ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ವೀಟ್ಸ್: ಜಮ್ಮು ಕಾಶ್ಮೀರ ರಾಜ್ಯವಲ್ಲವಂತೆ, ಯಾರು ಏನಂದ್ರು?

|
Google Oneindia Kannada News

ಬೆಂಗಳೂರು, ಆಗಸ್ಟ್ 05: ಒಂದು ರಾಷ್ಟ್ರ, ಒಂದು ಸಂವಿಧಾನ, ಒಂದು ರಾಷ್ಟ್ರಗೀತೆ ಹಾಗೂ ಒಂದು ರಾಷ್ಟ್ರಧ್ವಜ ಎಂಬ ಪರಿಕಲ್ಪನೆಗೆ ವ್ಯತಿರಿಕ್ತವಾದ ಪರಿಸ್ಥಿತಿ ಹೊಂದಿದ್ದ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಇನ್ಮುಂದೆ ರಾಜ್ಯವಾಗಿರುವುದಿಲ್ಲ. ಸಂವಿಧಾನ ಪರಿಚ್ಛೇದ 370 ರದ್ದು ಸೇರಿದಂತೆ ಮೋದಿ ಸರ್ಕಾರ ಇಂದು ತೆಗೆದುಕೊಂಡಿರುವ ಐತಿಹಾಸಿಕ ನಿರ್ಣಯಕ್ಕೆ ಸಾರ್ವಜನಿಕರಲ್ಲಿ ಬಹುತೇಕ ಮಂದಿ ಕೇಂದ್ರ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಬಂದಿರುವ ಪ್ರತಿಕ್ರಿಯೆಗಳನ್ನು ಇಲ್ಲಿ ಓದಿರಿ...

"ಇತರೆ ರಾಜ್ಯಗಳಿಗಿಂತ ಹೆಚ್ಚಿನ ಅನುದಾನ ಹಾಗೂ ಕಾಳಜಿ ಕಣಿವೆ ರಾಜ್ಯದ ಮೇಲೆ ಎಲ್ಲಾ ಸರ್ಕಾರಗಳು ನೀಡುತ್ತಾ ಬಂದರೂ ಅಲ್ಲಿನ ಪರಿಸ್ಥಿತಿ ಸುಧಾರಿಸಿಲ್ಲ. ತಾತ್ಕಾಲಿಕವಾಗಿ ಜಾರಿಗೆ ಬಂದ ಪರಿಚ್ಛೇದ 370(3) ರ ಅಗತ್ಯ ಈಗ ಇಲ್ಲ" ಎಂದು ಪರಿಗಣಿಸಿ, ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಸಂವಿಧಾನದ ಪರಿಚ್ಛೇದ 370(3) ರದ್ದುಗೊಳಿಸುವ ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಮಂಡನೆ ಮಾಡಿದರು. ಇದಕ್ಕೆ ಈಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಂಕಿತವೂ ಸಿಕ್ಕಿದೆ.

"ಈ ನಿಬಂಧನೆಯು ಕೇವಲ ತಾತ್ಕಾಲಿಕವಾಗಿರುವ ಕಾರಣ ಯಾವುದೇ ಸಂದರ್ಭದಲ್ಲಿ ರದ್ದುಪಡಿಸಬಹುದು. ಈ ವಿಧಿ ರಚಿಸುವಾಗಲೇ ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಯಾವಾಗ ಬೇಕಾದರೂ ರದ್ದುಪಡಿಸಬಹುದೆಂದು ಸ್ಪಷ್ಟಪಡಿಸಲಾಗಿದೆ. ಭಾರತದ ರಾಷ್ಟ್ರಪತಿಯವರು ಒಂದು ಸಾರ್ವಜನಿಕ ಅಧಿಸೂಚನೆ ಹೊರಡಿಸುವ ಮೂಲಕ ರದ್ದುಪಡಿಸುವ ಅಧಿಕಾರ ಹೊಂದಿದ್ದಾರೆ" ಎಂಬ ಅಂಶವೂ ಬಿಜೆಪಿಗೆ ವರವಾಗಿ ಪರಿಣಮಿಸಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

'ಇತಿಹಾಸದ ಮರು ನಿರ್ಮಾಣ': ಜೆ&ಕೆ ವಿಶೇಷ ಸ್ಥಾನಮಾನ ರದ್ದು'ಇತಿಹಾಸದ ಮರು ನಿರ್ಮಾಣ': ಜೆ&ಕೆ ವಿಶೇಷ ಸ್ಥಾನಮಾನ ರದ್ದು

ಜಮ್ಮುಮತ್ತು ಕಾಶ್ಮೀರ ಹೊಸ ಕೇಂದ್ರಾಡಳಿತ ಪ್ರದೇಶವಾಗಿದ್ದರೂ ವಿಧಾನಸಭೆ ಹೊಂದಲಿದೆ, ಲಡಾಕ್ ಹೊಸ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಯಾವುದೇ ವಿಧಾನಸಭೆ ಹೊಂದಿರುವುದಿಲ್ಲ. ಇದರ ಜೊತೆಗೆ ಅರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಶೇ10ರಷ್ಟು ಮೀಸಲಾತಿ ಒದಗಿಸುವ ವಿಧೇಯಕವನ್ನು ಅಮಿತ್ ಶಾ ಮಂಡಿಸಿದ್ದಾರೆ.

ವಿಶೇಷ ಕಾನೂನುಗಳು ಅನುಷ್ಠಾನದಲ್ಲಿತ್ತು.

ವಿಶೇಷ ಕಾನೂನುಗಳು ಅನುಷ್ಠಾನದಲ್ಲಿತ್ತು.

ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ಡಿಸೆಂಬರ್ 9, 1947 ರಿಂದ ನವೆಂಬರ್ 26, 1949ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ಜನವರಿ 26, 1950ರಂದು ಜಾರಿಗೆ ಬಂದಿತು. ಸಂವಿಧಾನದ 370ನೇ ಪರಿಚ್ಛೇದ ಜಾರಿ ಇದ್ದ ಕಾಶ್ಮೀರದಲ್ಲಿ ಪೌರತ್ವ, ನಿರ್ದಿಷ್ಟ ಆಸ್ತಿಯ ಮಾಲೀಕತ್ವ, ಮೂಲಭೂತ ಹಕ್ಕುಗಳ ಅನುಷ್ಠಾನ ಮುಂತಾದ ವಿಚಾರಗಳಲ್ಲಿ ವಿಶೇಷ ಕಾನೂನುಗಳು ಅನುಷ್ಠಾನಗೊಂಡಿತ್ತು.

ಜಮ್ಮು ಕಾಶ್ಮೀರದಲ್ಲಿ ಹೊರ ರಾಜ್ಯದ ಯಾರೂ ಆಸ್ತಿ ಹಾಗೂ ಭೂಮಿ ಖರೀದಿಸುವಂತಿಲ್ಲ. ಈ ನಿಯಮವೇ ಜಮ್ಮು ಕಾಶ್ಮೀರವು ಭಾರತದಿಂದ ಬೇರೆ ಎಂಬ ಭಾವನೆ ಬೆಳೆಯಲು ಕಾರಣವಾಗಿತ್ತು.

Kashmir Issue LIVE: 370ನೇ ವಿಧಿ ರದ್ದತಿಗೆ ರಾಷ್ಟ್ರಪತಿ ಅಂಕಿತKashmir Issue LIVE: 370ನೇ ವಿಧಿ ರದ್ದತಿಗೆ ರಾಷ್ಟ್ರಪತಿ ಅಂಕಿತ

ಇಸ್ರೇಲ್ ಮಾದರಿ ಕಾಶ್ಮೀರದಲ್ಲೂ ಜಾರಿ

ಇಸ್ರೇಲ್ ಮಾದರಿ ಕಾಶ್ಮೀರದಲ್ಲೂ ಜಾರಿ ಮಾಡಿದ ಮೋದಿ, ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲ್ ಹೇಗೆ ತನ್ನ ಹಕ್ಕುಸ್ವಾಮ್ಯ ಹೊಂದಿದೆಯೋ ಅದೇ ರೀತಿ ಕಾಶ್ಮೀರದಲ್ಲಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಮೂಲಕ ಬೇರೆ ರಾಜ್ಯದವರು ಕಾಶ್ಮೀರಿ ಜನರನ್ನು, ಅಲ್ಲಿನ ಸಂಪನ್ಮೂಲವನ್ನು ಲೂಟಿ ಮಾಡುವ ರಹದಾರಿಯನ್ನು ಮೋದಿ ಸರ್ಕಾರ ನೀಡುತ್ತಿದೆ ಎಂದು ಆರೋಪಿಸಲಾಗಿದೆ.

ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?

ಕಣಿವೆ ರಾಜ್ಯದ ಅಭಿವೃದ್ಧಿಗೆಪೂರಕ

ಜಮ್ಮು ಕಾಶ್ಮೀರದಲ್ಲಿ ಹೊರ ರಾಜ್ಯದ ಯಾರೂ ಆಸ್ತಿ ಹಾಗೂ ಭೂಮಿ ಖರೀದಿಸುವಂತಿಲ್ಲ. ಈ ನಿಯಮವೇ ಜಮ್ಮು ಕಾಶ್ಮೀರವು ಭಾರತದಿಂದ ಬೇರೆ ಎಂಬ ಭಾವನೆ ಬೆಳೆಯಲು ಕಾರಣವಾಗಿತ್ತು. ಬೇರೆಯವರು ಬಂಡವಾಳ ತೊಡಗಿಸಲು ಅವಕಾಶವಿಲ್ಲದ ಕಾರಣ ಇಲ್ಲಿ ನಿರುದ್ಯೋಗ ತಾಂಡವವಾಡುತ್ತಿತ್ತು. ಇದಕ್ಕಾಗಿಯೇ ಸ್ಥಳೀಯರು ಶಸ್ತ್ರ ಕೈಗೆತ್ತಿಕೊಂಡು ಉಗ್ರರಾಗುತ್ತಿದ್ದಾರೆಂದು ವರದಿ ಬಂದಿತ್ತು. ಈಗ ಇದೆಲ್ಲವೂ ಬದಲಾಯಿಸುವ ಕಾಲ ಬಂದಿದೆ ಎಂದು ಟ್ವೀಟ್.

ಕಳೆದ ವರ್ಷ ರದ್ದುಪಡಿಸಲ್ಲ ಎಂದಿದ್ದ ಬಿಜೆಪಿ

ಕಳೆದ ವರ್ಷ ರದ್ದುಪಡಿಸಲ್ಲ ಎಂದಿದ್ದ ಬಿಜೆಪಿ, ಪರಿಚ್ಛೇದ 370ರದ್ದುಗೊಳಿಸುವುದನ್ನು ಕಳೆದ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿ ಸಾಧಿಸಿಕೊಂಡಿದೆ. ಈ ಬಗ್ಗೆ ನಡೆದ ಘಟನಾವಳಿಗಳ ಬಗ್ಗೆ ಚುರುಮುರಿಯಲ್ಲಿ ಲೇಖನ ಬಂದಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಇಂದು ಆರ್ಟಿಕಲ್ 370, 35ಎ ಎಂದರೇನು? ಇದರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಏನು ಲಾಭವಾಗಿದೆ? ಏನು ನಷ್ಟ, ಮುಂದಿನ ನಡೆ ಏನು? ಎಂಬುದು ಹೆಚ್ಚು ಹುಡುಕಾಟ ನಡೆದಿದೆ.

English summary
A mixed reactions were observed on Twitter for no Article 370 and Home Minister Amit Shah announcement that Ladakh & J&K will be separate Union Territories.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X