ಅವಿಶ್ವಾಸ ನಿರ್ಣಯ ಮಂಡನೆ: ಬಿಜೆಪಿಗೆ ಶಿವಸೇನಾ ಬೆಂಬಲ

ನವದೆಹಲಿ, ಜುಲೈ 19: ಲೋಕಸಭೆಯಲ್ಲಿ ಶುಕ್ರವಾರ ನಡೆಯಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಶಿವಸೇನಾ ಪ್ರಕಟಿಸಿದೆ.

ಅವಿಶ್ವಾಸ ನಿರ್ಣಯ ಮಂಡನೆಗೆ ವಿರುದ್ಧವಾಗಿ ಮತ ಚಲಾಯಿಸುವಂತೆ ಶಿವಸೇನಾ ತನ್ನ ಎಲ್ಲ ಸಂಸದರಿಗೆ ವಿಪ್ ಜಾರಿ ಮಾಡಿದೆ.

ಇದಕ್ಕೂ ಮುನ್ನ ಬಿಜೆಪಿಗೆ ಬೆಂಬಲ ನೀಡುವಂತೆ ಕೋರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಕರೆ ಮಾಡಿ ಮಾತನಾಡಿದ್ದರು ಎನ್ನಲಾಗಿದೆ.

no confidence motion shivasena backs nda

ಉದ್ಧವ್ ಅವರು ತಮಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು. ಈ ವಿಚಾರದಲ್ಲಿ ಉದ್ಧವ್ ಠಾಕ್ರೆ ಅವರು ನೀಡುವ ನಿರ್ದೇಶನವನ್ನು ಪಾಲಿಸುವುದಾಗಿ ಸೇನಾದ ಸಂಸದ ಸಂಜಯ್ ರಾವತ್ ತಿಳಿಸಿದ್ದರು.

ಅವಿಶ್ವಾಸ ನಿರ್ಣಯಕ್ಕೆ ಎಐಎಡಿಎಂಕೆ ಬೆಂಬ ನೀಡುವುದಿಲ್ಲ ಎಂಬ ಸುಳಿವನ್ನು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನೀಡಿದ್ದಾರೆ.

ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ರಚನೆಗೆ ಆಗ್ರಹಿಸಿ ಈ ಹಿಂದೆ ಎಐಎಡಿಎಂಕೆ ಸಂಸದರು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದಾಗ ಯಾವ ಪಕ್ಷವೂ ತಮಿಳುನಾಡನ್ನು ಬೆಂಬಲಿಸಿರಲಿಲ್ಲ.

ಈಗ ಆಂಧ್ರಪ್ರದೇಶವು ತನ್ನ ಸಮಸ್ಯೆಯನ್ನು ಮುಂದಿಟ್ಟುಕೊಂಡು ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದೆ. ಆಗ ಯಾವ ರಾಜ್ಯ ಮುಂದೆ ಬಂದಿತ್ತು? ಯಾರೂ ಬಂದಿರಲಿಲ್ಲ. ಇದನ್ನು ನೀವು ಅರ್ಥಮಾಡಿಕೊಳ್ಳಬೇಕು ಎಂದು ಪಳನಿಸ್ವಾಮಿ ಅವರು ಅವಿಶ್ವಾಸ ನಿರ್ಣಯವನ್ನು ಬೆಂಬಲಿಸುವುದಿಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಎಐಎಡಿಎಂಕೆ ಪಕ್ಷವು ಲೋಕಸಭೆಯಲ್ಲಿ 37 ಸ್ಥಾನಗಳನ್ನು ಹೊಂದಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ಬಳಿಕ ಮೂರನೇ ಅತಿ ದೊಡ್ಡ ಪಕ್ಷವಾಗಿದೆ.

ಬಿಜೆಪಿಯ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದ್ದು, ಶುಕ್ರವಾರ ನಿರ್ಣಯ ಮಂಡನೆಯಾಗಲಿದೆ.

ಬಿಜೆಪಿ ಕೂಡ ಸರ್ಕಾರದ ಪರವಾಗಿ ಮತ ಚಲಾಯಿಸಲು ತನ್ನ ಎಲ್ಲ ಸದಸ್ಯರಿಗೂ ವಿಪ್ ಜಾರಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+