ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ.1 ರಿಂದ ಬಿಹಾರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ

By Mahesh
|
Google Oneindia Kannada News

ಪಾಟ್ನ, ನ.26: ಬಿಹಾರದಲ್ಲಿ ಏ.1 ರಿಂದ ಮದ್ಯ ಮಾರಾಟವನ್ನು ನಿಷೇಧಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಚುನಾವಣೆಗೂ ಮುನ್ನ ಮಹಿಳಾ ಮತದಾರರಿಗೆ ನೀಡಿದ್ದ ಭರವಸೆಯನ್ನು ನಿತೀಶ್ ಉಳಿಸಿಕೊಂಡೀದ್ದಾರೆ.

ಪಾಟ್ನದಲ್ಲಿ ಗುರುವಾರ ನಡೆದ ಸಮಾರಂಭವೊಂದರಲ್ಲಿ ಮಾತನಾಡುತ್ತಾ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಬೇಕಾದ ಕ್ರಮ ಜರುಗಿಸುವಂತೆ ಮುಖ್ಯ ಕಾರ್ಯದರ್ಶಿ ಅಂಜನಿ ಕುಮಾರ್ ಸಿಂಗ್ ಅವರಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದರು.

Nitish Kumar announces liquor ban in Bihar from April 1

ಆದರೆ, ಮದ್ಯ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವೇ ಎಂಬ ಪ್ರಶ್ನೆ ಎದ್ದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸುಮಾರು 4,000 ಕೋಟಿ ರು ತೆರಿಗೆ ಮೊತ್ತ ಮದ್ಯ ಮಾರಾಟದಿಂದ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಗಳಿಸಿ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ನೀಡಿದ್ದ ಆಶ್ವಾಸನೆಯನ್ನು ಈಡೇರಿಸಲು ಜೆಡಿಯು-ಆರ್‌ಜೆಡಿ ಮೈತ್ರಿ ಸರ್ಕಾರ ಸಜ್ಜಾಗಿದೆ.

ಸಮಾಜವಾದಿ ಸಿದ್ಧಾಂತದ ಜಯಪ್ರಕಾಶ್ ನಾರಾಯಣ್‌ರ ಗರಡಿಯಲ್ಲಿ ಪಳಗಿದ ಜೆಡಿಯು ಮುಖ್ಯಸ್ಥ ನಿತೀಶ್‌ಕುಮಾರ್ ಅವರ ಕ್ರಮಕ್ಕೆ ಮಿತ್ರ ಪಕ್ಷ ಆರ್ ಜೆ ಡಿ ಬೆಂಬಲ ನೀಡುವ ನಿರೀಕ್ಷೆಯಿದೆ. ಮಹಿಳಾ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಮದ್ಯ ಮಾರಾಟ ನಿಷೇಧಕ್ಕೆ ಮುಂದಾಗಿದ್ದಾರೆ.

English summary
Sale of alcohol in Bihar will be banned from April 1 next year, Chief Minister Nitish Kumar has said, keeping a promise made to voters before the Assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X