ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ಬೆಳಿಗ್ಗೆ 10 ಕ್ಕೆ ನಿತೀಶ್ ಪ್ರಮಾಣವಚನ: ಸುಶೀಲ್ ಮೋದಿ ಡಿಸಿಎಂ

|
Google Oneindia Kannada News

ಪಾಟ್ನಾ, ಜುಲೈ 27: ಬಿಹಾರ ರಾಜಕೀಯದಲ್ಲಿ ನಿನ್ನೆ(ಜುಲೈ 26) ನಡೆದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ರಾಜೀನಾಮೆ ನೀಡಿದ ಮರುದಿನವೇ(ಜುಲೈ 27) ಅವರು ಮತ್ತೆ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಇಂದು ಬೆಳಗ್ಗೆ 10 ಗಂಟೆಗೆ ನಿತೀಶ್ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಮೊದಲು ಅವರು ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಈಗಾಗಲೇ 132 ಶಾಸಕರ ಬಲವನ್ನು ಹೊಂದಿರುವ ನಿತೀಶ್ ಕುಮಾರ್ ಅವರನ್ನು ಬಿಹಾರ ಗವರ್ನರ್ ಕೇಸರಿ ನಾಥ್ ತ್ರಿಪಾಠಿ ಸರ್ಕಾರ ರಚನೆಗೆ ಆಹ್ವಾನಿಸಿದ್ದಾರೆ.

Nitish Kumar to swear in as Bihar CM at 10 am on July 27th

ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಮಗ, ಬಿಹಾರದ ಉಪಮುಖ್ಯಮಂತ್ರಿಯಾಗಿದ್ದ ತೇಜಸ್ವಿ ಯಾದವ್ ಅವರ ವರ್ತನೆಗೆ ಬೇಸತ್ತು ನಿತೀಶ್ ರಾಜೀನಾಮೆ ನೀಡಿದ್ದರು. ಅವರ ಕ್ರಮವನ್ನು ಸ್ವಾಗತಿಸಿದ್ದ ಬಿಜೆಪಿ, ಜೆಡಿಯು ಗೆ ಬೆಂಬಲ ನೀಡುವುದಾಗಿ ಹೇಳಿತ್ತು. ಬಿಜೆಪಿ ಬೆಂಬಲದೊಂದಿಗೆ ಇದೀಗ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ.

English summary
Nitish Kumar and Bharatiya Janata Party (BJP) leader Sushil Modi will take oath as Bihar Chief Minister and Deputy Chief Minister respectively on July 27th at 10 a.m.The confirmation of the timing came from Sushil Modi, who said that they have submitted a letter, with support of 132 MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X