ಕೋವಿಂದ್ ಗೆ ಬೆಂಬಲ: ನಿತೀಶ್, ಲಾಲು ನಡುವೆ ಬಿರುಕು?

Posted By:
Subscribe to Oneindia Kannada

ಪಾಟ್ನಾ, ಜೂನ್ 20: ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ವತಿಯಿಂದ ರಾಮ್ ನಾಥ್ ಕೋವಿಂದ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿರುವುದು ಎಲ್ಲರಿಗೂ ತಿಳಿದ ವಿಚಾರ.

ಆದರೆ, ಇದೇ ವಿಚಾರವೀಗ ಬಿಹಾರದ ಇಬ್ಬರು ರಾಜಕೀಯ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ ಎನ್ನುತ್ತಿವೆ ಕೆಲ ಮೂಲಗಳು.

Nitish Kumar And Lalu Yadav Divided Over BJP Choice For President

ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದ ಸರ್ಕಾರಕ್ಕೆ ಲಾಲು ಪ್ರಸಾದ್ ಯಾದವ್ ಅವರ ಆರ್ ಜೆಡಿ ಪಕ್ಷದ ಬೆಂಬಲವಿದೆ. ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯವು ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದು ಈಗ ಸದ್ಯದ ಮಟ್ಟಿಗೆ ಕುತೂಹಲ ಕೆರಳಿಸಿದೆ.

2015ರ ಆಗಸ್ಟ್ ನಿಂದ ಜೂನ್ 17, 2017ರವರೆಗೂ ಬಿಹಾರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿರುವ ಕೋವಿಂದ್ ಅವರನ್ನು ರಾಷ್ಟ್ರಪತಿ ಹುದ್ದೆಗೇರಿಸಲು ನಿತೀಶ್ ಕುಮಾರ್ ಅವರಿಗೆ ಒಲವಿದೆ.

ಆದರೆ, ಕೋವಿಂದ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಬೆಂಬಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಇಷ್ಟವಿಲ್ಲ. ಇದು, ನಿತೀಶ್ ಹಾಗೂ ಲಾಲು ಅವರ ನಡುವಿನ ಸ್ನೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In Bihar, where Mr Kovind has served as Governor since August 2015 and where the two main partners in government, Chief Minister Nitish Kumar and Lalu Yadav, have a propensity for disagreement.
Please Wait while comments are loading...