Nitin Nabin: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಿತಿನ್ ನಬಿನ್ ಅವರ ಪರವಾಗಿ ಒಟ್ಟು 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬಿಜೆಪಿ ಅಧಿಕೃತವಾಗಿ ತಿಳಿಸಿದೆ. ಹೀಗಾಗಿ ನಬಿನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜೆ.ಪಿ.ನಡ್ಡಾ ಅವರ ಅಧಿಕಾರವಧಿ ಮುಗಿದ ಹಿನ್ನೆಲೆ ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆ ನಡೆದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಎಂಬ ಒಂದೇ ಹೆಸರನ್ನು ಮಾತ್ರ ಪ್ರಸ್ತಾಪಿಸಲಾಗಿತ್ತು. ಯಾವುದೇ ಪ್ರತಿಸ್ಪರ್ಧಿ ನಾಮಪತ್ರ ಸಲ್ಲಿಕೆಯಾಗದ ಕಾರಣ, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕತ್ವಕ್ಕೆ ಹೊಸ ಅಧ್ಯಾಯ ಆರಂಭವಾಗಿದೆ. ಈ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗಿತ್ತು. ಪಕ್ಷದ ಸಂಘಟನಾ ಅನುಭವ, ರಾಜಕೀಯ ಹಿನ್ನೆಲೆ ಹಾಗೂ ಸಂಘಟನಾತ್ಮಕ ಹಿಡಿತವನ್ನು ಪರಿಗಣಿಸಿ ನಿತಿನ್ ನಬಿನ್ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಿತಿನ್ ನಬಿನ್ ಅವರ ಆಯ್ಕೆಯೊಂದಿಗೆ, ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಗಳು, ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ ಪಕ್ಷದ ಸಂಘಟನಾ ಬಲವರ್ಧನೆಗೆ ಸಂಬಂಧಿಸಿದ ಮಹತ್ವದ ತೀರ್ಮಾನಗಳನ್ನು ಅವರು ಮುನ್ನಡೆಸುವ ನಿರೀಕ್ಷೆಯಿದೆ. ಅವರ ನೇತೃತ್ವದಲ್ಲಿ ಬಿಜೆಪಿ ತನ್ನ ರಾಜಕೀಯ ಕಾರ್ಯತಂತ್ರವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ ಎಂಬ ವಿಶ್ವಾಸವನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ನಿತಿನ್ ನಬಿನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಅವರ ನಾಯಕತ್ವದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ನಿತಿನ್ ನಬಿನ್ ಯಾರು?
ಬಿಹಾರದ ರಾಜಕೀಯದಲ್ಲಿ ಬಹಳ ಪರಿಚಿತ ಹಾಗೂ ಪ್ರಭಾವಶಾಲಿ ನಾಯಕನಾಗಿ ಗುರುತಿಸಿಕೊಂಡಿರುವ ನಿತಿನ್ ನಬಿನ್, ಭಾರತೀಯ ಜನತಾ ಪಕ್ಷದೊಳಗೆ ದೀರ್ಘಕಾಲದಿಂದ ಸಕ್ರಿಯರಾಗಿದ್ದಾರೆ. ಪಾಟ್ನಾದಲ್ಲಿ ಜನಿಸಿದ ನಿತಿನ್, ಬಿಹಾರದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರ.
ತಮ್ಮ ತಂದೆಯ ಅಕಾಲಿಕ ನಿಧನದ ನಂತರ ರಾಜಕೀಯ ಹೊಣೆಗಾರಿಕೆ ಅವರ ಮೇಲೆ ಬಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ನಿತಿನ್ ನಬಿನ್ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟರು. ಆರಂಭಿಕ ಹಂತದಲ್ಲೇ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿದ ಅವರು, ನೆಲಮಟ್ಟದ ರಾಜಕಾರಣದ ಮೂಲಕ ತಮ್ಮದೇ ಆದ ಗುರುತನ್ನು ಕಟ್ಟಿಕೊಂಡರು.
ನಿತಿನ್ ನಬಿನ್ ಅವರಿಗೆ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಹಿನ್ನೆಲೆವೂ ಇದ್ದು, ಶಿಸ್ತಿನ ಕಾರ್ಯಪದ್ಧತಿ, ಸಂಘಟನಾ ಕೌಶಲ್ಯ ಮತ್ತು ತತ್ವನಿಷ್ಠ ರಾಜಕಾರಣ ಅವರ ಪ್ರಮುಖ ಬಲಗಳಾಗಿ ಗುರುತಿಸಲಾಗುತ್ತದೆ. ಇದೇ ಹಿನ್ನೆಲೆಯಿಂದಾಗಿ ಅವರು ಪಕ್ಷದೊಳಗೆ ಹಂತಹಂತವಾಗಿ ಮಹತ್ವದ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದಾರೆ. ಬಿಹಾರದಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಯುವ ಮುಖಂಡರನ್ನು ಮುಂದೆ ತರುವಲ್ಲಿ ನಿತಿನ್ ನಬಿನ್ ಪ್ರಮುಖ ಪಾತ್ರವಹಿಸಿದ್ದಾರೆ.

ಅವರ ರಾಜಕೀಯ ಶೈಲಿ ಮತ್ತು ಅನುಭವವನ್ನು ಗಮನಿಸಿ ಬಿಜೆಪಿ ನಾಯಕತ್ವವೂ ಅವರಿಗೆ ಹೆಚ್ಚಿನ ಹೊಣೆಗಾರಿಕೆಗಳನ್ನು ನೀಡುತ್ತಾ ಬಂದಿದೆ. ಇಂದು ಬಿಹಾರದ ರಾಜಕೀಯದ ಗಡಿಯನ್ನು ಮೀರಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಿತಿನ್ ನಬಿನ್, ಬಿಜೆಪಿ ನಾಯಕತ್ವದಲ್ಲಿ ಮಹತ್ವದ ಸ್ಥಾನ ಪಡೆದಿದ್ದು, ಅವರ ರಾಜಕೀಯ ಪಯಣ ಹೊಸ ಹಂತಕ್ಕೆ ತಲುಪಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications