹುಲ್‌ ಗಾಂಧಿ ಮಾತನಾಡಿರುವ ವಿಡಿಯೋವನ್ನು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ರೀಟ್ವಿಟ್‌ ಮಾಡಿರುವ ನಿರ್ಮಲಾ ಸೀತಾರಾಮನ್ ಅವರು, ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ವಿರೋಧ ಪಕ್ಷದ ನಾಯಕ ಈಗ ನಾವು ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತೀಯ ಪ್ರಭುತ್ವದ ವಿರುದ್ಧವೇ ಹೋರಾಡುತ್ತಿದ್ದೇವೆ ಎಂದು ಹೇಳಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ. ಮುಂದುವರಿದು ಹಾಗಾದರೆ ಕಾಂಗ್ರೆಸ್‌ ಹಾಗೂ ರಾಹುಲ್‌ ಗಾಂಧಿ ಅವರೇ ನೀವು ನಿಮ್ಮ ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಏಕೆ ಹಿಡಿದಿದ್ದೀರಿ ಎನ್ನುವುದು ನನಗೆ ಅಚ್ಚರಿಯನ್ನು ಉಂಟು ಮಾಡಿದೆ ಎಂದಿದ್ದಾರೆ.

ಘಟನೆಯ ಹಿನ್ನೆಲೆ ಏನು: ದೆಹಲಿಯ ಕೋಟ್ಲಾ ರಸ್ತೆಯಲ್ಲಿನ ಕಾಂಗ್ರೆಸ್‌ನ ಹೊಸ ಪ್ರಧಾನ ಕಚೇರಿಯ ಉದ್ಘಾಟನೆ ಸಮಾರಂಭದ ನಂತರ ರಾಹುಲ್‌ ಗಾಂಧಿ ಅವರು ಮಾತನಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಅದರಲ್ಲಿ ರಾಹುಲ್‌ ಗಾಂಧಿ ಅವರು, ನಾವು ನ್ಯಾಯಯುತ ಹೋರಾಟ ಮಾಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ಇದರಲ್ಲಿ ಯಾವುದೇ ನ್ಯಾಯ ಎನ್ನುವುದು ಇಲ್ಲ.

Nirmala Sitharaman Gives a lecture to Opposition Leader Rahul Gandhi

ನಾವು ಇದೀಗ ಬಿಜೆಪಿ ಅಥವಾ ಆರ್‌ಎಸ್‌ಎಸ್‌ ಎಂಬ ರಾಜಕೀಯ ಸಂಘಟನೆಯೊಂದಿಗೆ ಹೋರಾಟ ಮಾಡುತ್ತಿದ್ದೇವೆ ಎಂದು ನೀವು ಅಂದುಕೊಂಡಿದ್ದರೆ. ಇಲ್ಲಿ ಏನು ನಡೆಯುತ್ತಿದೆ ಎನ್ನುವುದು ನಿಮಗೆ ಅರ್ಥವಾಗಲ್ಲ. ನಾವು ಈಗ ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಪ್ರಭುತ್ವದ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ ಎಂದಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. ಎನ್ನುವ ರಾಜಕೀಯ ಸಂಘಟನೆಯೊಂದಿಗೆ ಅಷ್ಟೇ ಅಲ್ಲ.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಗಳನ್ನೂ ವಶಪಡಿಸಿಕೊಂಡಿವೆ. ಹೀಗಾಗಿ ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಪ್ರಭುತ್ವದ ವಿರುದ್ಧ ಹೋರಾಡುತ್ತಿದ್ದೇವೆ ಎಂದಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ ವಿರುದ್ಧವೂ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+