ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ಪ್ರತ್ಯೇಕ ಕೋವಿಡ್ ಲಸಿಕೆ ಡೋಸ್‌ ಪಡೆಯುವುದರಿಂದ ಏನಾಗುತ್ತೆ: ಕೇಂದ್ರ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಮೇ 28: ಎರಡು ಪ್ರತ್ಯೇಕ ಕೋವಿಡ್ ಲಸಿಕೆಯ ಡೋಸ್‌ಗಳನ್ನು ಪಡೆದಾಗ ಯಾವುದೇ ವ್ಯತಿರಿಕ್ತ ಪರಿಣಾಮವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಆದರೆ, ಈ ದೃಢವಾದ ಅಭಿಪ್ರಾಯಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆ ಅಗತ್ಯವಾಗಿದೆ, ಅಸ್ತಿತ್ವದಲ್ಲಿರುವ ಪ್ರೋಟೋಕಾಲ್ ಪ್ರಕಾರ ಒಬ್ಬ ವ್ಯಕ್ತಿಗೆ ನೀಡಲಾಗುವ ಎರಡೂ ಡೋಸ್ ಗಳು ಒಂದೇ ಲಸಿಕೆಯಾಗಿರಬೇಕು ಎಂದು ಸ್ಪಷ್ಟಪಡಿಸಿದೆ.

 ಒಂದೇ ವ್ಯಕ್ತಿಗೆ 2 ಬಗೆಯ ಲಸಿಕೆ ಇದೇನಿದು ಯುಪಿ ಸರ್ಕಾರದ ಎಡವಟ್ಟು? ಒಂದೇ ವ್ಯಕ್ತಿಗೆ 2 ಬಗೆಯ ಲಸಿಕೆ ಇದೇನಿದು ಯುಪಿ ಸರ್ಕಾರದ ಎಡವಟ್ಟು?

ಉತ್ತರ ಪ್ರದೇಶದ ಸಿದ್ದಾರ್ಥ ನಗರ ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಶೀಲ್ಡ್ ಮೊದಲ ಡೋಸ್ ಪಡೆದಿದ್ದ 20 ಗ್ರಾಮಸ್ಥರಿಗೆ ಕೋವಾಕ್ಸಿನ್ ಎರಡನೇ ಡೋಸ್ ನೀಡಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ರೀತಿಯ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶ ಘಟನೆ

ಉತ್ತರ ಪ್ರದೇಶ ಘಟನೆ

ಉತ್ತರ ಪ್ರದೇಶ ಘಟನೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಒಂದು ವೇಳೆ ಅಂತಹ ಘಟನೆ ಸಂಭವಿಸಿದ್ದರೆ, ಇದು ವ್ಯಕ್ತಿಯ ಆತಂಕಕ್ಕೆ ಕಾರಣವಾಗಬಾರದು, ಆದರೆ ಅದೇ ಲಸಿಕೆಯ ಎರಡನೇ ಡೋಸ್ ನೀಡುವಂತೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಸೂಚಿಸಿದರು.

ಘಟನೆ ಬಗ್ಗೆ ತನಿಖೆ ಅಗತ್ಯವಿದೆ ಎಂದು ಹೇಳಿರುವ ನೀತಿ ಆಯೋಗದ ಸದಸ್ಯ ವಿಕೆ ಪೌಲ್, ಬೇರೆ ಕೋವಿಡ್ ಲಸಿಕೆಯಎರಡನೇ ಡೋಸ್ ತೆಗೆದುಕೊಂಡರೆ ಯಾವುದೇ ಗಮನಾರ್ಹ ಪ್ರತಿಕೂಲ ಪರಿಣಾಮ ಸಾಧ್ಯತೆ ಇಲ್ಲ.

ಎರಡು ವಿಭಿನ್ನ ಲಸಿಕೆಗಳ ಡೋಸ್

ಎರಡು ವಿಭಿನ್ನ ಲಸಿಕೆಗಳ ಡೋಸ್

ಎರಡು ವಿಭಿನ್ನ ಲಸಿಕೆಗಳ ಡೋಸ್ ತೆಗೆದುಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಬಹುದು. ಆದರೆ, ದೃಢ ನಿರ್ಧಾರಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆಯ ಅಗತ್ಯವಿದೆ ಎಂದರು.

ಭಾರತದಲ್ಲಿ ಕೊರೊನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,11,298 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,847 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 3,15,235ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,19,907ಕ್ಕೆ ಏರಿಕೆಯಾಗಿದೆ.

ಈವರೆಗೂ ಚೇತರಿಸಿಕೊಂಡವರ ಸಂಖ್ಯೆ

ಈವರೆಗೂ ಚೇತರಿಸಿಕೊಂಡವರ ಸಂಖ್ಯೆ

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,83,135 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,46,33,951ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 21,57,857 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 33,69,69,352 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
Any significant adverse effect is unlikely if the second dose of a different COVID-19 vaccine is administered, but reaching a firm opinion on this will need more scrutiny and understanding, the Centre said on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X