Nitish Kumar: ಕೇಂದ್ರ ಬಿಜೆಪಿ ವಿರುದ್ಧ ವಿಪಕ್ಷಗಳನ್ನು ಒಂದುಗೂಡಿಸಲು ಸಜ್ಜಾದ ಬಿಹಾರ ಸಿಎಂ
ನವದೆಹಲಿ, ಮೇ 21: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ತೊಡಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೊಡಗಿದ್ದಾರೆ. ಈ ನಿಟ್ಟಿನಲ್ಲಿ ಅವರು ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಿವಿಲ್ ಲೈನ್ಸ್ ನಿವಾಸಕ್ಕೆ ಭೇಟಿ ನೀಡಿದ ಮಹತ್ವ ಚರ್ಚೆ ನಡೆಸಿದ್ದಾರೆ.
Bihar CM Nitish Kumar meets Delhi CM Arvind Kejriwal at his (Arvind Kejriwal's) residence in Delhi pic.twitter.com/4ngQeVKfeK
— ANI (@ANI) May 21, 2023
ಕೇಸರಿ ಪಕ್ಷ ಬಿಜೆಪಿ ಕಳೆದ ಬಾರಿ ಪಡೆದಿದ್ದ ರಾಜ್ಯಗಳನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಒಂದೊಂದಾಗಿ ಕಾಂಗ್ರೆಸ್ ಪಾಲಾಗುತ್ತಿವೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಸಹ ಕಾಂಗ್ರೆಸ್ 136 ಸ್ಥಾನ ಪಡೆದು ಅಧಿಕಾರಕ್ಕೆ ಬಂದಿದೆ. ಇದರಿಂದ ಬಿಜೆಪಿ ಅಧಿಕಾರದಿಂದ ದೂರು ಉಳಿಯುವಂತಾಗಿದೆ.

ಶನಿವಾ ಕರ್ನಾಟಕದ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಮಾಣವಚನ ಸ್ವೀಕಾರಕ್ಕೆ ಆಗಮಿಸಿದ್ದ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಬೃಹತ್ ಕಾರ್ಯಕ್ರಮಕ್ಕೆ ಸಾಕ್ಷಿಯಾದರೂ. ಇದರ ಬೆನ್ನಲ್ಲೇ ಅವರು ಭಾನುವಾರ ಎಎಪಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಲೋಕಸಭಾ ಚುನಾವಣೆ: ಈಗಿನಿಂದಲೇ ಪ್ರತಿಪಕ್ಷಗಳ ಒಗ್ಗೂಡಿಸುವ ಪ್ರಯತ್ನ
ಸಿಎಂ ಅರವಿಂದ ಕೇಜ್ರಿವಾಲ್ ಭೇಟಿ ಮುನ್ನ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಝಾ ದೆಹಲಿಯಲ್ಲಿರುವ ಬಿಹಾರ ಸಿಎಂ ನಿವಾಸಕ್ಕೆ ಆಗಮಿಸಿದ್ದರು. ರಾಷ್ಟ್ರ ರಾಜಕಾರಣದಲ್ಲಿ ದೇಶದ ಹಿತಾಸಕ್ತಿಗಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕುರಿತು ಚರ್ಚಿಸಿದರು.
ಕರ್ನಾಟಕದಲ್ಲಿ ಉದಾಹರಣೆ ನೀಡಿದರು ನಿತಿಶ್ ಕುಮಾರ್, ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗೆಲುವು ಸಾಧಿಸಿದೆ. ದೇಶದಲ್ಲಿ ಅದೇ ರೀತಿ ವಿರೋಧ ಪಕ್ಷಗಳು ಒಗ್ಗೂಡಿದರೆ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬಹುದು. ಅದಕ್ಕಾಗಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಇನ್ನೇನು 2024 ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಇದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ (BJP) ವಿರುದ್ಧ ವಿರೋಧ ಪಕ್ಷಗಳ ಬಣವನ್ನು ಗಟ್ಟಿಗೊಳಿಸುವ ಉದ್ದೇಶ ಸಂಯುಕ್ತ ಜನತಾ ದಳ (JDU) ಹೊಂದಿದೆ. ಈ ಕಾರಣಕ್ಕೆ ನಾಯಕ ನಿತೀಶ್ ಕುಮಾರ್ ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ ರಣತಂತ್ರ ಹೆಣೆಯುತ್ತಿದ್ದಾರೆ. ಅದಕ್ಕಾಗಿ ವಿವಿಧ ಪಕ್ಷಗಳ ನಾಯಕ ಸಹಕಾರ ಕೋರಿದ್ದಾರೆ ಎಂದು ತಿಳಿದು ಬಂದಿದೆ.
2024ರಲ್ಲಿ ಎದರಾಗಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಂದೊಳ್ಳೆಯ ಅವಕಾಶ ಕೂಡಿ ಬಂದಿದೆ. ಈ ಸಂಬಂಧ ಪ್ರತಿ ಪಕ್ಷಗಳು ಒಂದಾಗಬೇಕಿದೆ ಎಂದು ಅವರು ಮಾತುಕತೆ ವೇಳೆ ಪ್ರತಿಪಾದಿಸಿದರು.












Click it and Unblock the Notifications