ಟೋಲ್ ಸಂಗ್ರಹದಲ್ಲಿ ಮಹತ್ವದ ಬದಲಾವಣೆ: ವಾಹನ ಸವಾರರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಗುಡ್ನ್ಯೂಸ್
ನವದೆಹಲಿ: ಕೇಂದ್ರ ಸರ್ಕಾರವು ಟೋಲ್ ವ್ಯವಸ್ಥೆಯ ವಿಚಾರದಲ್ಲಿ ಭರ್ಜರಿ ಗುಡ್ನ್ಯೂಸ್ ನೀಡಿದೆ. ದೇಶದಾದ್ಯಂತ ಟೋಲ್ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವು ಹೊಸ ಮಾದರಿಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಫಾಸ್ಟ್ ಟ್ಯಾಗ್ ಅದಕ್ಕೊಂದು ಉದಾಹರಣೆಯಾಗಿದೆ. ಇದೀಗ ಮತ್ತೊಂದು ಅತ್ಯಾಧುನಿಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುತ್ತಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯಸಭೆಗೆ ತಿಳಿಸಿದ್ದಾರೆ. ಟೋಲ್ ವ್ಯವಸ್ಥೆಯಲ್ಲಿ ಹೊಸದಾಗಿ ಏನೆಲ್ಲಾ ಬದಲಾವಣೆಗಳು ಆಗಲಿವೆ ಎನ್ನುವ ವಿವರ ಇಲ್ಲಿದೆ.
ದೇಶದಾದ್ಯಂತ ವಾಹನಗಳ ಮುಕ್ತ ಸಂಚಾರ ಟೋಲ್ ವ್ಯವಸ್ಥೆ ಮತ್ತು ಕೃತಕ ಬುದ್ಧಿಮತ್ತೆ (Artificial Intelligence) - ಚಾಲಿತ ಹೆದ್ದಾರಿ ನಿರ್ವಹಣೆ ಸೇರಿದಂತೆ ಹಲವು ಹೊಸ ಬದಲಾವಣೆಗಳನ್ನು 2026ರ ಕೊನೆಯ ವೇಳೆಗೆ ಪೂರ್ಣಗೊಳಿಸುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಟೋಲ್ ಕೇಂದ್ರಗಳಲ್ಲಿ ಹೆಚ್ಚು ಕಾಯುವುದಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ಹೊಸ ಬದಲಾವಣೆ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಐ ಮತ್ತು ಫಾಸ್ಟ್ ಟ್ಯಾಗ್ ಜೊತೆಗೆ ಉಪಗ್ರಹ ಮೂಲಕ ವಾಹನಗಳ ನಂಬರ್ ಬೋರ್ಡ್ ಗುರುತಿಸಲಾಗುತ್ತದೆ. ನಾವು ವ್ಯವಸ್ಥೆಯನ್ನು ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.

ಟೋಲ್ನಲ್ಲಿ ಕಾಯುವುದಕ್ಕೆ ಮುಕ್ತಿ
ಇನ್ಮುಂದೆ ವಾಹನ ಸವಾರರು ಹಾಗೂ ಸಾರ್ವಜನಿಕರು ಟೋಲ್ಗಳಲ್ಲಿ ಹೆಚ್ಚು ಸಮಯ ಕಾಯುವ ಅವಶ್ಯಕತೆ ಇರುವುದಿಲ್ಲ. ಟೋಲ್ಗಳಲ್ಲಿ ಎಐ ಕೃತಕ ಬುದ್ಧಿಮತ್ತೆ ಅಳವಡಿಸಿಕೊಳ್ಳುವುದಕ್ಕೆ ಮುಂದಾಗಿದೆ. ಇದರಿಂದ ವಾಹನಗಳ ಸರಾಗ ಸಂಚಾರಕ್ಕೆ ಅನುಕೂಲವಾಗಲಿದೆ. ಪ್ರಯಾಣಿಕರು ಟೋಲ್ ಕೇಂದ್ರಗಳಲ್ಲಿ ಕಾಯುವ ಸಮಯದಲ್ಲಿ ಭಾರೀ ಇಳಿಕೆ ಆಗಲಿದೆ ಎಂದು ನಿತಿನ್ ಅವರು ಹೇಳಿದ್ದಾರೆ. ಮುಂದುವರಿದು ಕಾಯುವ ಸಮಯವನ್ನು ಕಡಿಮೆ ಮಾಡುವುದರಿಂದ ಪ್ರಯಾಣಿಕರಿಗೆ ಸಮಯದ ಉಳಿತಾಯದ ಜೊತೆ ಜೊತೆಗೆ ಇಂಧನ (Petrol and Diesel) ಉಳಿತಾಯವೂ ಆಗಲಿದೆ. ಅಲ್ಲದೇ 1,500 ಕೋಟಿ ರೂಪಾಯಿ ಮೊತ್ತದ ಇಂಧನ ಉಳಿಯವಾಗಲಿದೆ. ಅಲ್ಲದೇ ಸರ್ಕಾರಕ್ಕೆ 6,000 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇದೆ ಎಂದೂ ಹೇಳಿದ್ದಾರೆ.
ಹೊಸ ವ್ಯವಸ್ಥೆಯಿಂದ ಸಮದಯ ಉಳಿತಾಯ
ಇನ್ನು ಈಗ ಹೊಸದಾಗಿ ಜಾರಿ ಮಾಡಲು ಉದ್ದೇಶಿಸಲಾಗಿರುವ ಮಲ್ಟಿ - ಲೇನ್ ಫ್ರೀ ಫ್ಲೋ ಟೋಲ್ ಅತ್ಯುತ್ತಮ ವ್ಯವಸ್ಥೆಯಾಗಿದೆ. ಅಲ್ಲದೇ ಟೋಲ್ ಕಳ್ಳತನ ಕೊನೆಗೊಳ್ಳಲಿದ್ದು, ಜನರು ಟೋಲ್ ಕೇಂದ್ರಗಳಲ್ಲಿ ನಿಲ್ಲಬೇಕಾಗಿಲ್ಲ ಎಂದು ಗಡ್ಕರಿ ಹೇಳಿದ್ದಾರೆ. ಮೊದಲು ಟೋಲ್ ಕೇಂದ್ರಗಳಲ್ಲಿ ಹಣ ಪಾವತಿ ವ್ಯವಸ್ಥೆ ಇತ್ತು. ಈ ವ್ಯವಸ್ಥೆಯಲ್ಲಿ ವಾಹನ ಸವಾರರು 3 ರಿಂದ 10 ನಿಮಿಷ ಕಾಯಬೇಕಾಗಿತ್ತು.
ನಾವು ಫಾಸ್ಟ್ ಟ್ಯಾಗ್ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಇದರಿಂದ ಟೋಲ್ಗಳಲ್ಲಿ ನಿಲ್ಲುವ ಸಮಯವು 1 ನಿಮಿಷಕ್ಕಿಂತಲೂ ಕಡಿಮೆಯಾಗಿದೆ. ನಮ್ಮ ಆದಾಯವು ಕನಿಷ್ಠ 5,000 ಕೋಟಿ ರೂಪಾಯಿಯಷ್ಟು ಹೆಚ್ಚಾಗಿದೆ. ಈಗ ಫಾಸ್ಟ್ಟ್ಯಾಗ್ಗೆ ಬದಲಾಗಿ ಮಲ್ಟಿ ಲೇನ್ ಫ್ರೀ ಫ್ಲೋ ಟೋಲ್ ಬರಲಿದ್ದು. ಈಗ ಕಾರುಗಳು ಗರಿಷ್ಠ ಗಂಟೆಗೆ 80 ಕಿ.ಮೀ. ವೇಗದಲ್ಲಿ ಟೋಲ್ ಕೇಂದ್ರಗಳನ್ನು ದಾಟಲು ಸಾಧ್ಯವಾಗಲಿದೆ. ಅಲ್ಲದೇ ಟೋಲ್ ಕೇಂದ್ರದಲ್ಲಿ ಸಿಬ್ಬಂದಿಯ ಅವಶ್ಯಕತೆ ಇರುವುದಿಲ್ಲ ಎಂದೂ ಅವರು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಿಗೆ ಮಾತ್ರ
ಇನ್ನು ಈ ಎಲ್ಲಾ ಹೊಸ ನಿಯಮಗಳು ರಾಷ್ಟ್ರೀಯ ಹೆದ್ದಾರಿಗಳಿಗೆ ಮಾತ್ರ ಅನ್ವಯವಾಗಲಿದೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿಗಳ ಜವಾಬ್ದಾರಿ ಮಾತ್ರ ತೆಗೆದುಕೊಳ್ಳುತ್ತಿದೆ ಅಥವಾ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರಲಿವೆ. ರಾಜ್ಯ ಹೆದ್ದಾರಿಗಳು ಅಥವಾ ನಗರ ರಸ್ತೆಗಳಿಗೆ ಈ ಹೊಸ ಬದಲಾವಣೆಗಳು ಅನ್ವಯಿಸುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications