ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕ ಟಾಪ್

|
Google Oneindia Kannada News

ನವದೆಹಲಿ, ಅಕ್ಟೋಬರ್ 18: ಕೇಂದ್ರದ ನೀತಿ ಆಯೋಗ ಬಿಡುಗಡೆ ಮಾಡಿರುವ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ದಕ್ಷಿಣ ಭಾರತ ರಾಜ್ಯಗಳು ಮುಂಚೂಣಿಯಲ್ಲಿವೆ. ಅದರಲ್ಲಿಯೂ ಕರ್ನಾಟಕ ಮೊದಲ ಸ್ಥಾನದಲ್ಲಿದೆ.

ಎಲ್ಲ ಕ್ಷೇತ್ರಗಳಲ್ಲಿ ಆವಿಷ್ಕಾರ ಮಾಡುವ ಹೆಚ್ಚಿನ ಕ್ಷಮತೆಯನ್ನು ಹೊಂದಿ ಪಾಲನೆಗೆ ತಂದಿರುವ ರಾಜ್ಯಗಳ ಪಟ್ಟಿಯನ್ನು ಮೊದಲ ಬಾರಿಗೆ ನೀತಿ ಆಯೋಗವು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.

2024ರ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಮೋದಿ ವಿಶ್ವಾಸ2024ರ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಮೋದಿ ವಿಶ್ವಾಸ

ದಕ್ಷಿಣ ಭಾರತ ರಾಜ್ಯಗಳು ಆವಿಷ್ಕಾರ ಸೂಚ್ಯಂಕದಲ್ಲಿ ಉತ್ತಮ ಸ್ಥಾನದಲ್ಲಿರುವುದು ವಿಶೇಷ. ಕರ್ನಾಟಕ, ತಮಿಳುನಾಡು, ತೆಲಂಗಾಣ ರಾಜ್ಯಗಳು ಇದೇ ಪಟ್ಟಿಯಲ್ಲಿ ಇತರೆ ರಾಜ್ಯಗಳಿಗಿಂತ ಉತ್ತಮ ಸ್ಥಾನದಲ್ಲಿದೆ.

Niti Ayogs Innovation Index Karnataka Top In The List

ಮೊದಲ ಸ್ಥಾನದಲ್ಲಿ ಕರ್ನಾಟಕ ಇದೆ, ಎರಡನೇಯ ಸ್ಥಾನದಲ್ಲಿ ತಮಿಳುನಾಡು ಇದೆ. ಮೂರನೇ ಸ್ಥಾನದಲ್ಲಿ ಮಹಾರಾಷ್ಟ್ರ, ನಾಲ್ಕರಲ್ಲಿ ತೆಲಂಗಾಣ, ಐದನೇ ಸ್ಥಾನದಲ್ಲಿ ಹರಿಯಾಣ ಇದೆ.

ದೆಹಲಿ ಸಹ ಅತ್ಯುತ್ತಮ ಸ್ಥಾನದಲ್ಲಿದ್ದು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಅದು ಮೊದಲ ಸ್ಥಾನದಲ್ಲಿದೆ. ರಾಜ್ಯಗಳಿಗೆ ಹೋಲಿಸಿದರೂ ಸಹ ದೆಹಲಿ ಉತ್ತಮ ಅಂಕಗಳನ್ನು ಗಳಿಸಿದೆ.

English summary
Niti Ayog release innovation index list Karnataka is in the top. South India states doing well in the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X