Nitish Kumar: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಬಿಹಾರ ರಾಜಕೀಯ ಚಿತ್ರಣದಲ್ಲಿ ಬದಲಾವಣೆ?
ಪಾಟ್ನಾ, ಜೂನ್. 04: ಲೋಕಸಭಾ ಚುನಾವಣೆ ಬಳಿಕ ಬಿಹಾರ ರಾಜಕೀಯ ಚಿತ್ರಣ ಮತ್ತೊಮ್ಮೆ ಬದಲಾಗಲಿದೆ. ಸದ್ಯ ಹರಿದಾಡುತ್ತಿರುವ ಸುದ್ದಿಗಳನ್ನು ಕೇಳಿದರೆ, ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬಳಿಕ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ "ಅತಿ ಶೀಘ್ರದಲ್ಲಿ" ರಾಜೀನಾಮೆ ನೀಡಬಹುದು.
ಆದರೆ ನಿತೀಶ್ ಕುಮಾರ್ ನಿಜವಾಗಿಯೂ ಸಿಎಂ ಪಟ್ಟದಿಂದ ಕೆಳಗಿಳಿದರೆ, ಮತ್ತೊಮ್ಮೆ ರಾಜ್ಯದಲ್ಲಿ ಸಿಎಂ ಬದಲಾಗಲಿದ್ದಾರೆ. ಹೆಚ್ಚು ಸ್ಥಾನಗಳನ್ನು ಹೊಂದಿರುವ ತೇಜಸ್ವಿ ಯಾದವ್ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿ ಆಡಳಿತಕ್ಕೆ ಬರುತ್ತಾರಾ ಎಂಬ ಪ್ರಶ್ನೆ ಉದ್ಭವವಾಗಿದೆ. ನಿತೀಶ್ ಕುಮಾರ್ ಪದೇ ಪದೆ ಮೈತ್ರು ಬದಲಾಯಿಸುತ್ತಾ ಬಿಹಾರ ರಾಜಕೀಯವನ್ನು ಮತ್ತಷ್ಟು ಕೆಳಕ್ಕೆ ತಳ್ಳಿದ್ದಾರೆ. ಒಮ್ಮೆ ಬಿಜೆಪಿ, ಒಮ್ಮೆ ಆರ್‌ಜೆಡಿ ಎಂದು ಪದೇ ಪದೇ ತಮ್ಮ ದಾರಿ ಬದಲಾಯಿಸುತ್ತಿದ್ದಾರೆ.

ಆದರೆ ನಿತೀಶ್ ಕುಮಾರ್ 'ರಾಜೀನಾಮೆ' ಕುರಿತು ಚರ್ಚಿಸುತ್ತಿರುವಾಗಲೇ ಹಿಂದಿನಂತೆ ಭಿನ್ನವಾಗಿ, ವಯಸ್ಸಾದ ಜೆಡಿಯು ನಾಯಕ ಎನ್‌ಡಿಎಗೆ ಅಂಟಿಕೊಳ್ಳುತ್ತಾರೆ ಎನ್ನಲಾಗಿದೆ. ಕೊಯೆರಿ ಜಾತಿಗೆ ಸೇರಿದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಕುಮಾರ್ ಅವರಂತಹ ಒಬಿಸಿ ಅಭ್ಯರ್ಥಿಗಳನ್ನು ಸಿಎಂ ಸ್ಥಾನದ ಅಭ್ಯರ್ಥಿ ಮಾಡುವ ಮೂಲಕ ಬಿಹಾರದಲ್ಲಿ ಬಿಜೆಪಿ ಮುಖ್ಯಮಂತ್ರಿಗೆ ದಾರಿ ಮಾಡಿಕೊಡುತ್ತಾರೆ ಎನ್ನಲಾಗಿದೆ.
ಈ ಬಾರಿ ನಿತೀಶ್ ಕುಮಾರ್ ಅವರನ್ನು ಎನ್‌ಡಿಎಗೆ ಸೇರಿಸಿಕೊಳ್ಳಲು ಇದೇ ಷರತ್ತು ಎಂದು ಹೇಳಲಾಗಿದೆ. ಬಿಹಾರದಲ್ಲಿ ಸೀಟು ಹಂಚಿಕೆ ಒಪ್ಪಂದದಲ್ಲಿ ಬಿಜೆಪಿ 17 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು ಜೆಡಿಯು 16 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.
ರಾಜೀನಾಮೆ ನೀಡ್ತಾರಾ ನಿತೀಶ್ ಕುಮಾರ್!?
ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ಬಿಜೆಪಿ ಅಥವಾ ಜೆಡಿಯುನ ಯಾರೂ ಪ್ರತಿಕ್ರಿಯಿಸಿಲ್ಲ. ಬದಲಾಗಿ, ಹೆಚ್ಚಿನವರು ಇದನ್ನು ಗಾಸಿಪ್ ಎಂದು ತಳ್ಳಿಹಾಕಿದ್ದಾರೆ. ಆದರೆ, ನಿತೀಶ್ ಕುಮಾರ್ ಭಾನುವಾರ ನವದೆಹಲಿಗೆ ಆಗಮಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇದನ್ನು ಮುಖ್ಯಮಂತ್ರಿ ಮತ್ತು ಸಚಿವರ ನಡುವಿನ ಸೌಜನ್ಯದ ಭೇಟಿ ಎನ್ನಬಹುದು, ಆದರೆ, ವದಂತಿಗಳ ಸಮಯದಲ್ಲಿ ಈ ಭೇಟಿ ಮತ್ತಷ್ಟು ಹೊಸ ಚರ್ಚೆಗಳಿಗೆ ಎಡೆ ಮಾಡಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications