ಮನ್ ಕೀ ಬಾತ್ ಮೇಲೆ ನಿರ್ಬಂಧವಿಲ್ಲ: ಆಯೋಗ

ನವದೆಹಲಿ, ಸೆ.16: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕೀ ಬಾತ್' ಕಾರ್ಯಕ್ರಮಕ್ಕೆ ನಿರ್ಬಂಧ ಹೇರಬೇಕು ಎಂದು ಕಾಂಗ್ರೆಸ್ ಮಾಡಿರುವ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.

ಕಾಂಗ್ರೆಸ್ ಮಾಡಿರುವ ಮನವಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ. ಅದರೆ, ಯಾವುದೇ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ ಎಂದು ಆಯೋಗ ತಕ್ಷಣದ ಪ್ರತಿಕ್ರಿಯೆ ನೀಡಿದೆ.[ಬಿಹಾರ ಚುನಾವಣಾ ವೇಳಾಪಟ್ಟಿ]

No blanket ban on mann ki baat

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಥವಾ ಹೊಸ ಯೋಜನೆ ಬಗ್ಗೆ ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ ಪಕ್ಷದಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ.[ಬಿಹಾರದ ಸೀಟು ಹಂಚಿಕೆ ಲೆಕ್ಕಾಚಾರ, ಎಲ್ ಜೆಪಿ ಅಪಸ್ವರ]

243 ಸದಸ್ಯ ಬಲದ ಬಿಹಾರ ವಿಧಾನಸಭೆಯ ಅಧಿಕಾರಾವಧಿ ನವೆಂಬರ್ 29ಕ್ಕೆ ಮುಕ್ತಾಯವಾಗಲಿದ್ದು, ಅದಕ್ಕೆ ಮುನ್ನ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸೆ.15ರ ಮಂಗಳವಾರ ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಒಟ್ಟು 5 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 8ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. (ಪಿಟಿಐ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+