ಕಾಂಗ್ರೆಸ್ ಜತೆ ಮೈತ್ರಿ ಇಲ್ಲ, 2026ರ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ
ನವದೆಹಲಿ, ಫೆಬ್ರವರಿ 11: ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ, 2026 ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಘೋಷಿಸಿದರು. ಬಿಜೆಪಿಯನ್ನು ಸೋಲಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನ ತಿರಸ್ಕರಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಟಿಎಂಸಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನಕ್ಕೂ ಮುನ್ನ ಪಕ್ಷದ ಶಾಸಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಹುಮತ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕಾಂಗ್ರೆಸ್ ಸಹಾಯ ಮಾಡಲಿಲ್ಲ, ಹರ್ಯಾಣದಲ್ಲಿ ಎಎಪಿ ಕಾಂಗ್ರೆಸ್ಗೆ ಸಹಾಯ ಮಾಡಲಿಲ್ಲ, ಆದ್ದರಿಂದ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಎಲ್ಲರೂ ಒಗ್ಗಟ್ಟಾಗಿರಬೇಕು. ನಾವು ಸಹ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ, 2026 ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ದೆಹಲಿ ಚುನಾವಣೆಗೂ ಮುನ್ನವೇ ದೆಹಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿತ್ತು. ಅಲ್ಲದೇ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕಾಂಗ್ರೆಸ್ ಸಹಾಯ ಮಾಡಲಿಲ್ಲ, ಹರ್ಯಾಣದಲ್ಲಿ ಎಎಪಿ ಕಾಂಗ್ರೆಸ್ಗೆ ಸಹಾಯ ಮಾಡಲಿಲ್ಲ, ಆದ್ದರಿಂದ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಎಲ್ಲರೂ ಒಗ್ಗಟ್ಟಾಗಿರಬೇಕು. ಆದರೆ ಬಂಗಾಳದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ, ನಾವು ಒಂಟಿಯಾಗಿ ಹೋರಾಡುತ್ತೇವೆ ಎಂದು ಮಮತ ಬ್ಯಾನರ್ಜಿ ಹೇಳಿದ್ದಾರೆ.
ಒಟ್ಟು ಸ್ಥಾನಗಳಲ್ಲಿ ಮೂರನೇ ಎರಡರಷ್ಟು ಹೆಚ್ಚು ಗೆದ್ದು ನಮ್ಮ ಪಕ್ಷವು ಸತತ ನಾಲ್ಕನೇ ಅವಧಿಗೆ ಸರ್ಕಾರ ರಚಿಸುತ್ತದೆ. ಪಕ್ಷದ ಮೂಲವೊಂದರ ಪ್ರಕಾರ, ಸಮಾನ ಮನಸ್ಕ ಪಕ್ಷಗಳು ವಿರೋಧ ಪಕ್ಷದ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ಬ್ಯಾನರ್ಜಿ ಶಾಸಕರಿಗೆ ತಿಳಿಸಿದರು. ಇಲ್ಲದಿದ್ದರೆ, ರಾಷ್ಟ್ರಮಟ್ಟದಲ್ಲಿ ಬಿಜೆಪಿಯನ್ನು ತಡೆಯುವುದು ಇಂಡಿ ಬಣಕ್ಕೆ ಕಷ್ಟವಾಗುತ್ತದೆ.
ಮತದಾರರ ಪಟ್ಟಿಯಲ್ಲಿ ವಿದೇಶಿಯರ ಹೆಸರುಗಳನ್ನು ಸೇರಿಸಲು ಬಿಜೆಪಿ ಪ್ರಯತ್ನಿಸಬಹುದು. ಹೀಗಾಗಿ ಪಕ್ಷದ ಶಾಸಕರು ಜಾಗರೂಕರಾಗಿರಬೇಕೆಂದು ಮಮತಾ ಬ್ಯಾನರ್ಜಿ ಹೇಳಿದರು. ಪಕ್ಷದ ಸಂಘಟನಾ ರಚನೆಯನ್ನು ರಾಜ್ಯ ಮಟ್ಟದಿಂದ ಬೂತ್ ಮಟ್ಟಕ್ಕೆ ಪುನರ್ರಚಿಸಲಾಗುವುದು ಎಂದು ಅವರು ಸಭೆಗೆ ಮಾಹಿತಿ ನೀಡಿದ್ದಾರೆ. ಪಡಿತರ ಹಗರಣ ಪ್ರಕರಣದಲ್ಲಿ ಮಾಜಿ ಆಹಾರ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರ ಬಂಧನದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಕ್ರಿಯಿಸಿದ್ದು, ಬಂಧನವನ್ನು ಅನ್ಯಾಯ. ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು.
ಇತ್ತೀಚೆಗೆ ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳಿಂದ ಪಕ್ಷದ ನಾಯಕತ್ವಕ್ಕೆ ಅಪಾರ ಮುಜುಗರ ಉಂಟಾಗಿರುವ ಪಕ್ಷದ ಕೆಲವು ಶಾಸಕರಿಗೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.












Click it and Unblock the Notifications