Jammu & Kashmir: ಕಣಿವೆ ರಾಜ್ಯದ ಹೊಸ ಮುಖ್ಯಮಂತ್ರಿ ಪದಗ್ರಹಣಕ್ಕೆ ಮಹೂರ್ತ ಫಿಕ್ಸ್

ನವದೆಹಲಿ, ಅಕ್ಟೋಬರ್ 14: ದಶಕದ ನಂತರ ಪ್ರಸಕ್ತ ಸಾಲಿನಲ್ಲಿ ಒಟ್ಟು ಮೂರು ಹಂತಗಳಲ್ಲಿ ನಡೆದ ವಿಧಾನಸಭಾ ಚುನಾವಣೆ 2024 ಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದು ಬೀಗಿದೆ. ಈ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರು ಕಣಿವೆ ರಾಜ್ಯದ ಮುಖ್ಯಮಂತ್ರಿ ಎಂದು ಈಗಾಗಲೇ ಘೋಷಣೆ ಆಗಿದೆ. ಇದೀಗ ಅವರು ಯಾವತ್ತು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಕುತೂಹಲ ಇತ್ತು, ಅದಕ್ಕೀಗ ತೆರೆ ಬಿದ್ದಿದೆ.

ಸೋಮವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕಳುಹಿಸಿರುವ ಪತ್ರವನ್ನು ಓಮರ್ ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣ (X) ದಲ್ಲಿ ಹಂಚಿಕೊಂಡು ಅಧಿಕೃತ ಮಾಹಿತಿ ನೀಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆಹ್ವಾನ ಪತ್ರ ಸ್ವೀಕರಿಸಿರುವುದು ಸಂತಸ ಸಂಗತಿಯಾಗಿದೆ. ಎಲ್‌ಜಿ ಅವರು ತಮ್ಮ ಕಚೇರಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಹೊಸ ಸರ್ಕಾರ ರಚನೆಗೆ ನೀಡಿರುವ ಆಹ್ವಾನ ಪತ್ರ ನೀಡಿದ್ದಾರೆ ಎಂದು ಓಮರ್ ಅವರು ಮಾಹಿತಿ ನೀಡಿದ್ದಾರೆ.

NK Party Omar Abdullah will Take Oaths as A New CM of Jammu and Kashmir on October 16th

ಲೆಫ್ಟಿನೆಂಟ್ ಗವರ್ನರ್ ಅವರ ಪತ್ರದ ಪ್ರಕಾರ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಓಮರ್ ಅಬ್ದುಲ್ಲಾ ಅವರು ಇದೇ ಅಕ್ಟೋಬರ್ 16ರಂದು ಜಮ್ಮು ಕಾಶ್ಮೀರದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂಬಂಧಿಸಿದಂತೆ ಶಿಷ್ಟಾಚಾರದ ಪ್ರಕಾರ, ಲೆಪ್ಟಿನಂಟ್ ಗವರ್ನರ್ ಅವರಿಗೆ ಸರ್ಕಾರ ರಚನೆಯ ಆಹ್ವಾನ ಪತ್ರ ಹಸ್ತಾಂತರಿಸಿದ್ದಾರೆ.

ಇನ್ನೂ ಈ ಆಹ್ವಾನಕ್ಕೂ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂಡೆಯಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಇತ್ತೀಚೆಗೆ ಅಂತ್ಯಗೊಂಡಿದ್ದು, ಅದರಲ್ಲಿ ಜೆಕೆಎನ್‌ಕೆ ಪಕ್ಷ ಬಹುಮತ ಪಡೆದ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.

ಹೊಸ ಸರ್ಕಾರ ರಚನೆ, ರಾಷ್ಟ್ರಪತಿ ಆಳ್ವಿಕೆ ಅಂತ್ಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯ ಭಾನುವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರ ಫಲಿತಾಂಶ
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳ ಚುನಾವಣೆ ನಡೆದಿದ್ದು, ಇದೇ ಅಕ್ಟೋಬರ್ 8ರಂದು ಫಲಿತಾಂಶ ಹೊರ ಬಿದ್ದಿದೆ. ಈ ಚುನಾವಣೆಯಲ್ಲಿ 90 ಸೀಟುಗಳಲ್ಲಿ ಜಮ್ಮುವಿನ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಒಟ್ಟು 42 ಸೀಟುಗಳನ್ನು ಗೆದ್ದುಕೊಂಡಿತು. ಬಿಜೆಪಿ 29 ಸೀಟು ಪಡೆಯುವ ಮೂಲಕ ಪ್ರಬಲ ಪ್ರತಿಪಕ್ಷವಾಗಿ ಹೊರ ಹೊಮ್ಮಿದೆ. ಇನ್ನು ಕಾಂಗ್ರೆಸ್ 06 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಜೆಕೆಡಿಪಿ ಪಕ್ಷ 4, ಜೆಪಿಸಿ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ ಎಂದು ಚುನಾವಣೆ ಆಯೋಗ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+