ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಮುಂದುವರಿಕೆ

Subscribe to Oneindia Kannada

ಅಹಮದಾಬಾದ್, ಡಿಸೆಂಬರ್ 22: ಗುಜರಾತ್ ನಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಬಿಜೆಪಿ ತೀರ್ಮಾನಿಸಿದೆ. ಹೀಗಾಗಿ ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಮುಂದುವರಿಯಲಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಮುಂದೆಯೂ ನಿತಿನ್ ಪಟೇಲ್ ಅವರೇ ಇರಲಿದ್ದಾರೆ.

No change in Gujarat, Vijay Rupani will continue as chief minister of the state

ಇಂದು ಗಾಂಧಿನಗರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ಉಪನಾಯಕರಾಗಿ ನಿತಿನ್ ಪಟೇಲ್ ಆಯ್ಕೆಯಾಗಿದ್ದಾರೆ.

ಬಿಜೆಪಿ ಶಾಸಕರ ಜತೆ ಸಮಾಲೋಚನೆ ನಡೆಸಿದ ನಂತರ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಈ ಘೋಷಣೆ ಮಾಡಿದ್ದಾರೆ. ಸಭೆಯಲ್ಲಿ ವೀಕ್ಷಕರಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೆಂದರ್ ಯಾದವ್ ಕೂಡ ಉಪಸ್ಥಿತರಿದ್ದರು.

ಗುಜರಾತ್ ಮುಖ್ಯಮಂತ್ರಿ ಹುದ್ದೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ಮನ್ಸುಖ್ ಮಾಂಡವಿಯಾ ಹೆಸರು ಕೇಳಿ ಬಂದಿತ್ತು. ಕೊನೆಗೆ ಯಥಾಸ್ಥಿತಿ ಕಾಪಾಡಲು ಬಿಜೆಪಿ ತೀರ್ಮಾನಿಸಿದ್ದು ಹಾಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೇ ಮಣೆ ಹಾಕಿದೆ.

ವಿಜಯ್ ರೂಪಾನಿ ಮೊನ್ನೆ ನಡೆದ ಗುಜರಾತ್ ಚುನಾವಣೆಯಲ್ಲಿ ರಾಜ್ ಕೋಟ್ ಪಶ್ಚಿಮ ಕ್ಷೇತ್ರದಿಂದ ವಿಧಾನಸಭೆಗೆ ಮರು ಆಯ್ಕೆಯಾಗಿದ್ದಾರೆ. ಮೆಹ್ಸಾನಾ ಕ್ಷೇತ್ರದಿಂದ ನಿತಿನ್ ಪಟೇಲ್ ಪ್ರಯಾಸದ ಜಯ ಸಾಧಿಸಿ ಮತ್ತೆ ಶಾಸಕರಾಗಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The BJP has decided to continue Vijay Rupani as Chief Minister of Gujarat and Nitin Patel to be the Deputy Chief Minister. BJP observers for Gujarat, Finance Minister Arun Jaitley and Saroj Pandey announced their names after consulting BJP MLAs in Ahmedabad. BJP National General Secretary Bhupinder Yadav was also present.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ