ಬಿಜೆಪಿ ಸರ್ಕಾರಕ್ಕೆ ಸಂಕಷ್ಟ; ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್!
ಇಂಪಾಲ, ಜೂನ್ 18 : ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ಮಣಿಪುರದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ. ಬುಧವಾರ ಮೂವರು ಶಾಸಕರು ರಾಜೀನಾಮೆ ನೀಡಿದ ಬಳಿಕ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.
Recommended Video
2017ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಬಿಜೆಪಿ ಸರ್ಕಾರಕ್ಕೆ ಎನ್‌ಪಿಪಿಯ 9 ಶಾಸಕರು ಬೆಂಬಲ ನೀಡಿದ್ದರು. ಬುಧವಾರ ಅವರು ಬೆಂಬಲ ವಾಪಸ್ ಪಡೆದಿದ್ದರು.
'ಸೆಕ್ಯುಲರ್ ಪ್ರೋಗ್ರೆಸೀವ್ ಫ್ರಂಟ್' ಎಂಬ ಹೊಸ ಮೈತ್ರಿಕೂಟ ರಾಜ್ಯದಲ್ಲಿ ರಚನೆಯಾಗಿದೆ. ಕಾಂಗ್ರೆಸ್ ಮತ್ತು ಎನ್‌ಪಿಪಿ ಈ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದೆ. ತ್ರಿಣಮೂಲ ಕಾಂಗ್ರೆಸ್‌ನ ಒಬ್ಬರು, ಒಬ್ಬರು ಪಕ್ಷೇತರ ಶಾಸಕರು ಈ ಮೈತ್ರಿಕೂಟ ಬೆಂಬಲಿಸಿದ್ದಾರೆ.

ಮಣಿಪುರದ ಮಾಜಿ ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಈ ಮೈತ್ರಿಕೂಟವನ್ನು ಮುನ್ನೆಡೆಸುತ್ತಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿರುವ ಮೈತ್ರಿಕೂಟದ ನಾಯಕರು ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡಿದೆ. ತಕ್ಷಣ ವಿಶೇಷ ಅಧಿವೇಶನ ಕರೆಯಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯಪಾಲರು ವಿಶೇಷ ಅಧಿವೇಶನ ಕರೆದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ಗೆ ಬಹುಮತ ಸಾಬೀತು ಮಾಡಲು ಸೂಚನೆ ನೀಡಿದರೆ ಬಿಜೆಪಿಗೆ ಸಂಕಷ್ಟ ಎದುರಾಗಲಿದೆ. ಶಾಸಕರ ಬಲವಿಲ್ಲದೇ ಅಲ್ಪ ಮತಕ್ಕೆ ಕುಸಿದಿರುವ ಸರ್ಕಾರ ಪತನಗೊಳ್ಳಲಿದೆ.
60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿ 21, ಕಾಂಗ್ರೆಸ್ 28, ಎನ್‌ಪಿಎಫ್ 4, 1 ಟಿಎಂಸಿ, ಒಬ್ಬರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್‌ಗೆ ಇತರ ಪಕ್ಷಗಳ ಜೊತೆ ಸೇರಿ ಮೈತ್ರಿಕೂಟ ಮಾಡಿಕೊಂಡಿದ್ದು ಬಿಜೆಪಿಗೆ ಸಂಕಷ್ಟ ತಂದಿದೆ.












Click it and Unblock the Notifications